ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಫೋನ್ ಬೆಲೆಯಲ್ಲಿ ಭಾರೀ ಇಳಿಕೆ; ಹೊಸ ಬೆಲೆ ಎಷ್ಟು?
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯು ಗ್ಯಾಲ್ಯಾಕ್ಸಿ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಆ ಪೈಕಿ ಇತ್ತೀಚಿಗೆ ಗ್ಯಾಲಕ್ಸಿ F ಸರಣಿಯಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದ್ದು, ಅವುಗಳಲ್ಲಿ ಗ್ಯಾಲಕ್ಸಿ F62 ಹೈ ಎಂಡ್ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಆದ್ರೆ ಇದೀಗ ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ದಿಢೀರ್ ಇಳಿಕೆ ಆಗಿದ್ದು, ಮತ್ತೆ ಗ್ರಾಹಕರನ್ನು ತಿರುಗಿ ನೋಡುವಂತೆ ಮಾಡಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗಿನ ಹೊಸ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ 6,000ರೂ.ಗಳ ಇಳಿಕೆ ಆಗಿದೆ. ಈ ಫೋನ್ 6GB RAM ಮತ್ತು 128GB ಮತ್ತು 8GB RAM ಮತ್ತು 128GB ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಬೆಲೆ ಇಳಿಕೆಯಿಂದಾಗಿ ಈಗ ಫ್ಲಿಪ್‌ಕಾರ್ಟ್ ತಾಣದಲ್ಲಿ 6GB RAM ವೇರಿಯಂಟ್ ಫೋನ್ 17,999ರೂ.ಗಳಿಗೆ ಲಭ್ಯವಾಗಲಿದೆ. ಹಾಗೆಯೇ 8GB RAM ವೇರಿಯಂಟ್ ಫೋನ್ 19,999ರೂ.ಗಳಿಗೆ ಖರೀದಿಸಬಹುದಾಗಿದೆ. ಹಾಗಾದರೇ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ 1,080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮಲ್ಟಿ ಟಚ್ ಸ್ಕ್ರೀನ್ ವ್ಯವಸ್ಥೆಯನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 405PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಯಾವ ಪ್ರೊಸೆಸರ್ ಇದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ exynos 9825 SoC ಪ್ರೊಸೆಸರ್ ಹೊಂದಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 6GB RAM ಮತ್ತು 128GB ಸ್ಟೋರೇಜ್ ಮತ್ತು 8GB RAM ಮತ್ತು 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ.

ಕ್ವಾಡ್ ಕ್ಯಾಮೆರಾ ಸೆನ್ಸಾರ್
ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾವು ಕ್ರಮವಾಗಿ 5ಎಂಪಿ ಸೆನ್ಸಾರ್ ಬಲವನ್ನು ಪಡೆದಿವೆ. ಇದರೊಂದಿಗೆ ಸೆಲ್ಫಿಗಾಗಿ 32ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳಿವೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್
ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ ಸೈಡ್ ಮೌಂಟ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಆಂಡ್ರಾಯ್ಡ್ 11 ಓಎಸ್, 4G VoLTE, ವೈಫೈ, ಬ್ಲೂಟತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಎಷ್ಟು ಮತ್ತು ಲಭ್ಯತೆ
ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. 6GB RAM ಮತ್ತು 128GB ಸ್ಟೋರೇಜ್‌ನ ಬೇಸ್ ವೇರಿಯಂಟ್ ಬೆಲೆಯು 17,999ರೂ. ಆಗಿದೆ. ಹಾಗೆಯೇ 8GB RAM ಮತ್ತು 128GB ವೇರಿಯಂಟ್ ಬೆಲೆಯು 19,999ರೂ.ಗಳು ಆಗಿದೆ.


Click it and Unblock the Notifications