Samsung: ಬಹು ಬೇಡಿಕೆ ಇರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ ಬೆಲೆ ಇಳಿಕೆ! 108MP ಕ್ಯಾಮೆರಾ...
ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳು (Samsung smartphones) ಎಂದೆಂದಿಗೂ ಸಹ ದೊಡ್ಡ ಮಟ್ಟದ ಬೇಡಿಕೆ ಪಡೆದುಕೊಂಡಿರುತ್ತವೆ. ಈ ನಡುವೆ ಪ್ರಮುಖ ಇ ಕಾಮರ್ಸ್ ಸೈಟ್‌ಗಳು ಸಹ ವಿವಿಧ ರೀತಿಯ ಸೇಲ್‌ಗಳನ್ನು ಆಯೋಜನೆ ಮಾಡುವ ಮೂಲಕ ಫೋನ್‌ಗಳಿಗೆ ಬೃಹತ್ ಕೊಡುಗೆ ಘೋಷಣೆ ಮಾಡುವುದರಿಂದ ಜನರು ಹೆಚ್ಚು ಹೆಚ್ಚಾಗಿ ಈ ಫೋನ್‌ಗಳನ್ನು ಖರೀದಿ ಮಾಡುತ್ತಾರೆ. ಈ ನಡುವೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ (Samsung Galaxy F54 5G smartphone) ಬೆಲೆ ಇಳಿಕೆಯಾಗಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ ಬೆಲೆ ಇಳಿಕೆ ಆಗಿದೆ ಎಂದರೆ ಸ್ಯಾಮ್‌ಸಂಗ್ ಅಧಿಕೃತವಾಗಿ ಈ ಫೋನ್‌ಗೆ ಬೆಲೆ ಕಡಿತ ಮಾಡಿಲ್ಲ. ಬದಲಾಗಿ ಇ-ಕಾಮರ್ಸ್ ಸೈಟ್‌ನಲ್ಲಿ ಭರ್ಜರಿ ಆಫರ್ ನೀಡಲಾಗಿದೆ. ಇದರಿಂದಾಗಿ ಈ ಫೋನ್ ಅನ್ನು ಭಾರೀ ಕಡಿಮೆ ದರದಲ್ಲಿ ಕೊಂಡುಕೊಳ್ಳಬಹುದಾಗಿದೆ. ಹಾಗಿದ್ರೆ, ಈ ಫೋನ್‌ನ ಆಫರ್ ಬೆಲೆ ಎಷ್ಟು?, ಇದು ಏನೆಲ್ಲಾ ಫೀಚರ್ಸ್ ಹೊಂದಿದೆ ಎಂಬಿತ್ಯಾದಿ ಮಾಹಿತಿ ಇಲ್ಲಿದೆ ನೋಡಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ ಆಫರ್ ಮಾಹಿತಿ: ಈ ಸ್ಮಾರ್ಟ್‌ಫೋನ್ 35,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದೆ. ಆದರೆ ನೀವು ಈಗ ಇದನ್ನು 22,999 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಫ್ಲಿಪ್‌ಕಾರ್ಟ್ ತನ್ನ ವಿಶೇಷ ಸೇಲ್‌ನಲ್ಲಿ 36% ರಿಯಾಯಿತಿ ಘೋಷಣೆ ಮಾಡಿದೆ. ಅದಾಗ್ಯೂ ನೀವು ಕೆಲವು ಬ್ಯಾಂಕ್ ಕೊಡುಗೆ ಬಳಕೆ ಮಾಡಿಕೊಂಡು ಇನ್ನೂ ಕಡಿಮೆ ದರದಲ್ಲಿ ಈ ಫೋನ್ ನಿಮ್ಮದಾಗಿಸಿಕೊಳ್ಳಬಹುದಾಗಿದೆ.
ಫ್ಲಿಪ್‌ಕಾರ್ಟ್ ಯುಪಿಐ ವ್ಯವಹಾರದಲ್ಲಿ ತ್ವರಿತ ರಿಯಾಯಿತಿ, ಫ್ಲಿಪ್‌ಕಾರ್ಟ್ ಆಕ್ಸಿಸ ಬ್ಯಾಂಕ್ ಕಾರ್ಡ್‌ನಲ್ಲಿ 5% ಕ್ಯಾಶ್‌ಬ್ಯಾಕ್, ನೋ ಕಾಸ್ಟ್‌ಇಎಮ್‌ಐ ಸೌಲಭ್ಯ, ಕಾಂಬೊ ಮೊಬೈಲ್ ಮತ್ತು ಕೇಸ್‌ಕವರ್‌ನಲ್ಲಿ ಹೆಚ್ಚುವರಿ 10% ರಿಯಾಯಿತಿ ಸೇರಿದಂತೆ ವಿವಿಧ ಬ್ಯಾಂಕ್‌ಗಳಿಗೆ ಆಫರ್ ನೀಡಲಾಗಿದೆ. ಇದರಿಂದಾಗಿ ನೀವು ಇನ್ನೂ ಕಡಿಮೆ ದರದಲ್ಲಿ ಈ ಬಹುಬೇಡಿಕೆ ಇರುವ ಹಾಗೂ ಉತ್ತಮ ಜನಪ್ರಿಯತೆ ಪಡೆದಿರುವ ಫೋನ್ ಅನ್ನು ಖರೀದಿ ಮಾಡಬಹುದಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಪೋನ್ 6.7 ಇಂಚಿನ ಸೂಪರ್ ಅಮೋಲೆಡ್ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದರ ಜೊತೆಗೆ 120Hz ರಿಫ್ರೆಶ್ ರೇಟ್, 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ, 85.0% ಸ್ಕ್ರೀನ್-ಟು-ಬಾಡಿ ಅನುಪಾತ, 393 ppi ಸಾಂದ್ರತೆ ಅನ್ನು ಕಾಣಬಹುದಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ ಪ್ರೊಸೆಸರ್ ವಿವರ: ಈ ಫೋನ್ ಆಂಡ್ರಾಯ್ಡ್ 13, ಒನ್ ಯುಐ 5.1 ಓಎಸ್ ಅನ್ನು ರನ್ ಮಾಡಲಿದ್ದು, ಎಕ್ಸಿನೋಸ್ 1380 (5 nm) ಆಕ್ಟಾ-ಕೋರ್ (4x2.4 GHz ಕಾರ್ಟೆಕ್ಸ್-A78 & 4x2.0 GHz ಕಾರ್ಟೆಕ್ಸ್-A55) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ ಮಾಲಿ-G68 MP5 ಜಿಪಿಯು ಬಲ ಪಡೆದುಕೊಂಡಿದೆ. ಹಾಗೆಯೇ 256GB ಹಾಗೂ 8GB RAM ಸ್ಟೋರೇಜ್‌ನಲ್ಲಿ ಲಭ್ಯ ಇದ್ದು, ಮೈಕ್ರೋ ಎಸ್‌ಡಿ ಕಾರ್ಡ್ ಸೌಲಭ್ಯ ಸಹ ಇದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದಿದ್ದು, 108 ಮೆಗಾಪಿಕ್ಸೆಲ್, f/1.8, (ಅಗಲ), PDAF, OIS ಮುಖ್ಯ ಕ್ಯಾಮೆರಾ, 8 ಮೆಗಾಪಿಕ್ಸೆಲ್, f/2.2, (ಅಲ್ಟ್ರಾವೈಡ್), 1/4.0", 1.12µm ಸೆನ್ಸರ್ ಹಾಗೂ 2 ಮೆಗಾಪಿಕ್ಸೆಲ್ f/2.4, (ಮ್ಯಾಕ್ರೋ) ಸೆನ್ಸರ್ ಅನ್ನು ಈ ಫೋನ್ ಹೊಂದಿದೆ. ಇದರ ಜೊತೆಗೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕಾಣಬಹುದಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 6000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, ವೈ-ಫೈ 802.11 a/b/g/n/ac/6, ಡ್ಯುಯಲ್-ಬ್ಯಾಂಡ್, ವೈ-ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.3, A2DP, LE, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ, ಯುಎಸ್‌ಬಿ ಟೈಪ್ ಸಿ 2.0, ಓಟಿಜಿ, ಫಿಂಗರ್‌ಪ್ರಿಂಟ್ ಸೈಡ್-ಮೌಂಟೆಡ್ ಸೆನ್ಸರ್, ಅಕ್ಸೆಲೆರೊಮೀಟರ್, ಗೈರೊ, ಸಾಮೀಪ್ಯ, ದಿಕ್ಸೂಚಿ ಸೇರಿದಂತೆ ಅನೇಕ ಸೌಲಭ್ಯಗಳನ್ನು ಪಡೆದುಕೊಂಡಿದೆ


Click it and Unblock the Notifications








