ಶೀಘ್ರದಲ್ಲೇ ಸ್ಯಾಮ್‌ಸಂಗ್‌ನ ಗ್ಯಾಲಕ್ಸಿ F55 5G ಬಿಡುಗಡೆ; ಲೆದರ್ ಫಿನಿಶ್ ಲುಕ್!
ಸ್ಯಾಮ್‌ಸಂಗ್ ಕಂಪನಿಯ ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಗೆ ಲಾಂಚ್ ಆಗಲಿದೆ. ಈ ಬಗ್ಗೆ ಸ್ಯಾಮ್‌ಸಂಗ್ ಮೊಬೈಲ್ ಸಂಸ್ಥೆಯು ಟೀಸರ್ ಬಿಡುಗಡೆಗೊಳಿಸಲು ಪ್ರಾರಂಭಿಸಿದ್ದು, ಗ್ರಾಹಕರ ಕುತೂಹಲ ಹೆಚ್ಚಿಸಿದೆ.
ಹೌದು, ಸ್ಯಾಮ್‌ಸಂಗ್‌ನ ಗ್ಯಾಲಕ್ಸಿ F55 5G ಸ್ಮಾರ್ಟ್‌ಫೋನ್ ಗ್ಯಾಲಕ್ಸಿ F54 5G ಗೆ ಉತ್ತರಾಧಿಕಾರಿಯಾಗಿ ಬಿಡುಗಡೆ ಎಂಟ್ರಿ ಕೊಡಲಿದೆ. ಸ್ಯಾಮ್‌ಸಂಗ್ ಕಂಪನಿಯು ಎಕ್ಸ್ ಪ್ಲಾಟ್‌ಫಾರ್ಮ್‌ನಲ್ಲಿ (ಟ್ವಿಟರ್) ಟೀಸರ್ ಶೇರ್ ಮಾಡಿದ್ದು, ಬರಲಿರುವ ಈ ಫೋನ್ ಹಿಂಭಾಗದ ಪ್ಯಾನೆಲ್‌ಗೆ vegan ಲೆದರ್ ಫಿನಿಶ್ ಇರುವುದನ್ನು ಖಚಿತಪಡಿಸುತ್ತದೆ.

ಹಾಗೆಯೇ ಟೀಸರ್ ಮಾಹಿತಿಯಂತೆ ಈ ಫೋನ್ ಹಿಂಬದಿಯಲ್ಲಿ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿರಲಿದೆ ಎಂದು ಸೂಚಿಸುತ್ತದೆ. ಅಲ್ಲದೇ ಇದು ಗ್ಯಾಲಕ್ಸಿ M55 ರೀಬ್ರ್ಯಾಂಡಿಂಗ್ ಆಗಿರಲಿದೆ ಎಂದು ಹೇಳಲಾಗುತ್ತಿದೆ. ಇನ್ನುಳಿದಂತೆ ಸದ್ಯದಲ್ಲೇ ಲಗ್ಗೆ ಇಡಲಿರುವ ಈ ಫೋನಿನ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ನಿರೀಕ್ಷಿತ ಫೀಚರ್ಸ್
ಸ್ಯಾಮ್‌ಸಂಗ್ ಸಂಸ್ಥೆಯ ಈ ಮೊಬೈಲ್ 6.7 ಇಂಚಿನ ಸೂಪರ್ AMOLED ಡಿಸ್‌ಪ್ಲೇ ಒಳಗೊಂಡಿರಲಿದ್ದು, ಇದರೊಂದಿಗೆ 120Hz ರಿಫ್ರೆಶ್ ರೇಟ್ ಪಡೆದಿರಲಿದೆ. ಹಾಗೆಯೇ ಈ ಫೋನ್ 1000 ನಿಟ್ಸ್ ಗರಿಷ್ಠ ಬ್ರೈಟ್ನೆಸ್ ಸೌಲಭ್ಯ ಪಡೆದಿರಲಿದೆ ಎಂದು ಹೇಳಲಾಗುತ್ತಿದೆ.
ಹಾಗೆಯೇ ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 7 ಜೆನ್ 1 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿರುವ ನಿರೀಕ್ಷೆಗಳು ಇವೆ. ಇದರೊಂದಿಗೆ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಕೂಡಾ ಇರಲಿದೆ ಎನ್ನಲಾಗಿದೆ. ಅಲ್ಲದೇ ಇದು 12GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಅನ್ನು ಒಳಗೊಂಡಿರಲಿದೆ.
ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಮೂರು ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇರಲಿದೆ. ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಸೌಲಭ್ಯ ಹೊಂದಿದ್ದು, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿರಲಿದೆ. ಇನ್ನು ಇದರ ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿ ಇರುವ ಸಾಧ್ಯತೆ.
ಬರಲಿರುವ ಈ ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿರಲಿದ್ದು, ಇದರೊಂದಿಗೆ 45W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿರಲಿದೆ. ಹಾಗೆಯೇ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್ - C ಪೋರ್ಟ್ ಆಯ್ಕೆಗಳು ಕೂಡಾ ಇರಲಿವೆ.
ಹಾಗೆಯೇ ಟಿಪ್‌ಸ್ಟರ್ ಅಭಿಷೇಕ್ ಯಾದವ್ ಅವರ ಇತ್ತೀಚಿನ ಲೀಕ್ ಮಾಹಿತಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ F55 5G ಫೋನಿನ ಬಗ್ಗೆ ಕೆಲವು ಫೀಚರ್ಸ್ ಅನ್ನು ಬಹಿರಂಗಪಡಿಸಿದೆ. ಅಂದಹಾಗೆ ಈ ಮೊಬೈಲ್ ಆರಂಭಿಕ ಬೆಲೆಯು 26,999 ರೂ.ಗಳು ಎನ್ನಲಾಗಿದೆ.
ಇನ್ನು ಕಂಪನಿಯ ಗ್ಯಾಲಕ್ಸಿ A54 5G ಮೊಬೈಲ್ 6.4 ಇಂಚಿನ ಅಮೋಲೆಡ್ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಎಕ್ಸಿನೋಸ್ 1380 SoC ಪ್ರೊಸೆಸರ್ ಮೂಲಕ ಕಾರ್ಯ ಮಾಡಲಿದ್ದು, ಆಂಡ್ರಾಯ್ಡ್ 13 ಆಧಾರಿತ ಒನ್ UI 5.1 ಸಪೋರ್ಟ್ ಇದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 25W ವೇಗದ ಚಾರ್ಜಿಂಗ್ ಸಪೋರ್ಟ್ ಪಡೆದುಕೊಂಡಿದೆ.


Click it and Unblock the Notifications








