ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಬಿಡುಗಡೆಗೆ ದಿನಾಂಕ ಫಿಕ್ಸ್!
ದಕ್ಷಿಣ ಕೊರಿಯಾದ ಸ್ಮಾರ್ಟ್‌ಫೋನ್ ತಯಾರಿಕಾ ಕಂಪೆನಿ ಸ್ಯಾಮ್‌ಸಂಗ್ ಈಗಾಗಲೇ ತನ್ನ ಜನಪ್ರಿಯ ಗ್ಯಾಲಕ್ಸಿ ಸರಣಿಯ ಹಲವು ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಇತ್ತೀಚಿಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F ಸರಣಿಯಲ್ಲಿ ಲಾಂಚ್ ಮಾಡಿರುವ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್ ಗ್ರಾಹಕರ ಗಮನ ಸೆಳೆದಿದೆ. ಅದರ ಯಶಸ್ಸಿನ ಬೆನ್ನಲ್ಲೇ ಇದೀಗ ಸ್ಯಾಮ್‌ಸಂಗ್ ಅದೇ ಸರಣಿಯಲ್ಲಿ ಗ್ಯಾಲಕ್ಸಿ F62 ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆ ತನ್ನ ಹೊಸ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಲು ಸಜ್ಜಾಗಿದ್ದು, ಇದೇ ಫೆಬ್ರವರಿ 15ರಂದು ಅಧಿಕೃತವಾಗಿ ಭಾರತದಲ್ಲಿ ಅನಾವರಣ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ರಚನೆ, ಪಂಚ್ ಹೋಲ್ ಡಿಸ್‌ಪ್ಲೇ ಮಾದರಿಗಳನ್ನು ಪಡೆದಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಹಾಗೆಯೇ ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಮತ್ತೊಂದು ಹೈಲೈಟ್ ಆಗಿರಲಿದೆ. ಇನ್ನುಳಿದಂತೆ ಈ ಫೋನದ ಯಾವೆಲ್ಲಾ ಫೀಚರ್ಸ್ ಹೊಂದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ 1,080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮಲ್ಟಿ ಟಚ್ ಸ್ಕ್ರೀನ್ ವ್ಯವಸ್ಥೆಯನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 405PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್ ಬಲ
ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಎಕ್ಸಿನೋಸ್ 9611 ಪ್ರೊಸೆಸರ್ ಅನ್ನು ಹೊಂದಿದ್ದು, ಒನ್ ಯುಐ ಆಧಾರಿತ ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM+128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ.

ಕ್ವಾಡ್ ಕ್ಯಾಮೆರಾ
ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 5ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿರಲಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ 7,000mAh ಸಾಮರ್ಥ್ಯದ ಬೃಹತ್ ಬ್ಯಾಟರಿ ಹೊಂದಿರುವ ಸಾಧ್ಯತೆ ಇದೆ. ಆದರೆ ಇದು ಯಾವ ರೀತಿಯ ಚಾರ್ಜಿಂಗ್ ವೇಗವನ್ನು ಬೆಂಬಲಿಸಲಾಗುತ್ತದೆ ಎಂಬುದು ಸ್ಪಷ್ಟವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಅನ್ನು ಬೆಂಬಲಿಸಲಿದೆ. ಈ ಫೋನ್ ಫೆ.15ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ.


Click it and Unblock the Notifications








