ಸದ್ಯದಲ್ಲೇ ಬರಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್!
ದಕ್ಷಿಣ ಕೊರಿಯಾ ಮೂಲದ ಸ್ಮಾರ್ಟ್‌ಫೋನ್ ದೈತ್ಯ ಸ್ಯಾಮ್‌ಸಂಗ್ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಎ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಸ್ಯಾಮ್‌ಸಂಗ್ ಇದೀಗ ತನ್ನ ಹೊಸ ಗ್ಯಾಲಕ್ಸಿ F62 ಮಿಡ್-ರೇಂಜ್ ಫೋನ್ ಅನ್ನು ಪ್ರಕಟಿಸುವ ನಿರೀಕ್ಷೆಯಿದೆ. ಇದು 25,0000 ರೂ.ಗಳಿಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಸಾಧ್ಯತೆ ಇದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ತನ್ನ ಹೊಸ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಅನಾವರಣಗೊಳಿಸಲು ಸಿದ್ಧತೆ ನಡೆಸಿದೆ. ಇದು 6.7 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಲಿದ್ದು, 7,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ 1,080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮಲ್ಟಿ ಟಚ್ ಸ್ಕ್ರೀನ್ ವ್ಯವಸ್ಥೆಯನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 405PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್
ಇದು ಎಕ್ಸಿನೋಸ್ 9611 ಪ್ರೊಸೆಸರ್ ಅನ್ನು ಹೊಂದಿದ್ದು, ಒನ್ ಯುಐ ಆಧಾರಿತ ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM+128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ.

ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್, ನಾಲ್ಕನೇ ಕ್ಯಾಮೆರಾ 5ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿರಲಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ 7,000mAh ಸಾಮರ್ಥ್ಯದ ಬೃಹತ್ ಬ್ಯಾಟರಿ ಹೊಂದಿರುವ ಸಾಧ್ಯತೆ ಇದೆ. ಆದರೆ ಇದು ಯಾವ ರೀತಿಯ ಚಾರ್ಜಿಂಗ್ ವೇಗವನ್ನು ಬೆಂಬಲಿಸಲಾಗುತ್ತದೆ ಎಂಬುದು ಸ್ಪಷ್ಟವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಅನ್ನು ಬೆಂಬಲಿಸಲಿದೆ. ಸದ್ಯ ಇದು ಇದೇ ತಿಂಗಳಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ. ಆದರೆ ಇದರ ಬೆಲೆ ಏನು ಅನ್ನೊದನ್ನ ಇನ್ನು ಕೂಡ ಲಭ್ಯವಾಗಿಲ್ಲ.


Click it and Unblock the Notifications








