Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಈ ಹೊಸ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ದಕ್ಷಿಣ ಕೊರಿಯಾದ ಸ್ಯಾಮ್‌ಸಂಗ್‌ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಫೋನ್‌ ಮೀಡ್‌ರೇಂಜ್‌ ಗಮನ ಸೆಳೆದಿದೆ. ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿರುವ ಈ ಫೋನ್‌ ಇದೀಗ ಭರ್ಜರಿ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯವಾಗಿದೆ.

ಹೌದು, ಇ ಕಾಮರ್ಸ್‌ ದೈತ್ಯ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಫೋನ್‌ ಶೇ. 16% ರಷ್ಟು ರಿಯಾಯಿತಿ ಪಡೆದಿದೆ. 8 GB RAM + 256 GB ROM ಸ್ಟೋರೇಜ್‌ ವೇರಿಯಂಟ್‌ ಬೆಲೆಯು 35,999ರೂ. ಆಗಿದ್ದು, ಆಫರ್‌ನಲ್ಲಿ ಇದು 29,999ರೂ. ಗಳಿಗೆ ಖರೀದಿಗೆ ದೊರೆಯುತ್ತದೆ.

ಸ್ಯಾಮ್‌ಸಂಗ್‌ನ ಈ ಹೊಸ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಈ ಫೋನ್‌ Exynos 1380 ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ಮಾಡಲಿದೆ. ಇನ್ನು ಈ ಫೋನ್ ಬ್ಲೂ ಹಾಗೂ ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗಲಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಫೋನಿನ ಪ್ರಮುಖ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಗ್ಯಾಲಕ್ಸಿ F54 5G ಡಿಸ್‌ಪ್ಲೇ ಮತ್ತು ಪ್ರೊಸೆಸರ್‌ ಮಾಹಿತಿ : ಈ ಮೊಬೈಲ್‌ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದ್ದು, 6.67 ಇಂಚಿನ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ ಸ್ಯಾಮ್‌ಸಂಗ್‌ನ Exynos 1380 ಪ್ರೊಸೆಸರ್‌ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು, ಇತ್ತೀಚಿಗಿನ 13 ಓಎಸ್‌ ಸಪೋರ್ಟ್‌ ಸಹ ಒಳಗೊಂಡಿದೆ. ಈ ಫೋನ್‌ ಇದು 8 GB RAM + 256 GB ಆಯ್ಕೆಗಳಲ್ಲಿ ಪಡೆದಿದೆ.

ಗ್ಯಾಲಕ್ಸಿ F54 5G ಕ್ಯಾಮೆರಾ ಸೆನ್ಸಾರ್ ಮಾಹಿತಿ : ಗ್ಯಾಲಕ್ಸಿ F54 5G ಮೊಬೈಲ್‌ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಹಾಗೆಯೇ ಎರಡನೇ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಹೊಂದಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಆಗಿದೆ. ಇನ್ನು ಸೆಲ್ಫಿ ಕ್ಯಾಮೆರಾಗಾಗಿ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಒದಗಿಸಲಾಗಿದೆ.

ಗ್ಯಾಲಕ್ಸಿ F54 5G ಬ್ಯಾಟರಿ ಬ್ಯಾಕ್‌ಅಪ್‌ : ಈ ಮೊಬೈಲ್‌ 6,000 mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದರ ಜೊತೆಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್-C ಪೋರ್ಟ್ ಆಯ್ಕೆಗಳು ಇವೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A54 5G ಫೋನಿನ ಫೀಚರ್ಸ್‌ ಹೀಗಿವೆ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ A54 5G ಮೊಬೈಲ್‌ 6.4 ಇಂಚಿನ ಅಮೋಲೆಡ್‌ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಪಡೆದಿದೆ. ಈ ಫೋನ್ ಎಕ್ಸಿನೋಸ್ 1380 SoC ಪ್ರೊಸೆಸರ್‌ ಮೂಲಕ ಕೆಲಸ ನಿರ್ವಹಿಸಲಿದೆ. ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, 50 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 12 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಆಯ್ಕೆ ಇವೆ.

ಇನ್ನು ಈ ಫೋನ್‌ ಗ್ಯಾಲಕ್ಸಿ A54 5G ಫೋನ್‌ ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಸೆನ್ಸರ್‌ ನಲ್ಲಿದೆ. ಹಾಗೆಯೇ ಈ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 25W ವೇಗದ ಚಾರ್ಜಿಂಗ್‌ ಸಪೋರ್ಟ್‌ ಪಡೆದುಕೊಂಡಿದೆ.

Best Mobiles in India

English summary
Samsung Galaxy F54 5G available at big discount price on amazon. check offer details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+