Home
ಸುದ್ದಿಜಾಲ

ಈ ಸ್ಯಾಮ್‌ಸಂಗ್‌ ಫೋನಿಗೆ ಬಿಗ್‌ ಡಿಸ್ಕೌಂಟ್‌!..ಆಫರ್‌ ಕಳ್ಕೋಬೇಡಿ!

ಸ್ಯಾಮ್‌ಸಂಗ್‌ ಕಂಪನಿಯ ಜನಪ್ರಿಯ ಎಂಟ್ರಿ ಲೆವೆಲ್‌ ಮೊಬೈಲ್‌ ಫೋನ್‌ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್‌ ಫೋನ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಈ ಫೋನ್ ಸಖತ್ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು ವಾರೆವಾ ಎನ್ನುವಂತೆ ಮಾಡಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಮೊಬೈಲ್‌ ಅಮೆಜಾನ್‌ ತಾಣದಲ್ಲಿ ಶೇ. 29% ರಷ್ಟು ರಿಯಾಯಿತಿ ಪಡೆದಿದೆ. 4GB RAM +128GB ಸ್ಟೋರೇಜ್ ವೇರಿಯಂಟ್ ಅಮೆಜಾನ್ ಆನ್‌ಲೈನ್‌ ತಾಣದಲ್ಲಿ 11,999ರೂ. ಪಡೆದಿದ್ದು, ಈಗ ರಿಯಾಯಿತಿ ದರದಲ್ಲಿ ಗ್ರಾಹಕರು 8,499ರೂ. ಪ್ರೈಸ್‌ ಟ್ಯಾಗ್‌ ನಲ್ಲಿ ಖರೀದಿಸಬಹುದಾಗಿದೆ. ಇದರೊಂದಿಗೆ ಬ್ಯಾಂಕ್ ಕೊಡುಗೆ ಹಾಗೂ ನೋ ಕಾಸ್ಟ್‌ ಇಎಮ್‌ಐ ಸಹ ಲಭ್ಯವಾಗಲಿವೆ.

ಈ ಸ್ಯಾಮ್‌ಸಂಗ್‌ ಫೋನಿಗೆ ಬಿಗ್‌ ಡಿಸ್ಕೌಂಟ್‌!..ಆಫರ್‌ ಕಳ್ಕೋಬೇಡಿ!

ಅಂದಹಾಗೆ ಈ ಫೋನ್‌ ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಹೊಂದಿದ್ದು, 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ ಗ್ಲಾಸ್‌ ಗ್ರೀನ್‌ ಹಾಗೂ ಬ್ಲೂ ಬಣ್ಣಗಳ ಆಯ್ಕೆ ಒಳಗೊಂಡಿದೆ. ಹಾಗಾದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಡಿಸ್‌ಪ್ಲೇ ರಚನೆ :

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ ರಚನೆಯ ಅನುಪಾತ 20:9 ಆಗಿದ್ದು, 270 ಪಿಪಿಐ ಪಿಕ್ಸೆಲ್ ಸಾಂದ್ರತೆ ಅನ್ನು ಒಳಗೊಂಡಿದೆ. ಇದು ವಾಟರ್‌ ಡ್ರಾಪ್‌ ಶೈಲಿಯ ನಾಚ್‌ ಅನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಪ್ರೊಸೆಸರ್‌ :

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಮೊಬೈಲ್‌ ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಒಂದು UI 4.1 ಸ್ಕಿನ್ ಜೊತೆಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 4GB RAM + 64GB ಸ್ಟೋರೇಜ್‌ ಹೊಂದಿದ್ದು, 8GB ವರೆಗೆ RAM ವಿಸ್ತರಿಸಬಹುದು. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಿ ಕೊಳ್ಳಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಕ್ಯಾಮೆರಾ ಸೆಟ್‌ಅಪ್‌ :

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಪ್ರಾಥಮಿಕ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮತ್ತು ಸೆಕೆಂಡರಿ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒದಗಿಸಲಾಗಿದೆ. ಜೊತೆಗೆ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಬ್ಯಾಟರಿ ಮತ್ತು ಸೌಲಭ್ಯಗಳು :

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ ಇದು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಸಪೋರ್ಟ್‌ ಕೂಡಾ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಮೆಮೊರಿ ಮತ್ತು ಕಲರ್‌ ಆಯ್ಕೆ :

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಮೊಬೈಲ್‌ 4GB + 64GB ವೇರಿಯಂಟ್‌ ಆಯ್ಕೆ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅಮೆಜಾನ್‌ ತಾಣದಲ್ಲಿ ಇಂದು ಮಾರಾಟ ಶುರು ಮಾಡಲಿದೆ. ಗ್ಲಾಸ್‌ ಗ್ರೀನ್‌ ಹಾಗೂ ಬ್ಲೂ ಬಣ್ಣಗಳ ಆಯ್ಕೆ ಒಳಗೊಂಡಿದೆ.

Best Mobiles in India

English summary
Samsung Galaxy M04 huge price drop on amazon. check offer price, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+