ಸ್ಯಾಮ್‌ಸಂಗ್ ಗ್ಯಾಲಕ್ಸಿ F52 5G ಫೋನ್ ಲಾಂಚ್!..64ಎಂಪಿ ಕ್ಯಾಮೆರಾ!

|

ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯು ಗ್ಯಾಲಕ್ಸಿ F ಸರಣಿಯಲ್ಲಿ ಈಗಾಗಲೇ ಗ್ಯಾಲಕ್ಸಿ F41, ಗ್ಯಾಲಕ್ಸಿ F62 ಫೋನ್‌ಗಳನ್ನು ಲಾಂಚ್ ಮಾಡಿ ಗ್ರಾಹಕರನ್ನು ಸೆಳೆದಿದೆ. ಇದೀಗ ಅದರ ಮುಂದುವರಿದ ಭಾಗವಾಗಿ ಬಹುನಿರೀಕ್ಷಿತ ಗ್ಯಾಲಕ್ಸಿ F52 5G ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್‌ ಸಾಮರ್ಥ್ಯವನ್ನು ಹೊಂದಿದೆ.

ಚೀನಾದಲ್ಲಿ

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಹೊಸದಾಗಿ ಗ್ಯಾಲಕ್ಸಿ F52 5G ಸ್ಮಾರ್ಟ್‌ಫೋನ್‌ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಆಗಿದ್ದು, 4,500mAh ಬ್ಯಾಟರಿ ಬ್ಯಾಕ್‌ಅಪ್‌ನಿಂದ ಗಮನ ಸೆಳೆದಿದೆ. ಹಾಗೆಯೇ ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 750G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ. ಇನ್ನು ಈ ಫೋನ್ ಬ್ಲ್ಯಾಕ್‌ ಮತ್ತು ವೈಟ್ ಬಣ್ಣಗಳ ಆಯ್ಕೆ ಪಡೆದಿದೆ. ಇನ್ನುಳಿದಂತೆ ಗ್ಯಾಲಕ್ಸಿ F52 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F52 5G ಸ್ಮಾರ್ಟ್‌ಫೋನ್‌ 1,080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮಲ್ಟಿ ಟಚ್‌ ಸ್ಕ್ರೀನ್‌ ವ್ಯವಸ್ಥೆಯನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 405PPI ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ.

ಯಾವ ಪ್ರೊಸೆಸರ್‌ ಇದೆ

ಯಾವ ಪ್ರೊಸೆಸರ್‌ ಇದೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F52 5G ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 750G SoC ಪ್ರೊಸೆಸರ್‌ ಹೊಂದಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ.

ಕ್ವಾಡ್‌ ಕ್ಯಾಮೆರಾ ಸೆನ್ಸಾರ್

ಕ್ವಾಡ್‌ ಕ್ಯಾಮೆರಾ ಸೆನ್ಸಾರ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F52 5G ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾವು ಕ್ರಮವಾಗಿ 2 ಮೆಗಾ ಪಿಕ್ಸಲ್ ಸೆನ್ಸಾರ್ ಬಲವನ್ನು ಪಡೆದಿವೆ. ಇದರೊಂದಿಗೆ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F52 5G ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, 4 ಜಿ ಎಲ್ ಟಿಇ, ವೈ-ಫೈ 802.11 ಎಸಿ, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F52 5G ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆಯು ಚೀನಾದಲ್ಲಿ CNY 1,999 ಆಗಿದೆ (ಭಾರತದಲ್ಲಿ ಅಂದಾಜು 22,700ರೂ. ಎನ್ನಲಾಗಿದೆ). ಈ ಫೋನ್‌ ಡಸ್ಕಿ ಬ್ಲ್ಯಾಕ್ ಮತ್ತು ಮ್ಯಾಜಿಕ್ ವೈಟ್ ಬಣ್ಣಗಳ ಆಯ್ಕೆ ಪಡೆದಿದೆ.

Best Mobiles in India

English summary
The Galaxy F52 5G also offers up to 120Hz refresh rate. Other key highlights of the Samsung Galaxy F52 5G include quad rear cameras.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X