Home
ಸುದ್ದಿಜಾಲ

ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌!

ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ತನ್ನ ವೈವಿದ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಗ್ಯಾಲಕ್ಸಿ ಎ, ಎಂ ಮತ್ತು ಎಫ್‌ ಸರಣಿಯಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ತನ್ನ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಅನ್ನು ಸೆಪ್ಟೆಂಬರ್ 29 ಕ್ಕೆ ನಿಗದಿಪಡಿಸಲಾಗಿದೆ ಎಂದು ಸ್ಯಾಮ್‌ಸಂಗ್‌ ಸಂಸ್ಥೆ ದೃಡಪಡಿಸಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಸಂಸ್ಥೆಯ ಹೊಸ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್ ರೇಟ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್‌ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ಡ್ರಾಪ್-ಶೈಲಿಯ ನಾಚ್ ವಿನ್ಯಾಸ ಹೊಂದಿರಲಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಹೊಂದಿದ್ದು, HD+ ಇನ್ಫಿನಿಟಿ-ವಿ ಡಿಸ್‌ಪ್ಲೇ ಯನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಹೊಂದಿದೆ. ಇದು 12 5G ಬ್ಯಾಂಡ್‌ಗಳನ್ನು ಒಳಗೊಂಡಿದ್ದು N1 (2100), N3 (1800), N5 (850), N7 (2600), N8 (900), N20 (800) , N28 (700), N66 (AWS-3), N38 (2600), N40 (2300), N41 (2500), ಮತ್ತು N78 (3500) ಬ್ಯಾಂಡ್‌ಗಳನ್ನು ಹೊಂದಿರಲಿದೆ ಎನ್ನಲಾಗಿದೆ.

ಕ್ಯಾಮೆರಾ ಹೇಗಿದೆ?

ಕ್ಯಾಮೆರಾ ಹೇಗಿದೆ?

ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದು ನೈಟ್ ಮೋಡ್ ಫೀಚರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದ್ದು, ಮೂರನೇ ಕ್ಯಾಮೆರಾ 5ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿಯನ್ನು ಹೊಂದಿದ್ದು, ಇದು ಬಳಕೆದಾರರಿಗೆ ಸಂಪೂರ್ಣ ದಿನದ ಬಾಳಿಕೆಯನ್ನು ನೀಡುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ವಾಲ್ಯೂಮ್ ರಾಕರ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಮೈಕ್ರೊಫೋನ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು ಸ್ಪೀಕರ್ ಗ್ರಿಲ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್‌ ಇದೇ ಸೆಪ್ಟೆಂಬರ್ 29 ರಂದು ಮಧ್ಯಾಹ್ನ 12 ಗಂಟೆಗೆ ಅನಾವರಣಗೊಳ್ಳಲಿದೆ. ಆದರೆ ಈ ಸ್ಮಾರ್ಟ್‌ಫೋನ್‌ ಬೆಲೆ ಎಷ್ಟಿದೆ ಅನ್ನೊದು ಇನ್ನು ತಿಳಿದು ಬಂದಿಲ್ಲ. ಇನ್ನು ಈ ಫೋನ್‌ ಸ್ಯಾಮ್‌ಸಂಗ್‌ನ ವೆಬ್‌ಸೈಟ್, ಫ್ಲಿಪ್‌ಕಾರ್ಟ್ ಮತ್ತು ಆಯ್ದ ಚಿಲ್ಲರೆ ಮಾರಾಟ ಕೇಂದ್ರಗಳ ಮೂಲಕ ಖರೀದಿಸಲು ಲಭ್ಯವಿರುತ್ತದೆ. ಮೈಕ್ರೊಸೈಟ್‌ನಲ್ಲಿರುವ ಚಿತ್ರಗಳ ಪ್ರಕಾರ, ಗ್ಯಾಲಕ್ಸಿ ಎಫ್ 42 5 ಜಿ ಪ್ರಸ್ತುತ ಕಪ್ಪು ಮತ್ತು ನೀಲಿ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ ಎಂದು ದೃಡಪಡಿಸಲಾಗಿದೆ.

Best Mobiles in India

English summary
Samsung Galaxy F42 5G India launch date has been set for September 29, the South Korean tech giant has confirmed.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+