ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್!
ಸ್ಮಾರ್ಟ್‌ಫೋನ್ ದೈತ್ಯ ಎನಿಸಿಕೊಂಡಿರುವ ಸ್ಯಾಮ್‌ಸಂಗ್ ಕಂಪೆನಿ ಈಗಾಗಲೇ ತನ್ನ ಫೋಲ್ಡ್, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಮತ್ತು ಗ್ಯಾಲಕ್ಸಿ ಎಂ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಆದರೆ ಇದೀಗ ಸ್ಯಾಮ್‌ಸಂಗ್ ತನ್ನ ಗ್ಯಾಲಕ್ಸಿ F ಸರಣಿಯಲ್ಲಿ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ವಾಟರ್‌ಡ್ರಾಪ್ ಶೈಲಿಯ ಡಿಸ್‌ಪ್ಲೇ ನಾಚ್ ಅನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆ ತನ್ನ ಹೊಸ F41 ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ. ಇದು ಸ್ಯಾಮ್‌ಸಂಗ್ ಕಂಪನಿಯ ಗ್ಯಾಲಕ್ಸಿ F ಸರಣಿಯ ಮೊದಲ ಮಾದರಿಯಾಗಿ ಭಾರತದಲ್ಲಿ ಪರಿಚಯಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಜೊತೆಗೆ ಇದು 6,000mAh ಸಾಮರ್ಥ್ಯದ ದೊಡ್ಡ ಗಾತ್ರದ ಬ್ಯಾಟರಿಯೊಂದಿಗೆ ಬರುತ್ತದೆ. ಅಲ್ಲದೆ ಇದು 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು ಆಕ್ಟಾ-ಕೋರ್ ಎಕ್ಸಿನೋಸ್ 9611 SoC ಪ್ರೊಸೆಸರ್ ಹೊಂದಿದ್ದು, ದೇಶದ ಯುವ ಗ್ರಾಹಕರನ್ನು ಗುರಿಯಾಗಿಸಿಕೊಂಡಿದೆ.

ಡಿಸ್‌ಪ್ಲೇ
ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಇನ್ಫಿನಿಟಿ-ಯು ಡಿಸ್‌ಪ್ಲೇಯನ್ನು ಹೊಂದಿದೆ. ಇದು 420 ನಿಟ್ ಬ್ರೈಟ್‌ನೆಶ್ ಅನ್ನು ಹೊಂದಿದ್ದು, ಉತ್ತಮ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ವಿಡಿಯೋ ಕರೆಗಳು ಹಾಗೂ ವಿಡಿಯೋ ವೀಕ್ಷಣೆಗೆ ಯೋಗ್ಯ ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ.

ಪ್ರೊಸೆಸರ್ ಬಲ
ಇದು ಆಕ್ಟಾ-ಕೋರ್-ಎಕ್ಸಿನೋಸ್ 9611 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಒನ್ ಯುಐ ಕೋರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 6GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಹೊಂದಿದ್ದು, ಇದು 123 ಡಿಗ್ರಿಗಳಷ್ಟು ವೀಕ್ಷಣಾ ಕ್ಷೇತ್ರವನ್ನು ಹೊಂದಿದೆ. ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಲೈವ್ ಫೋಕಸ್ ಅನ್ನು ಬೆಂಬಲಿಸಲಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇದು 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 15W ಚಾರ್ಜರ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ 5.0, ಜಿಪಿಎಸ್ ಮತ್ತು ಯುಎಸ್ಬಿ ಟೈಪ್-ಸಿ ಅನ್ನು ಬೆಂಬಲಿಸಲಿದೆ. ಜೊತೆಗೆ 3.5mm ಆಡಿಯೊ ಜ್ಯಾಕ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್ ಮೂಲ ಮಾದರಿ 6GB RAM + 64GB ಮಾದರಿಗೆ 16,999 ರೂ. ಬೆಲೆಯನ್ನು ಹೊಂದಿದೆ. ಇನ್ನು 6GB RAM+ 128GB ಮಾದರಿಯ ಬೆಲೆ ರೂ. 17,999 ಆಗಿದ್ದು.ಇದು ಇದೇ ಅಕ್ಟೋಬರ್ 16 ರಿಂದ ಫ್ಲಿಪ್ಕಾರ್ಟ್ ಮೂಲಕ ದೇಶದಲ್ಲಿ ಮಾರಾಟವಾಗಲಿದೆ. ಈ ಫೋನ್ ಫ್ಯೂಷನ್ ಗ್ರೀನ್, ಫ್ಯೂಷನ್ ಬ್ಲೂ ಮತ್ತು ಫ್ಯೂಷನ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಲಾಂಚ್ ಆಫರ್‌ನಲ್ಲಿ 1,500ರೂಗಳವರೆಗೆ ರಿಯಾಯಿತಿ ದೊರೆಯಲಿದ್ದು,15,499 ರೂಗಳಿಗೂ ಸ್ಮಾರ್ಟ್‌ಫೋನ್ ಅನ್ನು ಖರೀದಿಸಬಹುದಾಗಿದೆ.


Click it and Unblock the Notifications








