Home
ಸುದ್ದಿಜಾಲ

Samsung: ಸ್ಯಾಮ್‌ಸಂಗ್‌ನ ಈ ಫೋನ್‌ಗೆ 30% ಡಿಸ್ಕೌಂಟ್‌: 108MP ಮೇನ್‌ ಕ್ಯಾಮೆರಾ!

ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ಭಾರತದಲ್ಲಿ ಹಲವು ಬ್ರ್ಯಾಂಡ್‌ಗಳ ಆಯ್ಕೆಗಳು ಲಭ್ಯವಿದೆ. ಇವುಗಳಲ್ಲಿ ಸ್ಯಾಮ್‌ಸಂಗ್‌ ಕಂಪೆನಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಸಾಕಷ್ಟು ಸದ್ದು ಮಾಡಿದ್ದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದುಕೊಂಡಿದೆ.

ಹೌದು, Samsung Galaxy F54 5G ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 30% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ ಸ್ಮಾರ್ಟ್‌ಫೋನ್‌ ಅನ್ನು ಕಡಿಮೆ ಬೆಲೆಯಲ್ಲಿ ಖರೀದಿಸುವುದಕ್ಕೆ ಅವಕಾಶ ಸಿಕ್ಕಿದೆ. ಈ ಸ್ಮಾರ್ಟ್‌ಫೋನ್‌ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮೇನ್‌ ಕ್ಯಾಮೆರಾ ಹೊಂದಿರುವುದು ಮೇನ್‌ ಹೈಲೈಟ್‌ ಆಗಿದೆ. ಹಾಗಾದ್ರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್‌ ಡಿಸ್ಕೌಂಟ್‌ ಪಡೆದ ನಂತರದ ಬೆಲೆ ಎಷ್ಟಿದೆ? ಇದರ ಫೀಚರ್ಸ್‌ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Samsung: ಸ್ಯಾಮ್‌ಸಂಗ್‌ನ ಈ ಫೋನ್‌ಗೆ 30% ಡಿಸ್ಕೌಂಟ್‌: 108MP ಮೇನ್‌ ಕ್ಯಾಮೆರಾ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಡಿಸ್ಕೌಂಟ್‌ ಏನು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನಿನ 8GB RAM ಮತ್ತು 256GB ಆಯ್ಕೆಯು ಫ್ಲಿಪ್‌ಕಾರ್ಟ್‌ನಲ್ಲಿ 30% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದನ್ನು ಫ್ಲಿಪ್‌ಕಾರ್ಟ್‌ ತಾಣದಲ್ಲಿ 35,999ರೂ ಮೂಲೆಬೆಲೆ ಪಟ್ಟಿ ಮಾಡಲಾಗಿದೆ. ಆದರೆ ಡಿಸ್ಕೌಂಟ್‌ ಪಡೆದುಕೊಂಡಿರುವುದರಿಂದ ಇದು 24,999ರೂ ಬೆಲೆಗೆ ಲಭ್ಯವಾಗುತ್ತಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಮೇಲೆ ವಿವಿಧ ಬ್ಯಾಂಕ್‌ ಆಫರ್‌ಗಳನ್ನು ಸಹ ನೀಡಲಾಗುತ್ತಿದ್ದು, ಇದರ ಬೆಲೆಯಲ್ಲಿ ಇನ್ನಷ್ಟು ಪರಿಣಾಮಕಾರಿ ಇಳಿಕೆಯನ್ನು ಕಾಣಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಫೀಚರ್ಸ್‌ ಹೆಗಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಇನ್ನು ಡಿಸ್‌ಪ್ಲೇ 85.0% ಸ್ಕ್ರಿನ್‌ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇಯು 20:9 ರಚನೆಯ ಅನುಪಾತದಲ್ಲಿದ್ದು, 393 ppi ಪಿಕ್ಸೆಲ್‌ ಸಾಂದ್ರತೆಯನ್ನು ಪಡೆದಿದೆ.

Samsung: ಸ್ಯಾಮ್‌ಸಂಗ್‌ನ ಈ ಫೋನ್‌ಗೆ 30% ಡಿಸ್ಕೌಂಟ್‌: 108MP ಮೇನ್‌ ಕ್ಯಾಮೆರಾ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಪ್ರೊಸೆಸರ್‌ ಯಾವುದು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್‌ Exynos 1380 ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8 GB RAM + 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ಸಹ ವಿಸ್ತರಿಸಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಕ್ಯಾಮೆರಾ ಸೆಟಪ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 8ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಪಡೆದಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಪಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

Samsung: ಸ್ಯಾಮ್‌ಸಂಗ್‌ನ ಈ ಫೋನ್‌ಗೆ 30% ಡಿಸ್ಕೌಂಟ್‌: 108MP ಮೇನ್‌ ಕ್ಯಾಮೆರಾ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್-C ಪೋರ್ಟ್ ಆಯ್ಕೆಗಳನ್ನು ನೀಡಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಸಹ ಹೊಂದಿದೆ.

Best Mobiles in India

English summary
Samsung Galaxy F54 5G Gets Huge Discount in Flipkart: Offers Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+