ಮತ್ತೆ ಬೆಲೆ ಇಳಿಕೆ ಕಂಡ ಅಗ್ಗದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್!

|

ಪ್ರತಿಷ್ಠಿತ ಸ್ಯಾಮ್‌ಸಂಗ್ ಕಂಪನಿಯು ಹಲವು ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಮಾಡೆಲ್‌ಗಳನ್ನು ಪರಿಚಯಿಸಿದೆ. ಆ ಪೈಕಿ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್‌ ಹೆಚ್ಚು ಗಮನ ಸೆಳೆದಿದೆ ಎಂದು ಹೇಳಬಹುದು. ಅಗ್ಗದ ಫೋನ್‌ ಆದ್ರೂ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದ್ದ ಈ ಸ್ಮಾರ್ಟ್‌ಫೋನ್ ಇದೀಗ ಬೆಲೆ ಇಳಿಕೆ ಕಂಡಿದ್ದು, ಮತ್ತೊಮ್ಮೆ ಗ್ರಾಹಕರನ್ನು ತನ್ನತ್ತ ಆಕರ್ಷಿಸಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್, 4,000mAh ಬ್ಯಾಟರಿ ಪ್ರಮುಖ ಫೀಚರ್ಸ್‌ಗಳಾಗಿವೆ.

ಗ್ಯಾಲಕ್ಸಿ

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ 500ರೂ. ಇಳಿಕೆ ಆಗಿದೆ. 7,999ರೂ. ಪ್ರೈಸ್‌ಟ್ಯಾಗ್‌ನಲ್ಲಿ ಲಭ್ಯವಿದ್ದ ಈ ಸ್ಮಾರ್ಟ್‌ಫೋನ್ ಬೆಲೆ ಇಳಿಕೆಯಿಂದ ಈಗ 7,499ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಫೋನ್ ಬ್ಲ್ಯಾಕ್, ಬ್ಲೂ ಹಾಗೂ ರೆಡ್‌ ಬಣ್ಣಗಳ ಆಯ್ಕೆ ಪಡೆದಿದೆ. ಹಾಗಾದರೆ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನಿನ ಇನ್ನಿತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಗ್ಯಾಲಕ್ಸಿ M01 ಡಿಸ್‌ಪ್ಲೇ

ಗ್ಯಾಲಕ್ಸಿ M01 ಡಿಸ್‌ಪ್ಲೇ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್‌ 5.71 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನ ಹೊಂದಿದ್ದು, ಸ್ಕ್ರೀನ್ ಪಿಕ್ಸಲ್ ರೆಸಲ್ಯೂಶನ್ 720x1560 ಸಾಮರ್ಥ್ಯದಲ್ಲಿದೆ. ಡಿಸ್‌ಪ್ಲೇಯು ಇನ್‌ಫಿನಿಟಿ ಮಾದರಿಯಲ್ಲಿದ್ದು, 19.5:9 ಅನುಪಾತವನ್ನು ಪಡೆದಿದೆ.

ಗ್ಯಾಲಕ್ಸಿ M01 ಪ್ರೊಸೆಸರ್‌

ಗ್ಯಾಲಕ್ಸಿ M01 ಪ್ರೊಸೆಸರ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 439 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM + 32GB ಆಂತರಿಕ ಸಂಗ್ರಹಣೆ ಸಾಮರ್ಥ್ಯದ ಆಯ್ಕೆ ಪಡೆದಿದೆ.

ಗ್ಯಾಲಕ್ಸಿ M01 ಕ್ಯಾಮೆರಾ

ಗ್ಯಾಲಕ್ಸಿ M01 ಕ್ಯಾಮೆರಾ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌. ಜೊತೆಗೆ 5 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಗ್ಯಾಲಕ್ಸಿ M01 ಬ್ಯಾಟರಿ

ಗ್ಯಾಲಕ್ಸಿ M01 ಬ್ಯಾಟರಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ ಉತ್ತಮ ಚಾರ್ಜಿಂಗ್ ಟೆಕ್ನಾಲಜಿಯನ್ನ ಒಳಗೊಂಡಿದೆ. ಇದರೊಟ್ಟಿಗೆ ಯುಎಸ್‌ಬಿ ಟೈಪ್-ಸಿ ಪೋರ್ಟ್, ವೈಫೈ, ಬ್ಲೂಟೂತ್, ಸೌಲಭ್ಯಗಳು ಸಹ ಇವೆ.

Best Mobiles in India

English summary
Samsung Galaxy M01 is now retailing at Rs. 7,499, while Galaxy M01s is available at Rs. 8,999.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X