ಭಾರತದಲ್ಲಿ ಇಂದಿನಿಂದ ಸ್ಯಾಮ್‌ಸಂಗ್ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯ!
ದಕ್ಷಿಣ ಕೋರಿಯಾ ಮೂಲದ ಸ್ಯಾಮ್‌ಸಂಗ್ ಕಂಪೆನಿ ಕಳೆದ ವಾರ ತನ್ನ ಹೊಸ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಅನಾವರಣಗೊಳಿಸಿತ್ತು. ಇಂದಿನಿಂದ ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಮಾರಾಟವಾಗಲಿದೆ. ಈ ಸ್ಮಾರ್ಟ್‌ಫೋನ್ ಕೈಗೆಟುಕುವ ಬೆಲೆಯನ್ನು ಪಡೆದುಕೊಂಡಿದೆ. ಇದು ಅಮೆಜಾನ್, ಸ್ಯಾಮ್‌ಸಂಗ್ ಇಂಡಿಯಾದ ಆನ್‌ಲೈನ್ ಸ್ಟೋರ್ ಮತ್ತು ಪ್ರಮುಖ ಆಫ್‌ಲೈನ್ ಚಿಲ್ಲರೆ ಅಂಗಡಿಗಳಲ್ಲಿ ಖರೀದಿಸಲು ಲಭ್ಯವಿದೆ.

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ M02 ಇಂದಿನಿಂದ ಭಾರತದಲ್ಲಿ ಖರೀದಿಗೆ ಲಭ್ಯವಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್, ಕ್ವಾಡ್-ಕೋರ್ ಮೀಡಿಯಾ ಟೆಕ್ MT6739 SoC ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಸಹ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಪರಿಚಯಾತ್ಮಕ ಕೊಡುಗೆಯಾಗಿ, ಭಾರತದಲ್ಲಿ ಅಮೆಜಾನ್‌ನಲ್ಲಿ 2GB RAM + 32GB ಇಂಟರ್ ಸ್ಟೋರೇಜ್ ರೂಪಾಂತರಕ್ಕೆ 6,799 ರೂ. ಹಾಗೂ 3GB RAM + 32GB ಸ್ಟೋರೇಜ್ ಆಯ್ಕೆಯು ಅಮೆಜಾನ್‌ನಲ್ಲಿ 7,499.ರೂ ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಸ್ಯಾಮ್‌ಸಂಗ್ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್ 720x1560 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಇನ್‌ಫಿನಿಟಿ V ಮಾದರಿಯಲ್ಲಿದೆ.

ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM + 32GB ಮತ್ತು 2GB RAM ಮತ್ತು 32GB ಆಂತರೀಕ ಸ್ಟೋರೇಜ್‌ನ ಎರಡು ಆಯ್ಕೆಗಳನ್ನು ಹೊಂದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ 1TB ವರೆಗೂ ವಿಸ್ತರಿಸುವ ಅವಕಾಶ ಸಹ ನೀಡಿದೆ.

ಕ್ಯಾಮೆರಾ
ಸ್ಯಾಮ್‌ಸಂಗ್ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್ ಡ್ಯಯಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್. ಇದಲ್ಲದೆ 5 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇನ್ನು ಈ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಐಎಸ್‌ಒ ಕಂಟ್ರೋಲ್, ಆಟೋ ಫ್ಲ್ಯಾಷ್, ಡಿಜಿಟಲ್ ಜೂಮ್, ಹೆಚ್‌ಡಿಆರ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕಪ್ ಅನ್ನು ಹೊಂದಿದ್ದು, ಇದು 10W ಸಾಮರ್ಥ್ಯದ ಸ್ಟ್ಯಾಂಡರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಹಾಟ್‌ಸ್ಪಾಟ್, ಯುಎಸ್‌ಬಿ ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್ 2GB RAM ಮತ್ತು 32GB ವೇರಿಯಂಟ್ ದರವು 6,999 ರೂ. ಆಗಿದೆ. ಹಾಗೆಯೇ 3GB RAM + 32GB ವೇರಿಯಂಟ್‌ನ ಬೆಲೆಯು 6,799ರೂ.ಗಳು ಆಗಿದೆ. ಈ ಫೋನ್ ಬ್ಲ್ಯಾಕ್, ಬ್ಲೂ, ಗ್ರೇ ಹಾಗೂ ರೆಡ್ ಬಣ್ಣಗಳ ಆಯ್ಕೆಗಳನ್ನು ಪಡೆದುಕೊಂಡಿದೆ. ಅಮೆಜಾನ್, ಸ್ಯಾಮ್‌ಸಂಗ್ ತಾಣಗಳಲ್ಲಿ ಮತ್ತು ರೀಟೈಲ್ ಸ್ಟೋರ್‌ಗಳಲ್ಲಿ ಇಂದಿನಿಂದ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








