ಅಗ್ಗದ ಬೆಲೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ M01 ಕೋರ್ ಸ್ಮಾರ್ಟ್‌ಫೋನ್ ಬಿಡುಗಡೆ!
ಸ್ಮಾರ್ಟ್‌ಫೋನ್ ದಿಗ್ಗಜ ಸ್ಯಾಮ್‌ಸಂಗ್ ಕಂಪೆನಿ ತನ್ನ ಗ್ಯಾಲಕ್ಸಿ M01 ಕೋರ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಗೂಗಲ್‌ನ ಆಂಡ್ರಾಯ್ಡ್ ಗೋ ಅನ್ನು ಆಧರಿಸಿದೆ. ಸಿಂಗಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರುವ ಈ ಸ್ಮಾರ್ಟ್‌ಫೋನ್ ಅಗ್ಗದ ಬೆಲೆಯಲ್ಲಿ ಲಬ್ಯವಾಗಲಿದೆ. ಈಗಾಗಲೇ ಅಗ್ಗದ ಬೆಲೆಯ ಸ್ಮಾರ್ಟ್‌ಫೊನ್‌ಗಳನ್ನ ಪರಿಚಯಿಸಿಸ ಸೈ ಎನಿಸಿಕೊಂಡಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ M01 ಕೋರ್ ಮೂಲಕ ಇನ್ನು ಅತ್ಯುತ್ತಮವಾದ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ತನ್ನ ಮತ್ತೊಂದು ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್ ಅನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಗ್ಯಾಲಕ್ಸಿ M01s ಮತ್ತು ಗ್ಯಾಲಕ್ಸಿ M01 ನಂತಯೆ ಇದೇ ಆದರೂ ವಿನ್ಯಾಸ ಹಾಗೂ ವಿಶೇಷತೆಯಲ್ಲಿ ಭಿನ್ನತೆಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 32GB ವರೆಗೆ ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಗ್ಯಾಲಕ್ಸಿ M01 ಕೋರ್ ಮೂರು ವಿಭಿನ್ನ ಬಣ್ಣ ಆಯ್ಕೆಗಳಲ್ಲಿ ಲಬ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ಸ್ಯಾಮ್‌ಸಂಗ್ ಗ್ಯಾಲಕ್ಸಿ M01 ಕೋರ್ ಸ್ಮಾರ್ಟ್‌ಫೋನ್ 720 x 1480 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 5.14 ಇಂಚಿನ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇಯು 18.5:9 ರಚನೆಯ ಅನುಪಾತವನ್ನು ಹೊಂದಿದ್ದು,320PPI ಸಾಂದ್ರತೆಯನ್ನ ಒಳಗೊಂಡಿದೆ. ಇದಲ್ಲದೆ PLS TFT ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್, ಅನ್ನು ಒಳಗೊಂಡಿದ್ದು, 16m ಕಲರ್ ಅನ್ನು ಒಳಗೊಂಡಿದೆ.

ಪ್ರೊಸೆಸರ್
ಗ್ಯಾಲಕ್ಸಿ M01 ಕೋರ್ ಸ್ಮಾರ್ಟ್‌ಫೋನ್ ಕ್ವಾಡ್-ಕೋರ್ ಮೀಡಿಯಾ ಟೆಕ್ 6739 SoC ವೇಗದ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ ಗೋದಲ್ಲಿ ಒಂದು UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಡಾರ್ಕ್ ಮೋಡ್ ಏಕೀಕರಣ ಮತ್ತು ಇಂಟೆಲಿಜೆಂಟ್ ಇನ್‌ಪುಟ್‌ಗಳು ಮತ್ತು ಇಂಟೆಲಿಜೆಂಟ್ ಫೋಟೋಗಳು ಸೇರಿದಂತೆ ಹೊಸ ಮಾದರಿಯ ಫೀಚರ್ಸ್‌ಗಳನ್ನ ನೀಡಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 2GB RAM ಮತ್ತು 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ
ಇನ್ನು ಈ ಸ್ಮಾರ್ಟ್‌ಫೋನ್ LED ಫ್ಲ್ಯಾಷ್ ಜೊತೆಗೆ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಇದು 8 ಮೆಗಾಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಗ್ಯಾಲಕ್ಸಿ M01 ಕೋರ್ 3,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು ಸಿಂಗಲ್ ಚಾರ್ಜ್‌ನಲ್ಲಿ 11 ಗಂಟೆಗಳ ಬ್ಯಾಕಪ್ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್, GPS, ಮೈಕ್ರೋ-ಯುಎಸ್‌ಬಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ m01 ಕೋರ್ ಬೆಲೆ ಬೇಸ್ 1GB RAM+ 16GB ಶೇಖರಣಾ ಆಯ್ಕೆಗೆ 5,499 ರೂ, ಮತ್ತು ಇದರ 2GB RAM+ 32GB ಸ್ಟೋರೇಜ್ ಮಾದರಿಯು ರೂ. 6,499 ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಪ್ಪು, ನೀಲಿ ಮತ್ತು ಕೆಂಪು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದ್ದು, ಇದೇ ಜುಲೈ 29ರಿಂದ ಸ್ಯಾಮ್‌ಸಂಗ್‌ನ ಮಳಿಗೆಗಳು ಮತ್ತು ಸ್ಯಾಮ್‌ಸಂಗ್ ಇಂಡಿಯಾ ಇ-ಸ್ಟೋರ್ ಮತ್ತು ಪ್ರಮುಖ ಆನ್‌ಲೈನ್ ಮಳಿಗೆಗಳ ಮೂಲಕ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








