ಆಪ್‌ಗ್ರೇಡ್‌ ಆವೃತ್ತಿಯಲ್ಲಿ ಲಾಂಚ್‌ ಆಯ್ತು ಗ್ಯಾಲಕ್ಸಿ J2 ಕೋರ್‌ ಸ್ಮಾರ್ಟ್‌ಫೋನ್‌!

|

ಸ್ಮಾರ್ಟ್‌ಫೋನ್‌ ವಲಯದಲ್ಲಿ ದಿಗ್ಗಜ ಎಂದೇ ಪ್ರಸಿದ್ಧಿ ಪಡೆದಿರುವ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಎರಡು ವರ್ಷಗಳಷ್ಟು ಹಳೆಯದಾದ ಸ್ಮಾರ್ಟ್‌ಫೋನ್‌ ಆವೃತ್ತಿಯನ್ನ ಆಪ್‌ಗ್ರೇಡ್‌ ಮಾಡಿ ಮತ್ತೆ ಬಿಡುಗಡೆ ಮಾಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಸ್ಯಾಮ್‌ಸಂಗ್‌ 2018 ರಲ್ಲಿ ಬಿಡುಗಡೆಯಾದ ಗ್ಯಾಲಕ್ಸಿ J2 ಕೋರ್‌ ಅನ್ನು ಬಿಡುಗೆಡ ಮಾಡಿತ್ತು. ಇದೀಗ ಅದೇ ಆವೃತ್ತಿಯನ್ನ ಆಪ್‌ಗ್ರೇಡ್‌ ಮಾದರಿಯಲ್ಲಿ ಬಿಡುಗಡೆ ಮಾಡುತ್ತಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಗ್ಯಾಲಕ್ಸಿ J2 ಕೋರ್‌ ಸ್ಮಾರ್ಟ್‌ಫೋನ್‌ ನವೀಕರಿಸಿದ ಆವೃತ್ತಿಯಲ್ಲಿ ಬಿಡುಗಡೆ ಮಾಡುತ್ತಿದೆ. ಸದ್ಯ ಬಿಡುಗಡೆ ಆಗಿರುವ ಗ್ಯಾಲಕ್ಸಿ J2 ಕೋರ್ 2020 ಹೊಸ ವಿನ್ಯಾಸ ಮತ್ತು ಫೀಚರ್ಸ್‌ಗಳಲ್ಲಿ ಹಲವು ಸುದಾರಣೆಗಳನ್ನ ಒಳಗೊಂಡಿದೆ. ಇನ್ನು ನಿಮಗೆಲ್ಲಾ ತಿಳಿದಿರುವಂತೆ ಸ್ಯಾಮ್‌ಸಂಗ್ ಕಳೆದ ವರ್ಷ ತನ್ನ ಸ್ಮಾರ್ಟ್‌ಫೋನ್ ಕಾರ್ಯತಂತ್ರವನ್ನು ಪರಿಷ್ಕರಿಸಿತ್ತು. ಅಂದಿನಿಂದ ‘J' ಸರಣಿಯ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿಲ್ಲ. ಇದೀಗ ತನ್ನ ಹಳೆಯ ‘ಜೆ' ಸರಣಿಯನ್ನು ಗ್ಯಾಲಕ್ಸಿ J2 ಕೋರ್ 2020 ಅಪ್‌ಗ್ರೇಡ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ J2 ಕೋರ್ 2020 ಸ್ಮಾರ್ಟ್‌ಫೋನ್‌ 540x960 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 5 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಕ್ಯೂ ಹೆಚ್‌ಡಿ TFT LCD ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ಉತ್ತಮ ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನ ಹೊಂದಿದ್ದು, ವೀಡಿಯೊ ವೀಕ್ಷಣೆ ಹಾಗೂ ವೀಡಿಯೊ ಕರೆಗಳಿಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಗೆ ಆಪ್ಡೇಟ್‌ ಆವೃತ್ತಿಯನ್ನ ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ 1.4GHz ಕ್ವಾಡ್-ಕೋರ್ SoC ಪ್ರೊಸೆಸರ್‌ ವೇಗವನ್ನ ಪಡೆದುಕೊಂಡಿದ್ದು, ಆಂಡ್ರಾಯ್ಡ್ 8.1 ಓರಿಯೊ (ಗೋ ಆವೃತ್ತಿ) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 1GB RAM ಮತ್ತು 16GB ಆಂತರಿಕ ಸಾಮರ್ಥ್ಯವನ್ನ ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ. ಹಾಗೇ ನೊಡೋದಾದ್ರೆ 2018 ರ ಆವೃತ್ತಿಯಲ್ಲಿ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಕೇವಲ 8GB ಮಾತ್ರ ಹೊಂದಿತ್ತು ಅನ್ನೊದನ್ನ ನಾವು ಗಮನಿಸಬೇಕಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಇನ್ನು ಈ ಸ್ಮಾರ್ಟ್‌ಫೋನ್‌ ಎಂದಿನಂತೆ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನ ಹೊಂದಿದೆ. ಇನ್ನು ಈ ರಿಯರ್‌ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಜೊತೆಗೆ f/ 2.2 ಲೆನ್ಸ್‌ ಅನ್ನು ಹೊಂದಿದೆ. ಮತ್ತು ಎಲ್ಇಡಿ ಫ್ಲ್ಯಾಷ್ ಅನ್ನು ಒಳಗೊಂಡಿದೆ. ಇದಲ್ಲದೆ ಗ್ಯಾಲಕ್ಸಿ j2 ಕೋರ್ 2020 ಸ್ಮಾರ್ಟ್‌ಫೋನ್‌ 5 ಮೆಗಾಪಿಕ್ಸೆಲ್ ಶೂಟರ್ ಸೆಲ್ಪಿ ಕ್ಯಾಮೆರಾವನ್ನ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ j2 ಸ್ಮಾರ್ಟ್‌ಫೋನ್‌ 2,600mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಅಲ್ಲದೆ ಈ ಬ್ಯಾಟರಿಯು 12 ಗಂಟೆಗಳ ವೀಡಿಯೊ ಪ್ಲೇಬ್ಯಾಕ್, 22 ಗಂಟೆಗಳ ಟಾಕ್ ಟೈಮ್ ಮತ್ತು 91 ಗಂಟೆಗಳ ಆಡಿಯೊ ಪ್ಲೇಬ್ಯಾಕ್ ಅನ್ನು ನೀಡಲಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ ವಿ 4.2, ಜಿಪಿಎಸ್ , ಮೈಕ್ರೋ-ಯುಎಸ್‌ಬಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ 6,299 ರೂ. ಬೆಲೆಯನ್ನ ಹೊಂದಿದ್ದು, ಅಧಿಕೃತ ಸ್ಯಾಮ್‌ಸಂಗ್ ಇಂಡಿಯಾ ವೆಬ್‌ಸೈಟ್‌ನಲ್ಲಿ ಈ ಫೋನ್ ಈಗಾಗಲೇ ಮಾರಾಟದಲ್ಲಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ನೀಲಿ, ಕಪ್ಪು ಮತ್ತು ಗೋಲ್ಡ್‌ ಕಲರ್‌ಗಳ ಆಯ್ಕೆಯಲ್ಲಿ ಲಬ್ಯವಾಗಲಿದೆ.

Best Mobiles in India

English summary
Samsung Galaxy J2 Core 2020 With 16GB Storage, Android Go Edition Launched in India.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X