Home
ಸುದ್ದಿಜಾಲ

ಸ್ಯಾಮ್‌ಸಂಗ್‌ನಿಂದ ಹೊಸ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ! ಏನಿದೆ ಫೀಚರ್ಸ್‌!

ಭಾರತದ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್‌ ಕಂಪೆನಿಯ ಫೋನ್‌ಗಳಿಗೆ ಭಾರಿ ಡಿಮ್ಯಾಂಡ್‌ ಇದೆ. ಅದಕ್ಕೆ ತಕ್ಕಂತೆ ಸ್ಯಾಮ್‌ಸಂಗ್‌ ಕಂಪೆನಿ ಕೂಡ ತನ್ನ ಗ್ಯಾಲಕ್ಸಿ ಎಂ, ಗ್ಯಾಲಕ್ಸಿ ಎ, ಗ್ಯಾಲಕ್ಸಿ ಎಸ್‌, ಸರಣಿಯಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ಗ್ಯಾಲಕ್ಸಿ ಎಂ ಸರಣಿಯಲ್ಲಿ ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಭಾರತದಲ್ಲಿ ಕಂಪನಿಯ ಸಪೋರ್ಟ್‌ ವೆಬ್‌ಸೈಟ್‌ ಪೇಜ್‌ ಲೈವ್‌ ಆಗಿರುವುದರಿಂದ ಶೀಘ್ರದಲ್ಲೇ ಈ ಫೋನ್‌ ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಶೀಘ್ರದಲ್ಲೇ

ಹೌದು, ಭಾರತದಲ್ಲಿ ಶೀಘ್ರದಲ್ಲೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಲಾಂಚ್‌ ಆಗಲಿದೆ. ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಎನ್ನಲಾದ SM-M045F/DS ಮಾಡೆಲ್‌ ನಂಬರ್‌ನೊಂದಿಗೆ ಸ್ಯಾಮ್‌ಸಂಗ್‌ ಇಂಡಿಯಾ ವೆಬ್‌ಸೈಟ್‌ನ ಸಪೋರ್ಟ್‌ ಪೇಜ್‌ನಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಈಗಾಗಲೇ ಜಾಗತಿಕ ಮಾರುಕಟ್ಟೆಯಲ್ಲಿ ಲಭ್ಯವಿರುವ ಗ್ಯಾಲಕ್ಸಿ A04e ಫೋನ್‌ನ ಭಾರತದ ರಿ ಬ್ರಾಂಡೆಡ್‌ ಎನ್ನಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಬಗ್ಗೆ ಏನೆಲ್ಲಾ ನಿರೀಕ್ಷೆಗಳನ್ನು ಇಡಲಾಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ 6.5-ಇಂಚಿನ HD+ PLS LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಒಳಗೊಂಡಿದ್ದು, 81.8% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇ 270 ppi ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಈ ಸ್ಮಾರ್ಟ್‌ಫೋನ್‌ ಇನ್ನು ಹೆಸರಿಸದ ಆಕ್ಟಾ-ಕೋರ್ SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ One UI ಕೋರ್ 4.1 ಬೆಂಬಲದಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಬೆಂಬಲಿಸಲಿದೆ ಎಂದು ಊಹಿಸಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರ ವೇಗದ ಚಾರ್ಜಿಂಗ್‌ ಬೆಂಬಲದ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11 b/g/n, ಮತ್ತು ಬ್ಲೂಟೂತ್ v5 ಅನ್ನು ಒಳಗೊಂಡಿದೆ. ಇನ್ನು ಈ ಫೋನ್ ಸ್ಯಾಮ್‌ಸಂಗ್ ನಾಕ್ಸ್ ಸೆಕ್ಯುರಿಟಿ ಫೀಚರ್ಸ್‌ ಅನ್ನು ಕೂಡ ಒಳಗೊಂಡಿದೆ. ಇದಲ್ಲದೆ ಆಕ್ಸಿಲೆರೋಮೀಟರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿರಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆಯಿದೆ. ಇದರ ಬೆಲೆ ಬಜೆಟ್‌ ಬೆಲೆಯಲ್ಲಿ ಬರುವ ನಿರೀಕ್ಷೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ನಿಖರ ಬೆಲೆಯ ಬಗ್ಗೆ ಯಾವುದೇ ವಿವರಗಳು ಬಹಿರಂಗವಾಗಿಲ್ಲ. ಆದರೆ ಈ ಫೋನ್‌ ಬ್ಲ್ಯಾಕ್‌, ಬ್ಲೂ ಮತ್ತು ಕಾಪರ್‌ ಕಲರ್‌ ಆಯ್ಕೆಗಳಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಬಿಡುಗಡೆ ದಿನಾಂಕ ಹತ್ತಿರವಾಗ್ತಿದ್ದ ಹಾಗೇ ಇನ್ನಷ್ಟು ವಿವರಗಳು ಬಹಿರಂಗವಾಗಲಿದೆ.

Best Mobiles in India

English summary
Samsung Galaxy M04 Official support page live in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+