Home
ಸುದ್ದಿಜಾಲ

ಅಗ್ಗದ ಬೆಲೆಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M01s ಸ್ಮಾರ್ಟ್‌ಫೋನ್‌ ಬಿಡುಗಡೆ!

ಸ್ಮಾರ್ಟ್‌ಫೋನ್‌ ದಿಗ್ಗಜ ಸ್ಯಾಮ್‌ಸಂಗ್ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಟೆಕ್‌ ವಲಯದಲ್ಲಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಸ್ಯಾಮ್‌ಸಂಗ್‌ ತನ್ನ ಗ್ಯಾಲಕ್ಸಿ M01s ಸ್ಮಾರ್ಟ್‌ಫೋನ್‌ ಅನ್ನು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದು ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್‌ನ ಹೊಸ ಆವೃತ್ತಿಯಾಗಿ ಇದು ಬಿಡುಗಡೆ ಆಗಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ M01s ಮತ್ತು ಗ್ಯಾಲಕ್ಸಿ M01 ಎರಡೂ ಸ್ಮಾರ್ಟ್‌ಫೋನ್‌ಗಳು ಒಂದೇ ತೆರನಾದ ಹೋಲಿಕೆಯನ್ನ ಹೊಂದಿದ್ದರೂ, ಗ್ಯಾಲಕ್ಸಿ M01s ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 439 SoC ಬದಲಿಗೆ ಮೀಡಿಯಾ ಟೆಕ್ ಹೆಲಿಯೊ P22 SoC ಪ್ರೊಸೆಸರ್‌ ಅನ್ನು ಹೊಂದಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ತನ್ನ ಗ್ಯಾಲಕ್ಸಿ M01s ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ. ಇದರೊಂದಿಗೆ ಈ ಸ್ಮಾರ್ಟ್‌ಫೋನ್‌ ಇನ್ನು ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M01s ಸ್ಮಾರ್ಟ್‌ಫೋನ್‌ 720x1,280 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯದ 6.2-ಇಂಚಿನ ಎಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಟಿಎಫ್‌ಟಿ ಡಿಸ್ಪ್ಲೇ ಆಗಿದೆ. ಈ ಡಿಸ್‌ಪ್ಲೇ 'ಇನ್ಫಿನಿಟಿ ವಿ-ಕಟ್' ಶೈಲಿಯ ವಿನ್ಯಾಸವನ್ನ ಹೊಂದಿದೆ

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P22 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 9 ಪೈ ಅನ್ನು ಒಂದು ಯುಐ ಕೋರ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 3GB RAM ಮತ್ತು 32GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವ ಅವಕಾಶವನ್ನು ನೀಡಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಸ್ಯಾಮ್‌ಸಂಗ್ ಗ್ಯಾಲಕ್ಸಿ M01s ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌, ಅನ್ನು ಹೊಂದಿದೆ. ಅಲ್ಲದೆ ಈ ಡ್ಯುಯಲ್ ಕ್ಯಾಮೆರಾಗಳು ಲೈವ್ ಫೋಕಸ್ ಅನ್ನು ಬೆಂಬಲಿಸುತ್ತವೆ ಎಂದು ಸ್ಯಾಮ್ಸಂಗ್ ಹೇಳಿಕೊಂಡಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಡಾಲ್ಬಿ ಅಟ್ಮೋಸ್ ಟೆಕ್ನಾಲಜಿಯನ್ನು ಒಳಗೊಂಡಿದೆ, ಇದು ಸರೌಂಡ್ ಸೌಂಡ್ ಅನುಭವವನ್ನು ನೀಡುತ್ತದೆ. ಅಲ್ಲದೆ ಇದರಲ್ಲಿ ಸ್ಯಾಮ್‌ಸಂಗ್ ಹೆಲ್ತ್ ಅಪ್ಲಿಕೇಶನ್ ಅನ್ನು ಸಹ ನೀಡಲಾಗಿದೆ. ಜೊತೆಗೆ ಇದು ಫೇಸ್ ಅನ್ಲಾಕ್ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M01s ಸ್ಮಾರ್ಟ್‌ಫೋನ್‌ 9,999 ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಲೈಟ್ ಬ್ಲೂ ಮತ್ತು ಗ್ರೇ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಆಫ್‌ಲೈನ್ ಮಳಿಗೆಗಳು, ಸ್ಯಾಮ್‌ಸಂಗ್.ಕಾಮ್ ಮತ್ತು ಇತರ ಇ-ಕಾಮರ್ಸ್‌ ವೆಬ್‌ಸೈಟ್‌ಗಳ ಮೂಲಕ ಖರೀದಿಸಲು ಲಭ್ಯವಿದೆ ಎಂದು ಹೇಳಲಾಗುತ್ತಿದೆ.

Best Mobiles in India

English summary
Samsung Galaxy M01s has made its debut in India as a new version of the Galaxy M01 smartphone.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+