Home
ಸುದ್ದಿಜಾಲ

ಇಂದು ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಫಸ್ಟ್‌ ಸೇಲ್‌!..ಅಗ್ಗದ ಬೆಲೆಗೆ ಲಭ್ಯ!

ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಇತ್ತೀಚಿಗಷ್ಟೆ ನೂತನವಾಗಿ ಬಿಡುಗಡೆ ಮಾಡಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಈಗಾಗಲೇ ಎಂಟ್ರಿ ಲೆವೆಲ್‌ ಮಾದರಿಯಲ್ಲಿ ಗ್ರಾಹಕರನ್ನು ಆಕರ್ಷಿಸಿದೆ. ಇನ್ನು ಈ ಫೋನ್‌ ಇಂದು (ಡಿ. 16) ಮಧ್ಯಾಹ್ನ 12 ರಂದು ಇ-ಕಾಮರ್ಸ್ ತಾಣ ಅಮೆಜಾನ್‌ ವೆಬ್‌ಸೈಟ್ ಮೂಲಕ ಫಸ್ಟ್‌ ಸೇಲ್ ಆರಂಭಿಸಲಿದೆ. ಅಂದಹಾಗೆ ಈ ಫೋನ್ 4GB + 64GB ಮತ್ತು 4GB + 128GB ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

ಡ್ಯುಯಲ್‌ ರಿಯರ್ ಕ್ಯಾಮೆರಾ

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಅಮೆಜಾನ್‌ ಇ-ಕಾಮರ್ಸ್‌ನಲ್ಲಿ ಇಂದು ಮೊದಲ ಮಾರಾಟ ಶುರು ಮಾಡಲಿದೆ. ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಡ್ಯುಯಲ್‌ ರಿಯರ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಹಾಗೆಯೇ ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತದೆ.

ಮೈಕ್ರೊ ಎಸ್‌ಡಿ ಕಾರ್ಡ್

ಇನ್ನು ಗ್ಯಾಲಕ್ಸಿ M04 ಫೋನ್‌ RAM ಪ್ಲಸ್ ಫೀಚರ್ಸ್‌ ಒಳಗೊಂಡಿದ್ದು, RAM ನ 8GB ವರೆಗೆ ವಿಸ್ತರಿಸಬಹುದು ಆಯ್ಕೆ ಪಡೆದಿದ್ದು, ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾದ ಆಯ್ಕೆ ಹೊಂದಿದೆ. ಹಾಗಾದರೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ ರಚನೆಯ ಅನುಪಾತ 20:9 ಆಗಿದ್ದು, 270 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಇದು ವಾಟರ್‌ ಡ್ರಾಪ್‌ ಶೈಲಿಯ ನಾಚ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಒಂದು UI 4.1 ಸ್ಕಿನ್ ಜೊತೆಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 64GB ಸ್ಟೋರೇಜ್‌ ಹೊಂದಿದೆ. ಸ್ಯಾಮ್‌ಸಂಗ್‌ RAM ಪ್ಲಸ್ ಫೀಚರ್ಸ್‌ ಒಳಗೊಂಡಿದ್ದು, RAM ನ 8GB ವರೆಗೆ ವಿಸ್ತರಿಸಬಹುದು. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಫೋನ್‌ ವೇಗದ ಚಾರ್ಜಿಂಗ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಇದು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಬೆಂಬಲವನ್ನು ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ 4GB + 64GB - 8499ರೂ.
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ 4GB + 128GB - 9499ರೂ.
ಇನ್ನು ಈ ಸ್ಮಾರ್ಟ್‌ಫೋನ್ ಅಮೆಜಾನ್‌ ತಾಣದಲ್ಲಿ ಇಂದು ಮಾರಾಟ ಶುರು ಮಾಡಲಿದೆ. ನೀಲಿ, ಗೋಲ್ಡ್, ಮಿಂಟ್ ಗ್ರೀನ್ ಮತ್ತು ವೈಟ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Samsung Galaxy M04 comes in 4GB + 64GB and 4GB + 128GB configurations. It will be available for purchase starting at 12:00 PM, today (December 16) exclusively via Amazon.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+