Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಈ ಮೊಬೈಲ್‌ಗೆ ಈಗ ಭಾರೀ ರಿಯಾಯಿತಿ!..ಬೆಸ್ಟ್‌ ಆಫರ್‌!

ಸ್ಯಾಮ್‌ಸಂಗ್‌ ಸಂಸ್ಥೆಯ ಇತ್ತೀಚಿನ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಬಜೆಟ್‌ ದರದಲ್ಲಿ ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಈ ಫೋನ್ 42% ರಷ್ಟು ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದ್ದು, ಮಾರುಕಟ್ಟೆಯಲ್ಲಿ ಹೈಲೈಟ್‌ ಎನಿಸಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಫೋನ್‌ 4GB RAM +128GB ಸ್ಟೋರೇಜ್ ವೇರಿಯಂಟ್ ಅಮೆಜಾನ್ ಆನ್‌ಲೈನ್‌ ತಾಣದಲ್ಲಿ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಈ ಫೋನ್‌ ಅನ್ನು 11,999ರೂ. ಬದಲಿಗೆ ಗ್ರಾಹಕರು 6,999ರೂ. ಪ್ರೈಸ್‌ ಟ್ಯಾಗ್‌ ನಲ್ಲಿ ಖರೀದಿಸಬಹುದಾಗಿದೆ. ಇದರೊಂದಿಗೆ ಬ್ಯಾಂಕ್ ಕೊಡುಗೆ ಹಾಗೂ ನೋ ಕಾಸ್ಟ್‌ ಇಎಮ್‌ಐ ಸಹ ಲಭ್ಯವಾಗಲಿವೆ.

ಸ್ಯಾಮ್‌ಸಂಗ್‌ನ ಈ ಮೊಬೈಲ್‌ಗೆ ಈಗ ಭಾರೀ ರಿಯಾಯಿತಿ!..ಬೆಸ್ಟ್‌ ಆಫರ್‌!

ಅಂದಹಾಗೆ ಈ ಫೋನ್‌ ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಹೊಂದಿದ್ದು, 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ ಗ್ಲಾಸ್‌ ಗ್ರೀನ್‌ ಹಾಗೂ ಬ್ಲೂ ಬಣ್ಣಗಳ ಆಯ್ಕೆ ಒಳಗೊಂಡಿದೆ. ಹಾಗಾದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ ರಚನೆಯ ಅನುಪಾತ 20:9 ಆಗಿದ್ದು, 270 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಇದು ವಾಟರ್‌ ಡ್ರಾಪ್‌ ಶೈಲಿಯ ನಾಚ್‌ ಅನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ನ ಈ ಮೊಬೈಲ್‌ಗೆ ಈಗ ಭಾರೀ ರಿಯಾಯಿತಿ!..ಬೆಸ್ಟ್‌ ಆಫರ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಪ್ರೊಸೆಸರ್‌ ಯಾವುದು : ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಒಂದು UI 4.1 ಸ್ಕಿನ್ ಜೊತೆಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 64GB ಸ್ಟೋರೇಜ್‌ ಹೊಂದಿದೆ. ಸ್ಯಾಮ್‌ಸಂಗ್‌ RAM ಪ್ಲಸ್ ಫೀಚರ್ಸ್‌ ಒಳಗೊಂಡಿದ್ದು, RAM ನ 8GB ವರೆಗೆ ವಿಸ್ತರಿಸಬಹುದು. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಕ್ಯಾಮೆರಾ ಸೆಟ್‌ಅಪ್‌ ಏನಿದೆ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಸ್ಯಾಮ್‌ಸಂಗ್‌ನ ಈ ಮೊಬೈಲ್‌ಗೆ ಈಗ ಭಾರೀ ರಿಯಾಯಿತಿ!..ಬೆಸ್ಟ್‌ ಆಫರ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಬ್ಯಾಟರಿ ಮತ್ತು ಇತರೆ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಬೆಂಬಲವನ್ನು ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಬೆಲೆ ಮತ್ತು ಲಭ್ಯತೆ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ 4GB + 64GB - 6,999ರೂ. ಪ್ರೈಸ್‌ ಟ್ಯಾಗ್‌ ನಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅಮೆಜಾನ್‌ ತಾಣದಲ್ಲಿ ಇಂದು ಮಾರಾಟ ಶುರು ಮಾಡಲಿದೆ. ಗ್ಲಾಸ್‌ ಗ್ರೀನ್‌ ಹಾಗೂ ಬ್ಲೂ ಬಣ್ಣಗಳ ಆಯ್ಕೆ ಒಳಗೊಂಡಿದೆ.

Best Mobiles in India

English summary
Samsung Galaxy M04 can be bought at an effective price of Rs 6,999. check specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+