Home
ಸುದ್ದಿಜಾಲ

ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸೇಲ್‌ ಪ್ರಾರಂಭ!..ಏನಿದೆ ಆಫರ್‌?

ಸ್ಯಾಮ್‌ಸಂಗ್‌ ಮೊಬೈಲ್‌ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಫೋನ್‌ ಮೀಡ್‌ರೇಂಜ್‌ ವಿಭಾಗದಲ್ಲಿ ಕಾಣಿಸಿಕೊಂಡಿದೆ. ಭಾರತದಲ್ಲಿ ಇಂದಿನಿಂದ ಫ್ಲಿಪ್‌ಕಾರ್ಟ್ ಮತ್ತು ಅಧಿಕೃತ ಸ್ಯಾಮ್‌ಸಂಗ್ ಇ-ಸ್ಟೋರ್‌ನಲ್ಲಿ ಹಾಗೂ ಪ್ರಮುಖ ರಿಟೇಲ್‌ ಸ್ಟೋರ್‌ಗಳಲ್ಲಿ ಫಸ್ಟ್‌ ಸೇಲ್‌ ಪ್ರಾರಂಭಿಸಲಿದೆ. ಅಂದಹಾಗೆ ಈ ಎರಡೂ ಗ್ಯಾಲಕ್ಸಿ F54 5G ಫೋನ್ 5G ನೆಟ್‌ವರ್ಕ್‌ ಸಪೋರ್ಟ್‌ ಒಳಗೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ತಾಣದಲ್ಲಿ ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಫೋನ್‌ ಮಾರಾಟ ಪ್ರಾರಂಭವಾಗಲಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಫೋನ್ 8 GB RAM + 256 GB ROM ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಹಾಗೆಯೇ ಈ ಫೋನಿನ ಪ್ರಮುಖ ಕ್ಯಾಮೆರಾ 108 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಯ್ಕೆ ಅನ್ನು ಒಳಗೊಂಡಿದೆ.

ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸೇಲ್‌ ಪ್ರಾರಂಭ!..ಏನಿದೆ ಆಫರ್‌?

ಫ್ಲಿಪ್‌ಕಾರ್ಟ್‌ ತಾಣದಲ್ಲಿ 8 GB RAM + 256 GB ವೇರಿಯಂಟ್‌ 29,999ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಫೋನ್ ಬ್ಲೂ ಹಾಗೂ ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಖರಿದಿಗೆ ಲಭ್ಯವಾಗಲಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಫೋನಿನ ಪ್ರಮುಖ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಗ್ಯಾಲಕ್ಸಿ F54 5G ಡಿಸ್‌ಪ್ಲೇ ಮತ್ತು ಪ್ರೊಸೆಸರ್‌ : ಈ ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದ್ದು, 6.67 ಇಂಚಿನ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇ ಯನ್ನು ಪಡೆದಿರಲಿದೆ. ಇನ್ನು ಈ ಫೋನ್‌ ಸ್ಯಾಮ್‌ಸಂಗ್‌ನ Exynos 1380 ಪ್ರೊಸೆಸರ್‌ ಪ್ರೊಸೆಸರ್‌ ಬಲದಲ್ಲಿ ಕಾರ್ಯನಿರ್ವಹಿಸಲಿದ್ದು, ಇತ್ತೀಚಿಗಿನ 13 ಓಎಸ್‌ ಸಪೋರ್ಟ್‌ ಸಹ ಪಡೆದಿದೆ. ಜೊತೆಗೆ ಇದು 8 GB RAM + 256 GB ಆಯ್ಕೆಗಳಲ್ಲಿ ಪಡೆದಿದೆ.

ಗ್ಯಾಲಕ್ಸಿ F54 5G ಕ್ಯಾಮೆರಾ ರಚನೆ : ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಪಡೆದಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಪಡೆದಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿ ಇದೆ.

ಗ್ಯಾಲಕ್ಸಿ F54 5G ಬ್ಯಾಟರಿ ಬ್ಯಾಕ್‌ಅಪ್‌ : ಈ ಫೋನ್ 6,000 mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಜೊತೆಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್-C ಪೋರ್ಟ್ ಆಯ್ಕೆಗಳು ಇವೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A54 5G ಫೀಚರ್ಸ್‌ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ A54 5G ಸ್ಮಾರ್ಟ್‌ಫೋನ್ 6.4 ಇಂಚಿನ ಅಮೋಲೆಡ್‌ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಈ ಫೋನ್ ಎಕ್ಸಿನೋಸ್ 1380 SoC ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಆಧಾರಿತ ಒನ್‌ UI 5.1 ರನ್‌ ಮಾಡಲಿದೆ. ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಇದರಲ್ಲಿ ಓಐಎಸ್‌ ಬೆಂಬಲದ 50 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 12 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಆಯ್ಕೆಯನ್ನು ನೀಡಲಾಗಿದೆ.

ಹಾಗೆಯೇ ಗ್ಯಾಲಕ್ಸಿ A54 5G ಫೋನ್‌ ಸೆಲ್ಫಿ ಉದ್ದೇಶಕ್ಕೆ 32 ಮೆಗಾ ಪಿಕ್ಸಲ್ ಕ್ಯಾಮೆರಾ ಸೆನ್ಸರ್‌ ನೀಡಲಾಗಿದೆ. ಸ್ಯಾಮ್‌ಸಂಗ್‌ ಗ್ಯಾಲಕ್ಸಿ A54 5G ಬ್ಯಾಟರಿ ಸಾಮರ್ಥ್ಯ ಹಾಗೂ ಇತರೆ : ಈ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 25W ವೇಗದ ಚಾರ್ಜಿಂಗ್‌ ಬೆಂಬಲ ಪಡೆದುಕೊಂಡಿದೆ. ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿದೆ.

Best Mobiles in India

English summary
SAMSUNG Galaxy F54 5G to go on sale starting today via flipkart: details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+