ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್ ಬಿಡುಗಡೆ!
ಸ್ಯಾಮ್‌ಸಂಗ್ ಕಂಪೆನಿ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಕಂಪೆನಿಗಳಲ್ಲಿ ಒಂದಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ ಈ ಫೋನ್ 90Hz ರಿಫ್ರೆಶ್ ರೇಟ್ ಒಳಗೊಂಡ 6.6 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಹೊಸ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದು ಗ್ಯಾಲಕ್ಸಿ ಎಫ್-ಸರಣಿಯಲ್ಲಿ ಭಾರತಕ್ಕೆ ಎಂಟ್ರಿ ನೀಡಿರುವ ಮೊದಲ 5G ಸ್ಮಾರ್ಟ್‌ಫೋನ್ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಹೊಂದಿದೆ. ಇದು 5,000mAh ಬ್ಯಾಟರಿಯನ್ನು ಒಳಗೊಂಡಿದ್ದು, ಈ ಸ್ಮಾರ್ಟ್‌ಫೋನ್ ಆರಂಬಿಕ ಬೆಲೆ 20,999ರೂ, ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ
ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್ 1080 x 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ಡ್ರಾಪ್-ಶೈಲಿಯ ನಾಚ್ ವಿನ್ಯಾಸ ಹೊಂದಿರಲಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹೊಂದಿದ್ದು, HD+ ಇನ್ಫಿನಿಟಿ-ವಿ ಡಿಸ್‌ಪ್ಲೇ ಯನ್ನು ಹೊಂದಿದೆ. ಇದು ಸ್ಟಟರ್-ಫ್ರೀ ಸ್ಕ್ರೋಲಿಂಗ್ ಮತ್ತು ಲ್ಯಾಗ್-ಫ್ರೀ ಗೇಮಿಂಗ್ ಫೀಚರ್ಸ್ ಅನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒನ್ ಯುಐ 3.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಹೊಂದಿದೆ. ಇದು 12 5G ಬ್ಯಾಂಡ್‌ಗಳನ್ನು ಒಳಗೊಂಡಿದ್ದು N1 (2100), N3 (1800), N5 (850), N7 (2600), N8 (900), N20 (800) , N28 (700), N66 (AWS-3), N38 (2600), N40 (2300), N41 (2500), ಮತ್ತು N78 (3500) ಬ್ಯಾಂಡ್‌ಗಳನ್ನು ಹೊಂದಿರಲಿದೆ.

ಕ್ಯಾಮೆರಾ ಹೇಗಿದೆ?
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಹೈಪರ್‌ಲ್ಯಾಪ್ಸ್, ಸ್ಲೋ ಮೋಷನ್, ಫುಡ್ ಮೋಡ್, ನೈಟ್ ಮೋಡ್, ಪನೋರಮಾ ಮತ್ತು ಪ್ರೊ ಮೋಡ್ ಸೇರಿದಂತೆ ವಿವಿಧ ಮೋಡ್‌ಗಳನ್ನು ಸಹ ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್ 5,000mAh ಬ್ಯಾಟರಿಯನ್ನು ಒದಗಿಸಿದ್ದು, 15W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G ಲೈಟ್, ವೈಫೈ, ಬ್ಲೂಟೂತ್, ಜಿಪಿಎಸ್/ A-GPS, ಯುಎಸ್‌ಬಿ ಟೈಪ್-ಸಿ ಮತ್ತು 3.5mm ಹೆಡ್‌ಫೋನ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಸಾಮೀಪ್ಯ ಸೆನ್ಸರ್ ಅನ್ನು ಒಳಗೊಂಡಿದೆ. ಈ ಫೋನ್ ಸೈಡ್ ಮೌಂಟೆಡ್ ಫಿಂಗರ್ ಪ್ರಿಂಟ್ ಸೆನ್ಸರ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್ ಬೆಲೆ 6GB RAM ಮತ್ತು 128GB ರೂಪಾಂತರಕ್ಕೆ 20,999ರೂ. ಹಾಗೂ 8GB RAM ಮತ್ತು 128GB ಆಯ್ಕೆಗೆ 22,999ರೂ ಬೆಲೆಯನ್ನು ಹೊಂದಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಮ್ಯಾಟ್ ಆಕ್ವಾ ಹಾಗೂ ಮ್ಯಾಟ್ ಬ್ಲಾಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಫೋನ್ ಇದೆ ಅಕ್ಟೋಬರ್ 3ರಿಂದ ಫ್ಲಿಪ್‌ಕಾರ್ಟ್, ಸ್ಯಾಮ್‌ಸಂಗ್ ಆನ್‌ಲೈನ್ ಸ್ಟೋರ್ ಮೂಲಕ ಮಾರಾಟವಾಗಲಿದೆ. ವಿಶೇಷವಾಗಿ ಲಾಂಚ್ ಆಫರ್‌ನಲ್ಲಿ 6ಜಿಬಿ ರೂಪಾಂತರಕ್ಕೆ 17,999ರೂ. ಮತ್ತು 8ಜಿಬಿ ಆಯ್ಕೆಗೆ 19,999ರೂ.ಬೆಲೆ ಹೊಂದಿದೆ. ನೋ-ಕಾಸ್ಟ್ ಇಎಂಐ ಆಯ್ಕೆಗಳು ಮತ್ತು ವಿನಿಮಯ ರಿಯಾಯಿತಿಗಳು ಸಹ ಇರುತ್ತದೆ.


Click it and Unblock the Notifications








