ಭಾರತಕ್ಕೆ ಲಗ್ಗೆ ಇಟ್ಟ ಅಗ್ಗದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M02s ಸ್ಮಾರ್ಟ್‌ಫೋನ್‌!

|

ಪ್ರತಿಷ್ಠಿತ ಮೊಬೈಲ್‌ ಸಂಸ್ಥೆಗಳಲ್ಲೊಂದಾದ ಸ್ಯಾಮ್‌ಸಂಗ್‌ ತನ್ನ ಹೊಸ ಗ್ಯಾಲಕ್ಸಿ M02s ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಎಂಟ್ರಿ ಲೆವೆಲ್‌ ಮಾದರಿಯಲ್ಲಿ ಕಾಣಿಸಿಕೊಂಡಿರುವ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದೆ. ಜೊತೆಗೆ ಟ್ರಿಪಲ್ ಕ್ಯಾಮೆರಾ ಒಳಗೊಂಡಿರುವುದು ಈ ಫೋನಿನ ಹೈಲೈಟ್‌ ಅಂಶಗಳಲ್ಲೊಂದಾಗಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಸಂಸ್ಥೆಯು ತನ್ನ ಹೊಸ ಗ್ಯಾಲಕ್ಸಿ M02s ಸ್ಮಾರ್ಟ್‌ಫೋನ್‌ ಅನ್ನು ದೇಶಿಯ ಮಾರುಕಟ್ಟೆಗೆ ಅನಾವರಣ ಮಾಡಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 450 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 64GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಈ ಫೋನ್ ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಹಾಗೂ ಬೆಲೆ ಎಷ್ಟು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್ ಗ್ಯಾಲಕ್ಸಿ M02s ಸ್ಮಾರ್ಟ್‌ಫೋನ್‌ 720x1560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಒಳಗೊಂಡಿರುವ TFT ಡಿಸ್‌ಪ್ಲೇ ಇದಾಗಿದೆ. ಇನ್ನು ಈ ಡಿಸ್‌ಪ್ಲೇ 264ppi ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ.

ಯಾವ ಪ್ರೊಸೆಸರ್‌ ಇದೆ

ಯಾವ ಪ್ರೊಸೆಸರ್‌ ಇದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M02s ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 450 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 3GB RAM + 32GB ಮತ್ತು 4GB RAM ಮತ್ತು 64GB ಆಂತರೀಕ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಸಹ ನೀಡಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ಸ್ಯಾಮ್‌ಸಂಗ್ ಗ್ಯಾಲಕ್ಸಿ M02s ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇನ್ನು ಈ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಐಎಸ್‌ಒ ಕಂಟ್ರೋಲ್‌, ಆಟೋ ಫ್ಲ್ಯಾಷ್, ಡಿಜಿಟಲ್ ಜೂಮ್, ಹೆಚ್‌ಡಿಆರ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ M02s ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕಪ್‌ ಅನ್ನು ಹೊಂದಿದ್ದು, ಇದು 15m ಕ್ವಿಕ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M02s ಸ್ಮಾರ್ಟ್‌ಫೋನ್‌ 3GB RAM + 32GB ವೇರಿಯಂಟ್‌ ದರವು 8,999 ರೂ. ಆಗಿದೆ. ಹಾಗೆಯೇ 4GB RAM ಮತ್ತು 64GB ವೇರಿಯಂಟ್‌ನ ಬೆಲೆಯು 9,999ರೂ.ಗಳು ಆಗಿದೆ. ಈ ಫೋನ್ ಬ್ಲ್ಯಾಕ್‌, ಬ್ಲೂ ಹಾಗೂ ರೆಡ್‌ ಬಣ್ಣಗಳ ಆಯ್ಕೆಗಳನ್ನು ಪಡೆದುಕೊಂಡಿದೆ. ಅಮೆಜಾನ್, ಸ್ಯಾಮ್‌ಸಂಗ್ ತಾಣಗಳಲ್ಲಿ ಮತ್ತು ರೀಟೈಲ್‌ ಸ್ಟೋರ್‌ಗಳಲ್ಲಿ ಸದ್ಯದಲ್ಲೇ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Samsung Galaxy M02s is priced in India at Rs. 8,999 for the 3GB RAM + 32GB storage option and Rs. 9,999 for the 4GB RAM + 64GB storage model.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X