Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಫೋಲ್ಡ್‌ ಲೈಟ್‌ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!

ಸ್ಮಾರ್ಟ್‌ಫೋನ್‌ ವಲಯದ ದೈತ್ಯ ಎನಿಸಿಕೊಂಡಿರುವ ಸ್ಯಾಮ್‌ಸಂಗ್ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದಲೇ ಗುರುತಿಸಿಕೊಂಡಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರೋ ಸ್ಯಾಮ್‌ಸಂಗ್‌ ಈಗಾಗಲೇ ಫೋಲ್ಡ್ ಮಾದರಿಯ ಸ್ಮಾರ್ಟ್‌ಫೋನ್‌ ಪರಿಚಯಿಸಿ ಸ್ಮಾರ್ಟ್‌ಫೋನ್‌ ವಲಯದಲ್ಲಿ ಭಾರಿ ಸಂಚಲನವನ್ನ ಸೃಷ್ಟಿ ಮಾಡಿತ್ತು. ಸದ್ಯ ಇದೀಗ ಮತ್ತೊಂದು ಫೋಲ್ಡ್‌ ಮಾದರಿಯ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸ್ಯಾಮ್‌ಸಂಗ್‌ ಸಿದ್ದತೆ ನಡೆಸಿದ್ದು, ಈ ಸ್ಮಾರ್ಟ್‌ಫೋನ್‌ 2020 ರ ದ್ವಿತೀಯಾರ್ಧದಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗಿದೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ದಿಗ್ಗಜ ಸ್ಯಾಮ್‌ಸಂಗ್ ತನ್ನ ಗ್ಯಾಲಕ್ಸಿ ಫೋಲ್ಡ್‌ 2 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದ್ದು, ಈ ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ನೋಟ್ 20 ಸರಣಿಯ ಜೊತೆಗೆ ಬಿಡುಗಡೆ ಆಗಲಿದೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲ ಈ ಹೊಸ ಮಡಚಬಹುದಾದ ಫೋನ್ ದೊಡ್ಡ ಗಾತ್ರದ ಡಿಸ್‌ಪ್ಲೇ , ಹಾಗೂ ದೀರ್ಘಕಾಲ ಬಾಳಿಕೆ ಬರುವ ಮಡಚಬಹುದಾದ ಸ್ಕ್ರೀನ್‌ ಮತ್ತು ಕ್ಯಾಮೆರಾ ನಿಯೋಜನೆಗಳನ್ನ ಹೊಂದಿದೆ ಎಂದು ಹೇಳಲಾಗ್ತಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಕುರಿತ ಕೆಲ ಇಂಟ್ರೆಸ್ಟಿಂಗ್‌ ಮಾಹಿತಿ ಆನ್‌ಲೈನ್‌ನಲ್ಲಿ ಸೋರಿಕೆ ಆಗಿದೆ. ಸೋರಿಕೆ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ವಿಶೇಷತೆಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.ಸ

ಕಂಪೆನಿ

ಸದ್ಯ ಸ್ಯಾಮ್‌ಸಂಗ್ ಕಂಪೆನಿ ಮತ್ತೊಂದು ಮಡಿಸಬಹುದಾದ ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್ ಗ್ಯಾಲಕ್ಸಿ ಫೋಲ್ಡ್ ಲೈಟ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಹೆಚ್ಚು ಕೈಗೆಟುಕುವ ಫೋಲ್ಡಬಲ್ ಫೋನ್ ಆಗಿದ್ದು, ಹೆಚ್ಚು ಕಡಿಮೆ $ 1,099 (ಸರಿಸುಮಾರು 82,800 ರೂ.) ಬೆಲೆಗೆ ಲಭ್ಯವಾಗುವ ಸಾಧ್ಯತೆ ಇದೆ. ಇನ್ನು ಈ ಸ್ಮಾರ್ಟ್‌ಫೋನ್‌ ದೊಡ್ಡ ಗಾತ್ರದ ಡಿಸ್‌ಪ್ಲೇ , ಹಾಗೂ ದೀರ್ಘಕಾಲ ಬಾಳಿಕೆ ಬರುವ ಮಡಚಬಹುದಾದ ಸ್ಕ್ರೀನ್‌ ಮತ್ತು ಕ್ಯಾಮೆರಾ ನಿಯೋಜನೆಗಳನ್ನ ಹೊಂದಿದೆ ಎಂದು ನಿರೀಕ್ಷಿಸಲಾಗಿದೆ. ಅಲ್ಲದೆ ಕ್ಯಾಮೆರಾ ನಿಯೋಜನೆಯಲ್ಲಿ ಹೊಸ ಮಾದರಿಯ ವಿನ್ಯಾಸವನ್ನ ನಿರೀಕ್ಷಿಸಲಾಗಿದೆ.

ಸ್ಮಾರ್ಟ್‌ಫೋನ್‌

ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಹೊಂದಿರುವ ಸಾದ್ಯತೆ ಇದೆ ಎನ್ನಲಾಗಿದೆ. ಆದರೆ ಈ ಸ್ಮಾರ್ಟ್‌ಫೋನ್‌ 5G ಗೆ ಬೆಂಬಲಿಸುವುದಿಲ್ಲ ಅನ್ನೊ ಮಾಹಿತಿ ಲೀಕ್‌ ಆಗಿದೆ. ಇನ್ನು ವಿನ್ನರ್ 2 ಎಂಬ ಸಂಕೇತನಾಮ ಹೊಂದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ ಫೋಲ್ಡ್ ಲೈಟ್ 256GB ಸಂಗ್ರಹ ಸಾಮರ್ಥ್ಯವನ್ನ ಹೊಂದಿರಬಹುದು ಎನ್ನಲಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಮಿರರ್ ಬ್ಲ್ಯಾಕ್ ಮತ್ತು ಮಿರರ್ ಪರ್ಪಲ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗುವ ಸಾಧ್ಯತೆ ಇದೆ.

ಸ್ಮಾರ್ಟ್‌ಫೋನ್‌

ಇನ್ನು ಈ ಸ್ಮಾರ್ಟ್‌ಫೋನ್‌ ಹೊರಭಾಗದಲ್ಲಿ ಅಲ್ಯೂಮಿನಿಯಂ ಮತ್ತು ಗಾಜಿನಿಂದ ನಿರ್ಮಾಣವಾಗಿರುವ ನಿರೀಕ್ಷೆಯಿದೆ. ಇನ್ನು ಇದು ಮೂಲ ಸ್ಯಾಮ್‌ಸಂಗ್ ಗ್ಯಾಲಕ್ಸಿ ಪಟ್ಟು ನೀಡಿರುವಂತೆಯೇ ಇರಬಹುದು ಎನ್ನಲಾಗ್ತಿದೆ. ಅಲ್ಲದೆ, ಗ್ಯಾಲಕ್ಸಿ Z ಫ್ಲಿಪ್‌ನಂತೆಯೇ ದ್ವಿತೀಯ ಹೊರಗಿನ ಪ್ರದರ್ಶನ ಗಾತ್ರದಲ್ಲಿ ಸಣ್ಣದಾಗಿರುತ್ತದೆ ಎಂದು ಹೇಳಲಾಗ್ತಿದೆ. ಜೊತೆಗೆ ಸೆಲ್ಫಿ ಕ್ಯಾಮೆರಾಕ್ಕಾಗಿ ಇನ್ಫಿನಿಟಿ-ಒ ಪ್ಯಾನೆಲ್‌ ಅನ್ನು ಹೊಂದಿದೆ. ದೊಡ್ಡ ಗಾತ್ರದ ಬಾಹ್ಯ ಡಿಸ್‌ಪ್ಲೇಯನ್ನ ಬರಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Samsung Galaxy Fold Lite is reported to be priced at $1,099, and is tipped to lack 5G support.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+