Home
ಸುದ್ದಿಜಾಲ

Samsung Galaxy F54 5G: ಭಾರತದಲ್ಲಿ ಸ್ಯಾಮ್‌ಸಂಗ್‌ ಕಮಾಲ್‌! 6,000mAh ಸಾಮರ್ಥ್ಯದ ಹೊಸ ಫೋನ್‌ ಲಾಂಚ್‌!

ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಹೊಸ ಗ್ಯಾಲಕ್ಸಿ F54 5G (Samsung Galaxy F54 5G) ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಮೂಲಕ ತನ್ನ ಗ್ಯಾಲಕ್ಸಿ F ಸರಣಿಗೆ ಮತ್ತೊಂದು ಹೊಸ ಆಯ್ಕೆಯನ್ನು ಸೇರ್ಪಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬಿಗ್‌ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿರುವುದು ಮೇನ್‌ ಹೈಲೈಟ್‌ ಆಗಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್‌ ಭಾರತಕ್ಕೆ ಎಂಟ್ರಿ ನೀಡಿದೆ. ಇದು ಸ್ಯಾಮ್‌ಸಂಗ್‌ ಎಕ್ಸಿನೋಸ್‌ 1380 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಸ್ಮಾರ್ಟ್‌ಫೋನ್‌ನಲ್ಲಿ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ನೀಡಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಸ್ಯಾಮ್‌ಸಂಗ್‌ ಕಮಾಲ್‌! 6,000mAh ಸಾಮರ್ಥ್ಯದ ಹೊಸ ಫೋನ್‌ ಲಾಂಚ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಡಿಸ್‌ಪ್ಲೇ ವಿವರ: ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ ಸೂಪರ್ ಅಮೋಲೆಡ್‌ ಪ್ಲಸ್‌ ಡಿಸ್‌ಪ್ಲೇ ಆಗಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಹೊಂದಿದೆ.

ಭಾರತದಲ್ಲಿ ಸ್ಯಾಮ್‌ಸಂಗ್‌ ಕಮಾಲ್‌! 6,000mAh ಸಾಮರ್ಥ್ಯದ ಹೊಸ ಫೋನ್‌ ಲಾಂಚ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಪ್ರೊಸೆಸರ್‌ ಯಾವುದು: ಈ ಸ್ಮಾರ್ಟ್‌ಫೋನ್‌ ಇನ್-ಹೌಸ್ ಆಕ್ಟಾ-ಕೋರ್ 5nm ಎಕ್ಸಿನೋಸ್‌ 1380 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಮಾಹಿತಿ ಲಭ್ಯವಿಲ್ಲ.

ಭಾರತದಲ್ಲಿ ಸ್ಯಾಮ್‌ಸಂಗ್‌ ಕಮಾಲ್‌! 6,000mAh ಸಾಮರ್ಥ್ಯದ ಹೊಸ ಫೋನ್‌ ಲಾಂಚ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಕ್ಯಾಮೆರಾ ಸೆಟ್‌ಅಪ್‌ ಏನಿದೆ: ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಭಾರತದಲ್ಲಿ ಸ್ಯಾಮ್‌ಸಂಗ್‌ ಕಮಾಲ್‌! 6,000mAh ಸಾಮರ್ಥ್ಯದ ಹೊಸ ಫೋನ್‌ ಲಾಂಚ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ? ಇದು 6,000mAh ಸಾಮರ್ಥ್ಯದ ಬಿಗ್‌ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ 6, 5G, ಬ್ಲೂಟೂತ್ v5.3, GPS, ಗ್ಲೋನಾಸ್, ಬೀಡೌ ಮತ್ತು ಗೆಲಿಲಿಯೊ ಸಂಪರ್ಕವನ್ನು ಹೊಂದಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ನೊಂದಿಗೆ ಬರುತ್ತದೆ. ಜೊತೆಗೆ USB ಟೈಪ್-ಸಿ ಪೋರ್ಟ್ ಅನ್ನು ಸಹ ಹೊಂದಿದೆ.

ಭಾರತದಲ್ಲಿ ಸ್ಯಾಮ್‌ಸಂಗ್‌ ಕಮಾಲ್‌! 6,000mAh ಸಾಮರ್ಥ್ಯದ ಹೊಸ ಫೋನ್‌ ಲಾಂಚ್‌!

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಬೆಲೆ ಮತ್ತು ಲಭ್ಯತೆ: ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್‌ ಏಕೈಕ 8GB + 256GB ಆಯ್ಕೆಯಲ್ಲಿ ಬರಲಿದೆ. ಇದರ ಬೆಲೆ ಭಾರತದಲ್ಲಿ 27,999ರೂ.ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಉಲ್ಕೆ ನೀಲಿ ಮತ್ತು ಸ್ಟಾರ್ಡಸ್ಟ್ ಸಿಲ್ವರ್ ಕಲರ್‌ ಆಯ್ಕೆಗಳಲ್ಲಿ ಬರಲಿದೆ. ಇದನ್ನು ನೀವು ಫ್ಲಿಪ್‌ಕಾರ್ಟ್ ಮತ್ತು ಕಂಪನಿಯ ವೆಬ್‌ಸೈಟ್ ಮೂಲಕ ಜೂನ್ 6 ರಂದು ಮಧ್ಯಾಹ್ನ 3 ಗಂಟೆಗೆ ಪ್ರಿ ಬುಕ್ಕಿಂಗ್‌ ಮಾಡಬಹುದಾಗಿದೆ.

Best Mobiles in India

English summary
Samsung Galaxy F54 5G sports a 6.7-inch full-HD+ (2400 x 1080 pixels) Super AMOLED Plus display with a refresh rate of 120Hz and Corning Gorilla Glass 5 protection.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+