ಶೀಘ್ರದಲ್ಲೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್‌ ಲಾಂಚ್‌!

|

ದಕ್ಷಿಣ ಕೋರಿಯಾದ ಜನ್ರಪಿಯ ಸ್ಮಾರ್ಟ್‌ಫೋನ್‌ ಕಂಪೆನಿ ಸ್ಯಾಮ್‌ಸಂಗ್ ಈಗಾಗಲೇ ತನ್ನ ಫೋಲ್ಡ್, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಮತ್ತು ಗ್ಯಾಲಕ್ಸಿ ಎಂ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಆದರೆ ಇದೀಗ ಸ್ಯಾಮ್‌ಸಂಗ್‌ ತನ್ನ ಗ್ಯಾಲಕ್ಸಿ F ಸರಣಿಯಲ್ಲಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಸರಣಿಯನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ ಎಂದು ಹೇಳಲಾಗ್ತಿದೆ. ಸದ್ಯ ಲಭ್ಯ ಮಾಹಿತಿಯ ಪ್ರಕಾರ F ಸರಣಿಯಲ್ಲಿ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್‌ ಪರಿಚಯಿಸಲಿದೆ ಎಂದು ಹೇಳಲಾಗ್ತಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಸಂಸ್ಥೆ ತನ್ನ ಹೊಸ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್‌ ಅನ್ನು ಮಾರುಕಟ್ಟೆಗೆ ಪರಿಚಯಿಸಲು ಸಿದ್ದತೆ ನಡೆಸಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ ಅನ್ನು SMF415F ಎಂದು ಸಂಕೇತನಾಮ ನೀಡಲಾಗಿದೆ. ಆದರೆ ಇದು ಫೊಲ್ಡೇಬಲ್‌ ಫೋನ್ ಅಲ್ಲ ಎನ್ನುವ ಮಾಹಿತಿ ಸಹ ಲಭ್ಯವಾಗಿಲಿದೆ. ಅಲ್ಲದೆ ಇದು ಭಾರತದಲ್ಲಿ 30,000ರೂ,ಗಳಿಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗಬಹುದು ಎಂದು ಹೇಳಲಾಗ್ತಿದೆ. ಜೊತೆಗೆ ಇದು ಸೆಪ್ಟೆಂಬರ್ ಕೊನೆಯ ವಾರದಲ್ಲಿ ಅಥವಾ ಅಕ್ಟೋಬರ್ ಮೊದಲನೇ ವಾರದಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ.

ಸ್ಮಾರ್ಟ್‌ಫೋನ್‌

ಇನ್ನು ಗ್ಯಾಲಕ್ಸಿ F ಸರಣಿಯ ಸ್ಮಾರ್ಟ್‌ಫೋನ್‌ ಉತ್ತಮ ಡಿಸ್‌ಪ್ಲೇ ವಿನ್ಯಾಸದೊಂದಿಗೆ ಬರಲಿದೆ ಎಂದು ಹೇಳಲಾಗ್ತಿದೆ. ಇದು ಫೊಲ್ಡೇಬಲ್‌ ಸ್ಮಾರ್ಟ್‌ಫೋನ್ ಆಗಿರುವುದಿಲ್ಲ ಎನ್ನಲಾಗ್ತಿದೆ. ಆದರೆ ಇದರ ಬೆಲೆ 15 ಸಾವಿರದಿಂದ 20,000 ರೂ.ಗಳವರೆಗೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ ನವೀನ ಮಾದರಿಯ ಕ್ಯಾಮೆರಾ ವಿನ್ಯಾಸವನ್ನು ಇದು ಹೊಂದಿರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಇದಲ್ಲದೆ ಗ್ಯಾಲಕ್ಸಿ M ನಂತರ ಕಂಪನಿಯು ಬಜೆಟ್‌ ಸ್ಮಾರ್ಟ್‌ಫೋನ್‌ ವಿಭಾಗದಲ್ಲಿ ಇದು ತನ್ನ ಸ್ಥಾನವನ್ನು ಇನ್ನಷ್ಟು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ಸ್ಮಾರ್ಟ್‌ಫೋನ್‌

ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಪವರ್ ಪ್ಯಾಕ್ಡ್ ಪರ್ಫಾರ್ಮೆನ್ಸ್ ನೀಡುವ ಸ್ಮಾರ್ಟ್‌ಫೋನ್‌ ಆಗಿರಲಿದೆ ಎಂದು ಹೇಳಲಾಗ್ತಿದೆ. ಸದ್ಯ ಈ ಹೊಸ ಗ್ಯಾಲಕ್ಸಿ ಎಫ್ ಸರಣಿಯನ್ನು ಪ್ರಾರಂಭಿಸುವ ಮೂಲಕ ಸ್ಯಾಮ್‌ಸಂಗ್ ತನ್ನ ಮಾರುಕಟ್ಟೆಯನ್ನು ಭಾರತದಲ್ಲಿ ಇನ್ನಷ್ಟು ವಿಸ್ತರಿಸಲಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಆಪ್ಡೇಟ್ ಟೆಕ್ನಾಲಜಿಯನ್ನು ನೀಡಲಾಗುತ್ತೆ ಎಂದು ಹೇಳಲಾಗ್ತಿದೆ. ಅಲ್ಲದೆ ಇದು ಕ್ವಾಡ್‌ ಕ್ಯಾಮೆರಾ ಸೆಟ್‌ ಅಪ್‌ ಹೊಂದಿರಲಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ ಎನ್ನಲಾಗ್ತಿದೆ.

ಸ್ಮಾರ್ಟ್‌ಫೋನ್‌

ಇನ್ನು ಈ ಸ್ಮಾರ್ಟ್‌ಫೋನ್‌ ಬಿಡುಗಡೆಯ ದಿನಾಂಕದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅಲ್ಲದೆ ಇದರ ಬ್ಯಾಟರಿ ಪವರ್‌ ಬಗ್ಗೆ ಕೂಡ ಯಾವುದೇ ಮಾಹಿತಿ ಲಬ್ಯವಾಗಿಲ್ಲ. ಆದರೆ ಇದು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಆಗಿರಲಿದ್ದು, ಬಳೆಕಾದರರಿಗೆ ಹೊಸ ಅನುಭವ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.

Most Read Articles
Best Mobiles in India

English summary
The rumoured Samsung phone is expected to launch end of September or early October.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X