Home
ಸುದ್ದಿಜಾಲ

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಜಂಪ್‌ 3! ಇದರ ವಿನ್ಯಾಸವೇ ಫುಲ್‌ ಡಿಫ್ರೆಂಟ್‌!

ಮೊಬೈಲ್‌ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್‌ ಕಂಪೆನಿಯ ಫೋನ್‌ಗಳಿಗೆ ಭಾರಿ ಡಿಮ್ಯಾಂಡ್‌ ಇದೆ. ಗ್ಯಾಲಕ್ಸಿ ಎಂ, ಎ, ಎಫ್‌ ಸರಣಿಯಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ತನ್ನ ಗ್ಯಾಲಕ್ಸಿ M ಸರಣಿಯಲ್ಲಿ ಗ್ಯಾಲಕ್ಸಿ M44 ಫೋನ್‌ ಪರಿಚಯಿಸಲು ತಯಾರಿ ನಡೆಸಿದೆ. ಇದನ್ನೇ ಹೋಲುವ ಹೊಸ ಫೋನ್‌ ಇದೀಗ ಲಾಂಚ್‌ ಆಗಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 ಸ್ಮಾರ್ಟ್‌ಫೋನ್‌ ಅನ್ನು ಹೋಲುವ ಹೊಸ ಫೋನ್‌ ಬಿಡುಗಡೆ ಆಗಿದೆ. ಇದನ್ನು ಸ್ಯಾಮ್‌ಸಂಗ್‌ ಕಂಪೆನಿ ದಕ್ಷಿಣ ಕೊರಿಯಾದಲ್ಲಿ ಗ್ಯಾಲಕ್ಸಿ ಜಂಪ್‌ 3 ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಮಿಡ್‌ ರೇಂಜ್‌ ಸ್ಮಾರ್ಟ್‌ಫೋನ್‌ ಆಗಿದ್ದು, ಗ್ಯಾಲಕ್ಸಿ M44 ಹೆಸರಿನಲ್ಲಿ ಶೀಘ್ರದಲ್ಲೇ ಜಾಗತಿಕವಾಗಿ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗಾದ್ರೆ ಗ್ಯಾಲಕ್ಸಿ ಜಂಪ್‌ 3 ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಜಂಪ್‌ 3!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಜಂಪ್‌ 3 ಫೀಚರ್ಸ್‌ ಹೇಗಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಜಂಪ್‌ 3 ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 393 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ 1300ನಿಟ್ಸ್ ಬ್ರೈಟ್‌ನೆಸ್‌ನೊಂದಿಗೆ ಬರಲಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್‌ ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಜಂಪ್‌ 3 ಪ್ರೊಸೆಸರ್‌ ಯಾವುದು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಜಂಪ್‌ 3 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888SoC ಪ್ರೊಸೆಸೆರ್‌ ವೇಗವನ್ನು ಹೊಂದಿದೆ. ಇದು 8GB RAM + 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ 8GB ವರ್ಚುವಲ್ RAM ಅನ್ನು ಸಹ ಬೆಂಬಲಿಸಲಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಸಾಧ್ಯವಾಗಲಿದೆ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಜಂಪ್‌ 3!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಜಂಪ್‌ 3 ಕ್ಯಾಮೆರಾ ಸೆಟ್‌ಅಪ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಜಂಪ್‌ 3 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಹಾಗೂ ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಜಂಪ್‌ 3 ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಜಂಪ್‌ 3 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, VoLTE, ಬ್ಲೂಟೂತ್ v5.3, ವೈಫೈ, NFC, USB-C v2.0 ಬೆಂಬಲಿಸಲಿದೆ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಜಂಪ್‌ 3!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಜಂಪ್‌ 3 ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಜಂಪ್‌ 3 ಸ್ಮಾರ್ಟ್‌ಫೋನ್‌ ದಕ್ಷಿಣ ಕೋರಿಯಾದಲ್ಲಿ 438 900 won (ಅಂದಾಜು 27,734ರೂ)ಬೆಲೆಯನ್ನು ಹೊಂದಿದೆ. ಇದೇ ಸ್ಮಾರ್ಟ್‌ಫೋನ್‌ ಗ್ಯಾಲಕ್ಸಿ M44 ರೂಪದಲ್ಲಿ ಜಾಗತಿಕವಾಗಿ ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಕಲರ್‌ ಆಯ್ಕೆಗಳಲ್ಲಿ ಬರಲಿದೆ ಅನ್ನೊದು ಇನ್ನು ಬಹಿರಂಗವಾಗಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತಕ್ಕೆ ಯಾವಾಗ ಬಿಡುಗಡೆ ಆಗಲಿದೆ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Samsung Galaxy Jump 3 with Snapdragon 888 launched: Details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+