ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಟ್ಯಾಬ್‌ s7 ಮತ್ತು s7+ ಅನಾವರಣ!

|

ಸ್ಮಾರ್ಟ್‌ಫೋನ್‌ ದಿಗ್ಗಜ ಸ್ಯಾಮ್‌ಸಂಗ್ ತನ್ನ ಹೊಸ ಗ್ಯಾಲಕ್ಸಿ ಟ್ಯಾಬ್ S7 ಮತ್ತು ಗ್ಯಾಲಕ್ಸಿ ಟ್ಯಾಬ್ S7 + ಅನ್ನು ಬಿಡುಗಡೆ ಮಾಡಿದೆ. ಇನ್ನು ಗ್ಯಾಲಕ್ಸಿ ಟ್ಯಾಬ್ S7 LCD ಪ್ಯಾನೆಲ್‌ ಅನ್ನು ಹೊಂದಿದ್ದು, ಗ್ಯಾಲಕ್ಸಿ ಟ್ಯಾಬ್ S7 + ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೆ ಸ್ಯಾಮ್‌ಸಂಗ್ ನ್ಯೂ ಬುಕ್‌ ಕವರ್ ಕೀಬೋರ್ಡ್ ಅನ್ನು ವಿನ್ಯಾಸಗೊಳಿಸಿದ್ದು ಇದು ವರ್ಧಿತ ಉತ್ಪಾದಕತೆಯ ಅನುಭವವನ್ನು ನೀಡಲು ಇಂಟರ್‌ಬಿಲ್ಟ್‌ ಟ್ರ್ಯಾಕ್‌ಪ್ಯಾಡ್ ಹೊಂದಿದೆ. ಇದಲ್ಲದೆ, ಗ್ಯಾಲಕ್ಸಿ ಟ್ಯಾಬ್ S7 ಮತ್ತು ಗ್ಯಾಲಕ್ಸಿ ಟ್ಯಾಬ್ S7 + ಎರಡೂ AKGಯಿಂದ ಟ್ಯೂನ್ ಮಾಡಲಾದ ಕ್ವಾಡ್ರುಪಲ್ ಸ್ಪೀಕರ್‌ಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಗ್ಯಾಲಕ್ಸಿ ಟ್ಯಾಬ್ S7 ಮತ್ತು ಗ್ಯಾಲಕ್ಸಿ ಟ್ಯಾಬ್ S7 + ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಟ್ಯಾಬ್‌ಗಳು ಡಾಲ್ಬಿ ಅಟ್ಮೋಸ್ ಸರೌಂಡ್ ಸೌಂಡ್ ಟೆಕ್ನಾಲಜಿಯನ್ನು ಒಳಗೊಂಡಿವೆ. ಇನ್ನು ಈ ಟ್ಯಾಬ್ಲೆಟ್‌ಗಳು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದಲ್ಲದೆ, ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S7 ಸರಣಿಯು ವೈ-ಫೈ ಒನ್ಲಿ ಮತ್ತು ವೈ-ಫೈ + 4G ಮತ್ತು ವೈ-ಫೈ + 5G ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬರುತ್ತದೆ. ಇನ್ನುಳಿದಂತೆ ಯಾವೆಲ್ಲಾ ವಿಶೇಷತೆಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S7

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S7

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S7 2,560x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 11 ಇಂಚಿನ WQXGA LTPS TFT ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 274PP ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಟ್ಯಾಬ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865+ SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 8GB RAM ಮತ್ತು 256GB ಆತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S7 ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ f/ 2.2 ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಹೊಂದಿದೆ . ಇನ್ನು ಈ ಕ್ಯಾಮೆರಾ ಸೆಟ್‌ಅಪ್ ಅನ್ನು ಎಲ್ಇಡಿ ಫ್ಲ್ಯಾಷ್‌ನೊಂದಿಗೆ ಜೋಡಿಸಲಾಗಿದೆ ಮತ್ತು ಆಟೋಫೋಕಸ್ ಬೆಂಬಲವನ್ನು ಹೊಂದಿದೆ. ಇದಲ್ಲದೆ, 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದನ್ನು ವೆಬ್‌ಕ್ಯಾಮ್‌ನಂತೆ ಬಳಸಬಹುದಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಗ್ಯಾಲಕ್ಸಿ ಟ್ಯಾಬ್ S7 7,040mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು ಒಂದೇ ಚಾರ್ಜ್‌ನಲ್ಲಿ ಮೂರು ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಅನ್ನು ನೀಡಲಿದೆ. ಇದಲ್ಲದೆ ಈ ಟ್ಯಾಬ್ಲೆಟ್ ತ್ವರಿತ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ. ಅಲ್ಲದೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 6, ಬ್ಲೂಟೂತ್, GPS ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಒದಗಿಸಿದೆ. ಜೊತೆಗೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್‌ ಸೆನ್ಸಾರ್ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ ಎಸ್ 7 +

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ ಎಸ್ 7 +

ಗ್ಯಾಲಕ್ಸಿ ಟ್ಯಾಬ್ S7+ 2,800x1,752 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 12.4-ಇಂಚಿನ WQXGA + ಡಿಸ್‌ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಮತ್ತು 287 ಪಿಪಿ ಪಿಕ್ಸೆಲ್ ಸಾಂದ್ರತೆಯೊಂದಿಗೆ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಟ್ಯಾಬ್ಲೆಟ್ ಸ್ನಾಪ್‌ಡ್ರಾಗನ್ 865+ SoC ಪ್ರೊಸೆಸರ್‌ ವೇಗವನ್ನು ಹೊಂದಿದೆ, ಜೊತೆಗೆ 8GB RAM ಮತ್ತು 256GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು. 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು 10,090mAh ಸಾಮರ್ಥ್ಯದ ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು ನಾಲ್ಕು ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಅನ್ನು ಹೊಂದಿದ್ದು, ಇದು 45W ವರೆಗೆ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು 6GB RAM + 128GB ಶೇಖರಣಾ ಮಾದರಿಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S7 ಬೆಲೆ ಯುರೋ 699 (ಸುಮಾರು 62,000 ರೂ.) ಗೆ ನಿಗದಿಪಡಿಸಲಾಗಿದೆ, ಆದರೆ 8GB RAM + 256GB ಸ್ಟೋರೇಜ್ ರೂಪಾಂತರವು ಯುರೋ 779 (ಸುಮಾರು 69,100 ರೂ.) ಬೆಲೆಯನ್ನು ಹೊಂದಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S7 + 6GB RAM + 128GB ಶೇಖರಣಾ ರೂಪಾಂತರದ ಬೆಲೆ ಯುರೋ 899 (ಸುಮಾರು ರೂ. 79,700) ಮತ್ತು ಇದರ 8GB RAM ರಾಮ್ + 256 ಜಿಬಿ ಶೇಖರಣಾ ಆಯ್ಕೆಯು ಯುರೋ 979 (ಸುಮಾರು ರೂ. 86,800) ನಲ್ಲಿ ಬರುತ್ತದೆ. ಇದು ಆಯ್ದ ಮಾರುಕಟ್ಟೆಗಳಲ್ಲಿ ಆಗಸ್ಟ್ 21 ರಿಂದ ಮಿಸ್ಟಿಕ್ ಬ್ಲ್ಯಾಕ್, ಮಿಸ್ಟಿಕ್ ಕಂಚು ಮತ್ತು ಮಿಸ್ಟಿಕ್ ಸಿಲ್ವರ್ ಬಣ್ಣ ಆಯ್ಕೆಗಳಲ್ಲಿ ಟ್ಯಾಬ್ಲೆಟ್‌ಗಳು ಮಾರಾಟವಾಗಲಿವೆ.

Most Read Articles
Best Mobiles in India

English summary
Samsung Galaxy Tab S7 price begins at EUR 699, while Samsung Galaxy Tab S7+ starts at EUR 899.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X