ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಫಸ್ಟ್ ಸೇಲ್: ಬೆಲೆ ಎಷ್ಟು?..ಫೀಚರ್ಸ್ ಏನು?
ಸ್ಯಾಮ್‌ಸಂಗ್ ಸಂಸ್ಥೆ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ನೂತನ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಆಯೋಜಿಸಿರುವ ಬಿಗ್ ಬಿಲಿಯನ್ ಡೇಸ್ ನಲ್ಲಿ ಮೊದಲ ಬಾರಿ ಸೇಲ್ ಶುರು ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆರಂಭಿಕ ವೇರಿಯಂಟ್ ಬೆಲೆಯು ಆಗಿದ್ದು, ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ 23,999ರೂ.ಗೆ ಲಭ್ಯವಾಗಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಇಂದು ಮೊದಲ ಮಾರಾಟ ಪ್ರಾರಂಭಿಸಲಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಹೊಂದಿದ್ದು, ಅವುಗಳು ಕ್ರಮವಾಗಿ 6GB + 128GB ಸ್ಟೋರೇಜ್ ಹಾಗೂ 6GB + 128GB ಸ್ಟೋರೇಜ್ ವೇರಿಯಂಟ್ ಹೊಂದಿವೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 7,000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಬ್ಲೂ, ಗ್ರೀನ್ ಹಾಗೂ ಗ್ರೇ ಬಣ್ಣಗಳ ಆಯ್ಕೆ ಪಡೆದಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.

ಡಿಸ್‌ಪ್ಲೇ ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ 1,080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮಲ್ಟಿ ಟಚ್ ಸ್ಕ್ರೀನ್ ವ್ಯವಸ್ಥೆಯನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 405PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಯಾವ ಪ್ರೊಸೆಸರ್ ಇದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ exynos 9825 SoC ಪ್ರೊಸೆಸರ್ ಹೊಂದಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 6GB RAM ಮತ್ತು 128GB ಸ್ಟೋರೇಜ್ ಮತ್ತು 8GB RAM ಮತ್ತು 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ.

ಕ್ವಾಡ್ ಕ್ಯಾಮೆರಾ ಸೆನ್ಸಾರ್
ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾವು ಕ್ರಮವಾಗಿ 5ಎಂಪಿ ಸೆನ್ಸಾರ್ ಬಲವನ್ನು ಪಡೆದಿವೆ. ಇದರೊಂದಿಗೆ ಸೆಲ್ಫಿಗಾಗಿ 32ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳಿವೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ ಸೈಡ್ ಮೌಂಟ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಆಂಡ್ರಾಯ್ಡ್ 11 ಓಎಸ್, 4G VoLTE, ವೈಫೈ, ಬ್ಲೂಟತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಎಷ್ಟು ಮತ್ತು ಲಭ್ಯತೆ
ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. 6GB RAM ಮತ್ತು 128GB ಸ್ಟೋರೇಜ್‌ನ ಬೇಸ್ ವೇರಿಯಂಟ್ ಬೆಲೆಯು 23,999ರೂ. ಆಗಿದೆ. ಹಾಗೆಯೇ 8GB RAM ಮತ್ತು 128GB ವೇರಿಯಂಟ್ ಬೆಲೆಯು 25,999ರೂ.ಗಳು ಆಗಿದೆ. ಇನ್ನು ಈ ಫೋನ್ (ಇಂದು) ಫೆ. 22 ರಂದು ಫಸ್ಟ್ ಸೇಲ್ ಶುರುವಾಗಲಿದ್ದು, ಪ್ರಮುಖ ಆನ್‌ಲೈನ್ ತಾಣಗಳಲ್ಲಿ ಖರೀದಿಗೆ ಸಿಗಲಿದೆ.


Click it and Unblock the Notifications








