ಅಗ್ಗದ ಸ್ಯಾಮ್‌ಸಂಗ್ ಗ್ಯಾಲಕ್ಸಿ M01 ಫೋನ್ ಬೆಲೆಯಲ್ಲಿ ಭಾರಿ ಇಳಿಕೆ!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಇತ್ತೀಚಿಗೆ ಬಿಡುಗಡೆ ಮಾಡಿರುವ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇದೀಗ ಬೆಲೆ ಇಳಿಕೆ ಕಂಡಿದ್ದು, ಮತ್ತೊಮ್ಮೆ ಗ್ರಾಹಕರನ್ನು ತನ್ನತ್ತ ಆಕರ್ಷಿಸಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ.

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಭರ್ಜರಿ ದರ ಕಡಿತ ಆಗಿದೆ. ಅಂದಹಾಗೇ ಈ ಕೊಡುಗೆಯು ಇ-ಕಾಮರ್ಸ್ ದೈತ್ಯ ಅಮೆಜಾನ್ ತಿಳಿಸಿದೆ. 9999ರೂ. ಬೆಲೆಯನ್ನು ಹೊಂದಿದ್ದ ಈ ಸ್ಮಾರ್ಟ್‌ಫೋನ್ 8,399ರೂ.ಗೆ ಲಭ್ಯವಾಗಲಿದೆ ಎಂದು ಅಮೆಜಾನ್ ತನ್ನ ತಾಣದಲ್ಲಿ ಬ್ಯಾನರ್ ಪ್ರದರ್ಶಿಸಿದೆ. ಇನ್ನು ಬೆಲೆ ಇಳಿಕೆಯ ಕೊಡುಗೆಯು ನಾಳೆಯಿಂದ (ಆ.18) ಲಭ್ಯವಾಗಲಿದೆ. ಈ ಫೋನ್ ಬ್ಲ್ಯಾಕ್, ಬ್ಲೂ ಹಾಗೂ ರೆಡ್ ಬಣ್ಣಗಳ ಆಯ್ಕೆ ಪಡೆದಿದೆ. ಹಾಗಾದರೆ ಗ್ಯಾಲಕ್ಸಿ M01 ಫೋನಿನ ಇನ್ನಿತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಗ್ಯಾಲಕ್ಸಿ M01 ಡಿಸ್‌ಪ್ಲೇ
ಸ್ಯಾಮ್‌ಸಂಗ್ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್ 5.71 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಯನ್ನ ಹೊಂದಿದ್ದು, ಸ್ಕ್ರೀನ್ ಪಿಕ್ಸಲ್ ರೆಸಲ್ಯೂಶನ್ 720x1560 ಸಾಮರ್ಥ್ಯದಲ್ಲಿದೆ. ಡಿಸ್‌ಪ್ಲೇಯು ಇನ್‌ಫಿನಿಟಿ ಮಾದರಿಯಲ್ಲಿದ್ದು, 19.5:9 ಅನುಪಾತವನ್ನು ಪಡೆದಿದೆ.

ಗ್ಯಾಲಕ್ಸಿ M01 ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 439 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM + 32GB ಆಂತರಿಕ ಸಂಗ್ರಹಣೆ ಸಾಮರ್ಥ್ಯದ ಆಯ್ಕೆ ಪಡೆದಿದೆ.

ಗ್ಯಾಲಕ್ಸಿ M01 ಕ್ಯಾಮೆರಾ
ಸ್ಯಾಮ್‌ಸಂಗ್ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್. ಜೊತೆಗೆ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಗ್ಯಾಲಕ್ಸಿ M01 ಬ್ಯಾಟರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದರೊಂದಿಗೆ ಉತ್ತಮ ಚಾರ್ಜಿಂಗ್ ಟೆಕ್ನಾಲಜಿಯನ್ನ ಒಳಗೊಂಡಿದೆ. ಇದರೊಟ್ಟಿಗೆ ಯುಎಸ್‌ಬಿ ಟೈಪ್-ಸಿ ಪೋರ್ಟ್, ವೈಫೈ, ಬ್ಲೂಟೂತ್, ಸೌಲಭ್ಯಗಳು ಸಹ ಇವೆ.


Click it and Unblock the Notifications








