ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G 'ಪ್ರಿ-ರಿಸರ್ವ್'ಗೆ ಲಭ್ಯ!..2000ರೂ. ರಿಯಾಯಿತಿ!
ಸ್ಯಾಮ್‌ಸಂಗ್ ಸಂಸ್ಥೆಯ ನೂತನವಾಗಿ ಬಿಡುಗಡೆ ಮಾಡಲಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ ಈಗಾಗಲೆ ಮೊಬೈಲ್ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಇದೀಗ ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಪ್ರಿ-ರಿಸರ್ವ್‌ಗೆ (Pre-reserve) ಅನ್ನು ಪ್ರಾರಂಭಿಸಿದೆ. ಅಂದಹಾಗೆ ಈ ನೂತನ ಸ್ಮಾರ್ಟ್‌ಫೋನ್ ಇದೇ ಜೂನ್ 6 ರಂದು ದೇಶಿಯ ಮಾರುಕಟ್ಟೆಯಲ್ಲಿ ಲಾಂಚ್ ಆಗಲಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಫೋನ್ ಇದೇ ಜೂನ್ 6 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ. ಈ ಫೋನ್ ಅನ್ನು ಖರೀದಿಸುವ ಗ್ರಾಹಕರು ಫ್ಲಿಪ್‌ಕಾರ್ಟ್ ತಾಣದಲ್ಲಿ 999ರೂ. ಪಾವತಿಸಿ ಮುಂಗಡವಾಗಿ ಪ್ರೀ-ರಿಸರ್ವ್ ಮಾಡಬಹುದಾಗಿದೆ. ಇನ್ನು ಈ ಫೋನ್‌ಗಾಗಿ ಪ್ರಿ-ರಿಸರ್ವ್ ಮಾಡುವ ಗ್ರಾಹಕರಿಗೆ 2,000ರೂ. ರಿಯಾಯಿತಿ ಸಿಗಲಿದೆ.

ಈ ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಅನ್ನು ಒಳಗೊಂಡಿರುವುದು ಬಹುತೇಕ ಖಚಿತವಾಗಿದೆ. ಜೊತೆಗೆ ಇದು Exynos 1380 SoC ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್ ಬೆಲೆಯು 30,000ರೂ. ಗಳ ಒಳಗೆ ಇರುತ್ತದೆ ಎಂದು ಅಂದಾಜಿಸಲಾಗಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಫೋನ್ ಇತರೆ ಯಾವೆಲ್ಲಾ ಫೀಚರ್ಸ್ ಒಳಗೊಂಡಿರಲಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಗ್ಯಾಲಕ್ಸಿ F54 5G ಡಿಸ್‌ಪ್ಲೇ ಮತ್ತು ಪ್ರೊಸೆಸರ್ : ಈ ಸ್ಮಾರ್ಟ್‌ಫೋನ್ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರಲಿದ್ದು, 6.67 ಇಂಚಿನ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಯನ್ನು ಪಡೆದಿರಲಿದೆ. ಇನ್ನು ಈ ಫೋನ್ ಸ್ಯಾಮ್‌ಸಂಗ್‌ನ Exynos 1380 ಪ್ರೊಸೆಸರ್ ಪ್ರೊಸೆಸರ್ ಬಲದಲ್ಲಿ ಕಾರ್ಯನಿರ್ವಹಿಸಲಿದ್ದು, ಇತ್ತೀಚಿಗಿನ 13 ಓಎಸ್ ಸಪೋರ್ಟ್ ಸಹ ಪಡೆದಿರಲಿದೆ. ಜೊತೆಗೆ 6GB RAM + 128GB ಮತ್ತು 8GB RAM + 256 GB ಆಯ್ಕೆಗಳಲ್ಲಿ ಬರಲಿದೆ ಎನ್ನಲಾಗಿದೆ.

ಗ್ಯಾಲಕ್ಸಿ F54 5G ಕ್ಯಾಮೆರಾ ರಚನೆ : ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ ಹಿಂಭಾಗ ದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿರಲಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಪಡೆದಿರಲಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಪಡೆದಿರಲಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿ ಇರುವ ನಿರೀಕ್ಷೆಗಳಿವೆ.
ಗ್ಯಾಲಕ್ಸಿ F54 5G ಬ್ಯಾಟರಿ ಬ್ಯಾಕ್‌ಅಪ್ : ಈ ಫೋನ್ 6,000 mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರಲಿದ್ದು, ಜೊತೆಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿರಲಿದೆ. ಇದರೊಂದಿಗೆ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್-C ಪೋರ್ಟ್ ಆಯ್ಕೆಗಳು ಇರಲಿವೆ. ವರದಿಯ ಪ್ರಕಾರ 199g ತೂಕ ಪಡೆದಿರಲಿದೆ (6,000 mAh ಬ್ಯಾಟರಿಯ ಹೊರತಾಗಿಯೂ) ಮತ್ತು 8.4mm ತೆಳುವಾಗಿದೆ.
ಗ್ಯಾಲಕ್ಸಿ F54 5G ಬೆಲೆ ಮತ್ತು ಲಭ್ಯತೆ : ಈ ಫೋನ್ ಅನ್ನು ಖರೀದಿಸುವ ಗ್ರಾಹಕರು ಫ್ಲಿಪ್‌ಕಾರ್ಟ್ ತಾಣದಲ್ಲಿ 999 ರೂ. ಪಾವತಿಸಿ ಮುಂಗಡವಾಗಿ ಪ್ರೀ ರಿಸರ್ವ್ ಮಾಡಬಹುದಾಗಿದೆ. ಇನ್ನು ಈ ಫೋನ್‌ಗಾಗಿ ಪ್ರಿ ರಿಸರ್ವ್ ಮಾಡುವ ಗ್ರಾಹಕರಿಗೆ 2,000 ರೂ. ರಿಯಾಯಿತಿ ಸಿಗಲಿದೆ. ಈ ಫೋನ್ ಬೆಲೆಯು 30,000 ರೂ. ಗಳ ಒಳಗೆ ಇರುತ್ತದೆ ಎಂದು ಅಂದಾಜಿಸಲಾಗಿದೆ.


Click it and Unblock the Notifications








