ಸ್ಯಾಮ್‌ಸಂಗ್‌ M02s ಸ್ಮಾರ್ಟ್‌ಫೋನ್‌ ಬಿಡುಗಡೆ! ವಿಶೇಷತೆ ಏನು?

|

ದಕ್ಷಿಣ ಕೋರಿಯಾದ ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ ಸಂಸ್ಥೆ ತನ್ನ ಹೊಸ ಗ್ಯಾಲಕ್ಸಿ M02s ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 13 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್‌ ಒಳಗೊಂಡಿರುವ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಸಹ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 450 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ತನ್ನ ಹೊಸ ಗ್ಯಾಲಕ್ಸಿ M02s ಸ್ಮಾರ್ಟ್‌ಫೋನ್‌ ಅನ್ನು ನೆರೆಯ ದೇಶ ನೇಪಾಳದಲ್ಲಿ ಬಿಡುಗಡೆ ಮಾಡಿದೆ. ಇದು 6.5 ಇಂಚಿನ TFT ವಾಟರ್‌ ಡ್ರಾಪ್‌ ಶೈಲಿಯ ನಾಚ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4GB RAM + 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ

ಡಿಸ್‌ಪ್ಲೇ ವಿಶೇಷತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M02s ಸ್ಮಾರ್ಟ್‌ಫೋನ್‌ 720x1560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಒಳಗೊಂಡಿರುವ TFT ಡಿಸ್‌ಪ್ಲೇ ಇದಾಗಿದೆ. ಇನ್ನು ಈ ಡಿಸ್‌ಪ್ಲೇ 264ppi ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 450 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಸ್ಯಾಮ್‌ಸಂಗ್ ಗ್ಯಾಲಕ್ಸಿ M02s ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇನ್ನು ಈ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಐಎಸ್‌ಒ ಕಂಟ್ರೋಲ್‌, ಆಟೋ ಫ್ಲ್ಯಾಷ್, ಡಿಜಿಟಲ್ ಜೂಮ್, ಹೆಚ್‌ಡಿಆರ್ ಮತ್ತು ಮಾನ್ಯತೆ ಪರಿಹಾರದಂತಹ ಫೀಚರ್ಸ್‌ಗಳನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕಪ್‌ ಅನ್ನು ಹೊಂದಿದ್ದು, ಇದು 15m ಕ್ವಿಕ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M02s ಸ್ಮಾರ್ಟ್‌ಫೋನ್‌ ನೇಪಾಳದಲ್ಲಿ NPR 15,999 ಬೆಲೆಯನ್ನು ಹೊಂದಿದೆ. ಸದ್ಯ ನೇಪಾಳದಲ್ಲಿ ಇದು ಕಪ್ಪು, ನೀಲಿ ಮತ್ತು ಕೆಂಪು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಭಾರತದಲ್ಲಿ ಶೀಘ್ರವೇ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ. ಇನ್ನು ಭಾರತದಲ್ಲಿ ಇದರ ಬೆಲೆ 10,000 ರೂ. ಆಗಿರಲಿದೆ ಎಂದು ವರದಿ ಆಗಿದೆ.

Best Mobiles in India

English summary
Samsung Galaxy M02s runs on Android 10-based Samsung Onee UI operating system.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X