ಸ್ಯಾಮ್‌ಸಂಗ್‌ನ ಈ ಸ್ಮಾರ್ಟ್‌ಫೋನ್‌ ಕೈಗೆಟಕುವ ಬೆಲೆಯಲ್ಲಿ ಬರಲಿದೆ!

|

ಸ್ಯಾಮ್‌ಸಂಗ್‌ ಕಂಪೆನಿ ಶೀಘ್ರದಲ್ಲೇ ಭಾರತದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ. ಈಗಾಗಲೇ ತನ್ನ ಗ್ಯಾಲಕ್ಸಿ ಎಂ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿರುವ ಸ್ಯಾಮ್‌ಸಂಗ್‌ ಇದೀಗ ಹೊಸ ಗ್ಯಾಲಕ್ಸಿ M04 ಬಿಡುಗಡೆಗೆ ವೇದಿಕೆ ಸಿದ್ದಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 8,999ರೂ. ಬೆಲೆಯಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ಇದು ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಹೊಸ RAM ಪ್ಲಸ್ ಫೀಚರ್ಸ್‌ ಅನ್ನು ಬೆಂಬಲಿಸಲಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಹೊಸ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಇದರ ನಡುವೆ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ಬಹಿರಂಗವಾಗಿದ್ದು, ಬೆಲೆ ವಿವರಗಳ ಬಗ್ಗೆ ಕೂಡ ಸಾಕಷ್ಟು ನಿರೀಕ್ಷೆ ಸೃಷ್ಟಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯಲ್ಲಿ ಬರಲಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಗ್ಗೆ ಏನೆಲ್ಲಾ ನಿರೀಕ್ಷೆ ಇಡಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ 6.62 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ ರಚನೆಯ ಅನುಪಾತ 20:9 ಆಗಿದ್ದು, 265 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹೆಲಿಯೊ G35SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12ಬೆಂಬಲವನ್ನು ಪಡೆದಿದೆ ಎನ್ನಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 32GB ಇನ್‌ಬಿಲ್ಟ್‌ ಸ್ಟೋರೇಜ್‌ ಹೊಂದಿರಲಿದೆ. ಹಾಗೆಯೇ RAM ಪ್ಲಸ್ ಫೀಚರ್ಸ್‌ ಮೂಲಕ ಬಳಕೆದಾರರು 8GB RAM ವರೆಗೆ RAM ಅನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ವೇಗದ ಚಾರ್ಜಿಂಗ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಬೆಂಬಲವನ್ನು ಪಡೆದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಎಂದು ಹೇಳಲಾಗಿದೆ. ಆದರೆ ಬಿಡುಗಡೆಯ ದಿನಾಂಕ ಇನ್ನು ನಿಖರವಾಗಿಲ್ಲ. ಇದು ಭಾರತದಲ್ಲಿ 8,999ರೂ.ಬೆಲೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಈಗಾಗಲೇ ಸೋರಿಕೆಯಾಗಿರುವ ಮಾಹಿತಿಯ ಪ್ರಕಾರ ಇದು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಆಗಿರಲಿದೆ.

ಸ್ಯಾಮ್‌ಸಂಗ್‌

ಇದಲ್ಲದೆ ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಇದೇ ವರ್ಷ ಗ್ಯಾಲಕ್ಸಿ A13 ಮತ್ತು ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು 6.6 ಇಂಚಿನ ಡಿಸ್‌ಪ್ಲೇಯನ್ನು ಹೊಂದಿವೆ. ಇದಲ್ಲದೆ ಈ ಎರಡೂ ಫೋನ್‌ಗಳು ಕೂಡ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಪಡೆದುಕೊಂಡಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿವೆ. ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಆಯ್ಕೆಗಳಲ್ಲಿ ಈ ಸ್ಮಾರ್ಟ್‌ಫೋನ್‌ಗಳು ಕೂಡ ಸೇರಿವೆ.

Best Mobiles in India

English summary
Samsung Galaxy M04 likely to start from Rs 8,999

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X