Home
ಸುದ್ದಿಜಾಲ

ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಲಾಂಚ್‌ಗೆ ಮುಹೂರ್ತ ಫಿಕ್ಸ್‌!..ಜಬರ್ದಸ್ತ್ ಫೀಚರ್ಸ್‌!

ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಹೊಸದಾಗಿ ಸ್ಮಾರ್ಟ್‌ಫೋನ್ ಒಂದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಕಲ ಸಜ್ಜಾಗಿದೆ. ಸ್ಯಾಮ್‌ಸಂಗ್ ಸಂಸ್ಥೆಯು ಗ್ಯಾಲಕ್ಸಿ F ಸರಣಿಯಲ್ಲಿ ಈಗಾಗಲೇ ಹಲವು ಭಿನ್ನ ಬೆಲೆಯ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದ್ದು, ಆ ಸಾಲಿಗೆ ಈಗ ನೂತನವಾಗಿ 'ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G' (Galaxy F54 5G) ಸ್ಮಾರ್ಟ್‌ಫೋನ್‌ ಅನ್ನು ಸೇರಿಸಲಿದೆ.

ಹೌದು, ಸ್ಯಾಮ್‌ಸಂಗ್ ಕಂಪನಿಯು ಇದೀಗ 'ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G' (Galaxy F54 5G) ಸ್ಮಾರ್ಟ್‌ಫೋನ್‌ ಲಾಂಚ್ ಮಾಡಲಿದ್ದು, ಅದಕ್ಕೆ ಮುಹೂರ್ತ ಫಿಕ್ಸ್‌ ಮಾಡದೆ. ಇದೇ ಜೂನ್ 6 ರಂದು ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಫೋನ್‌ ಅನ್ನು ಬಿಡುಗಡೆ ಮಾಡಲಿದೆ. ಈ ಫೋನ್‌ ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದ್ದು, ಪ್ರಮುಖ ಹೈಲೈಟ್‌ ಎನಿಸಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಲಾಂಚ್‌ಗೆ ಮುಹೂರ್ತ ಫಿಕ್ಸ್‌!..ಸಖತ್ ಫೀಚರ್ಸ್‌!

ಖರೀದಿಸಲು ಇಚ್ಛಿಸುವ ಗ್ರಾಹಕರು 999ರೂ. ಪಾವತಿಸುವ ಮೂಲಕ ಮುಂಗಡ ಬುಕಿಂಗ್ ಮಾಡಬಹುದಾಗಿದೆ. ಇನ್ನು ಮುಂಗಡ ಬುಕಿಂಗ್ ಮಾಡುವ ಗ್ರಾಹಕರಿಗೆ ರಿಯಾಯಿತಿ ಕೊಡುಗೆ ಲಭ್ಯವಾಗಲಿದೆ. ಇನ್ನು ಈ ಫೋನಿನ ಫೀಚರ್ಸ್‌ಗಳು ಬಹುತೇಕ ಗ್ಯಾಲಕ್ಸಿ M54 5G ಅನ್ನು ಹೋಲುತ್ತವೆ ಎನ್ನಲಾಗಿದೆ. ಹಾಗಾದರೇ ಈ ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಗ್ಯಾಲಕ್ಸಿ F54 5G ಡಿಸ್‌ಪ್ಲೇ ಮತ್ತು ಪ್ರೊಸೆಸರ್‌ : ಈ ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರಲಿದ್ದು, 6.67 ಇಂಚಿನ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇ ಯನ್ನು ಪಡೆದಿರಲಿದೆ. ಇನ್ನು ಈ ಫೋನ್‌ ಸ್ಯಾಮ್‌ಸಂಗ್‌ನ Exynos 1380 ಪ್ರೊಸೆಸರ್‌ ಪ್ರೊಸೆಸರ್‌ ಬಲದಲ್ಲಿ ಕಾರ್ಯನಿರ್ವಹಿಸಲಿದ್ದು, ಇತ್ತೀಚಿಗಿನ 13 ಓಎಸ್‌ ಸಪೋರ್ಟ್‌ ಸಹ ಪಡೆದಿರಲಿದೆ. ಜೊತೆಗೆ 6 GB RAM + 128 GB ಮತ್ತು 8 GB RAM + 256 GB ಆಯ್ಕೆಗಳಲ್ಲಿ ಬರಲಿದೆ ಎನ್ನಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಲಾಂಚ್‌ಗೆ ಮುಹೂರ್ತ ಫಿಕ್ಸ್‌!..ಸಖತ್ ಫೀಚರ್ಸ್‌!

ಗ್ಯಾಲಕ್ಸಿ F54 5G ಕ್ಯಾಮೆರಾ ರಚನೆ : ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿರಲಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಪಡೆದಿರಲಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಪಡೆದಿರಲಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿ ಇರುವ ನಿರೀಕ್ಷೆಗಳಿವೆ.

ಗ್ಯಾಲಕ್ಸಿ F54 5G ಬ್ಯಾಟರಿ ಬ್ಯಾಕ್‌ಅಪ್‌ : ಈ ಫೋನ್ 6,000 mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರಲಿದ್ದು, ಜೊತೆಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿರಲಿದೆ. ಇದರೊಂದಿಗೆ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್-C ಪೋರ್ಟ್ ಆಯ್ಕೆಗಳು ಇರಲಿವೆ. ವರದಿಯ ಪ್ರಕಾರ 199g ತೂಕ ಪಡೆದಿರಲಿದೆ (6,000mAh ಬ್ಯಾಟರಿಯ ಹೊರತಾಗಿಯೂ) ಮತ್ತು 8.4mm ತೆಳುವಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಲಾಂಚ್‌ಗೆ ಮುಹೂರ್ತ ಫಿಕ್ಸ್‌!..ಸಖತ್ ಫೀಚರ್ಸ್‌!

ಗ್ಯಾಲಕ್ಸಿ F54 5G ಲಭ್ಯತೆ : ಗ್ಯಾಲಕ್ಸಿ F54 5G ಫೋನ್‌ ಇದೇ ಜೂನ್ 6, 2023 ರಂದು ಭಾರತದಲ್ಲಿ ಲಾಂಚ್ ಆಗುವುದು ಖಚಿತವಾಗಿದೆ. ಇನ್ನು ಈ ಫೋನಿನ 8GB RAM + 256GB ವೇರಿಯಂಟ್‌ ಬೆಲೆಯು 30,000ರೂ. ಗಳ ಒಳಗೆ ಇರಬಹುದು ಎಂದು ಅಂದಾಜಿಸಲಾಗಿದೆ.

Best Mobiles in India

English summary
Samsung Galaxy F54 5G India Launch Set For June 6: Check Expected specifications, Expected price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+