Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಈ ಫೋನಿಗೆ ಬಿಗ್‌ ಡಿಸ್ಕೌಂಟ್‌!..108ಎಂಪಿ ಕ್ಯಾಮೆರಾ, ಬೆಸ್ಟ್‌ ಬ್ಯಾಟರಿ!

ದಕ್ಷಿಣ ಕೊರಿಯಾದ ದೈತ್ಯ ಸಂಸ್ಥೆ ಸ್ಯಾಮ್‌ಸಂಗ್‌ ಭಾರತೀಯ ಮೊಬೈಲ್‌ ಮಾರುಕಟ್ಟೆಯಲ್ಲಿ ಭದ್ರ ಸ್ಥಾನ ಪಡೆದಿದ್ದು, ಸಂಸ್ಥೆಯ ಗ್ಯಾಲಕ್ಸಿ ಮಾದರಿಯ ಫೋನ್‌ಗಳು ಹೆಚ್ಚು ಟ್ರೆಂಡಿ ಎನಿಸಿವೆ. ಆ ಪೈಕಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಫೋನ್‌ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ ಹಾಗೂ ಆಕರ್ಷಕ ಫೀಚರ್ಸ್ ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್‌ ಇದೀಗ ಭಾರೀ ಬೆಲೆ ಇಳಿಕೆಯಿಂದ ಗ್ರಾಹಕರನ್ನು ಆಕರ್ಷಿಸಿದೆ.

ಹೌದು, ಅಮೆಜಾನ್‌ ಇ ಕಾಮರ್ಸ್ ತಾಣದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಮೊಬೈಲ್‌ ಶೇ. 25% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 8 GB RAM + 256 GB ಸ್ಟೋರೇಜ್‌ ವೇರಿಯಂಟ್‌ 26,999ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.

ಸ್ಯಾಮ್‌ಸಂಗ್‌ನ ಈ ಫೋನಿಗೆ ಬಿಗ್‌ ಡಿಸ್ಕೌಂಟ್‌!..108ಎಂಪಿ ಕ್ಯಾಮೆರಾ

ಅಂದಹಾಗೆ ಈ ಫೋನ್ ಸ್ಯಾಮ್‌ಸಂಗ್‌ನ Exynos 1380 ಪ್ರೊಸೆಸರ್‌ ಸೌಲಭ್ಯ ಒಳಗೊಂಡಿದ್ದು, ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರ ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಕೂಡಾ ಪಡೆದುಕೊಂಡಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ನ ಈ ಫೋನಿಗೆ ಬಿಗ್‌ ಡಿಸ್ಕೌಂಟ್‌!..108ಎಂಪಿ ಕ್ಯಾಮೆರಾ

ಡಿಸ್‌ಪ್ಲೇ ಡಿಸೈನ್‌ ಹಾಗೂ ಪ್ರೊಸೆಸರ್‌ ಪವರ್‌

ಈ ಮೊಬೈಲ್‌ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದ್ದು, 6.67 ಇಂಚಿನ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ ಸ್ಯಾಮ್‌ಸಂಗ್‌ನ Exynos 1380 ಪ್ರೊಸೆಸರ್‌ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು, ಇತ್ತೀಚಿಗಿನ 13 ಓಎಸ್‌ ಸಪೋರ್ಟ್‌ ಸಹ ಒಳಗೊಂಡಿದೆ. ಈ ಫೋನ್‌ ಇದು 8 GB RAM + 256 GB ಆಯ್ಕೆಗಳಲ್ಲಿ ಪಡೆದಿದೆ.

ಸ್ಯಾಮ್‌ಸಂಗ್‌ನ ಈ ಫೋನಿಗೆ ಬಿಗ್‌ ಡಿಸ್ಕೌಂಟ್‌!..108ಎಂಪಿ ಕ್ಯಾಮೆರಾ

ಟ್ರಿಪಲ್‌ ಕ್ಯಾಮೆರಾ ಸೆನ್ಸಾರ್ ಸೌಲಭ್ಯ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಮೊಬೈಲ್‌ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಹಾಗೆಯೇ ಎರಡನೇ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಹೊಂದಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಆಗಿದೆ. ಇನ್ನು ಸೆಲ್ಫಿ ಕ್ಯಾಮೆರಾಗಾಗಿ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಒದಗಿಸಲಾಗಿದೆ.

ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ

ಈ ಮೊಬೈಲ್‌ 6,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದರ ಜೊತೆಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್-C ಪೋರ್ಟ್ ಆಯ್ಕೆಗಳು ಇವೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A54 5G - ಫೀಚರ್ಸ್‌

ಈ ಮೊಬೈಲ್‌ 6.4 ಇಂಚಿನ ಅಮೋಲೆಡ್‌ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಪಡೆದಿದೆ. ಈ ಫೋನ್ ಎಕ್ಸಿನೋಸ್ 1380 SoC ಪ್ರೊಸೆಸರ್‌ ಮೂಲಕ ಕಾರ್ಯ ನಿರ್ವಹಿಸಲಿದೆ. ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, 50 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 12 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಆಯ್ಕೆ ಇವೆ. ಇನ್ನು ಈ ಫೋನ್‌ ಗ್ಯಾಲಕ್ಸಿ A54 5G ಫೋನ್‌ ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಸೆನ್ಸರ್‌ನಲ್ಲಿದೆ. ಹಾಗೆಯೇ ಈ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

Best Mobiles in India

English summary
Samsung Galaxy F54 5G now available at Unbelievable price tag in flipkart. check out here offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+