ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಫೋನಿನ ಫಸ್ಟ್ ಸೇಲ್!..ಬೆಲೆ ಎಷ್ಟು?
ಸ್ಯಾಮ್‌ಸಂಗ್ ಸಂಸ್ಥೆ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ನೂತನ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಆಯೋಜಿಸಿರುವ ಬಿಗ್ ಬಿಲಿಯನ್ ಡೇಸ್ ನಲ್ಲಿ ಮೊದಲ ಬಾರಿ ಸೇಲ್ ಶುರು ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆರಂಭಿಕ ವೇರಿಯಂಟ್ ಬೆಲೆಯು 1ಆಗಿದ್ದು, ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ 15,499ರೂ.ಗೆ ಲಭ್ಯವಾಗಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್ ಇಂದು ಮೊದಲ ಮಾರಾಟ ಪ್ರಾರಂಭಿಸಲಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಹೊಂದಿದ್ದು, ಅವುಗಳು ಕ್ರಮವಾಗಿ 6GB + 64GB ಸ್ಟೋರೇಜ್ ಹಾಗೂ 6GB + 128GB ಸ್ಟೋರೇಜ್ ವೇರಿಯಂಟ್ ಹೊಂದಿವೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.

ಡಿಸ್‌ಪ್ಲೇ ರಚನೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಇನ್ಫಿನಿಟಿ-ಯು ಡಿಸ್‌ಪ್ಲೇಯನ್ನು ಹೊಂದಿದೆ. ಇದು 420 ನಿಟ್ ಬ್ರೈಟ್‌ನೆಶ್ ಅನ್ನು ಹೊಂದಿದ್ದು, ಉತ್ತಮ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ವಿಡಿಯೋ ಕರೆಗಳು ಹಾಗೂ ವಿಡಿಯೋ ವೀಕ್ಷಣೆಗೆ ಯೋಗ್ಯ ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ.

ಪ್ರೊಸೆಸರ್ ಕಾರ್ಯ
ಗ್ಯಾಲಕ್ಸಿ F41 ಆಕ್ಟಾ-ಕೋರ್-ಎಕ್ಸಿನೋಸ್ 9611 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಒನ್ ಯುಐ ಕೋರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 6GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಹೊಂದಿದ್ದು, ಇದು 123 ಡಿಗ್ರಿಗಳಷ್ಟು ವೀಕ್ಷಣಾ ಕ್ಷೇತ್ರವನ್ನು ಹೊಂದಿದೆ. ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಲೈವ್ ಫೋಕಸ್ ಅನ್ನು ಬೆಂಬಲಿಸಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಗ್ಯಾಲಕ್ಸಿ F41 ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 15W ಚಾರ್ಜರ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ 5.0, ಜಿಪಿಎಸ್ ಮತ್ತು ಯುಎಸ್ಬಿ ಟೈಪ್-ಸಿ ಅನ್ನು ಬೆಂಬಲಿಸಲಿದೆ. ಜೊತೆಗೆ 3.5mm ಆಡಿಯೊ ಜ್ಯಾಕ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್ 6GB RAM + 64GB ಮಾದರಿಗೆ 15,499ರೂ. ಬೆಲೆಯನ್ನು ಹೊಂದಿದೆ. ಇನ್ನು 6GB RAM+ 128GB ಮಾದರಿಯ ಬೆಲೆ ರೂ. 16,499 ಆಗಿದೆ. ಇಂದು ಫ್ಲಿಪ್ಕಾರ್ಟ್ ಮೂಲಕ ಮೊದಲ ಬಾರಿಗೆ ಮಾರಾಟ ಆರಂಭಿಸಲಿದೆ.


Click it and Unblock the Notifications








