ಸ್ಯಾಮ್‌ಸಂಗ್ ಸಂಸ್ಥೆಯ ಈ ಫೋನ್ ಮೇಲೆ 46% ಡಿಸ್ಕೌಂಟ್!..ಆಫರ್ ಮಿಸ್ ಮಾಡ್ಕೋಬೇಡಿ
ಸ್ಯಾಮ್‌ಸಂಗ್ ಕಂಪೆನಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ ತನ್ನ ಆಕರ್ಷಕ ಫೀಚರ್ಸ್‌ಗಳಿಂದಲೇ ಸೈ ಎನಿಸಿಕೊಂಡಿದೆ. ಇದೀಗ ಈ ಸ್ಮಾರ್ಟ್‌ಫೋನ್ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ಬಿಗ್ ಡಿಸ್ಕೌಂಟ್ ಪಡೆದುಕೊಂಡಿದೆ. ಅದರಲ್ಲೂ ಈ ಫೋನ್ ಮೇಲೆ ಬರೋಬ್ಬರಿ 46% ಡಿಸ್ಕೌಂಟ್ ಪಡೆದಿದ್ದು, ಗ್ರಾಹಕರು ಹುಬ್ಬೇರಿಸುವಂತೆ ಮಾಡಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ನ 4GB RAM + 64GB ಸ್ಟೋರೇಜ್ ಆಯ್ಕೆಯು ಅಮೆಜಾನ್ ತಾಣದಲ್ಲಿ ಡಿಸ್ಕೌಂಟ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ನ ಮೇಲೆ ಅಮೆಜಾನ್‌ನಲ್ಲಿ 46% ಡಿಸ್ಕೌಂಟ್ ನೀಡ್ತಾ ಇರೋದ್ರಿಂದ ಫೋನ್ ಖರೀದಿಸೋರಿಗೆ ಇದು ಬೆಸ್ಟ್ ಟೈಂ ಆಗಿದೆ. ಹಾಗಾದ್ರೆ ಡಿಸ್ಕೌಂಟ್ ಪಡೆದುಕೊಂಡ ನಂತರ ಈ ಸ್ಮಾರ್ಟ್‌ಫೋನ್‌ನ ಬೆಲೆ ಎಷ್ಟಿದೆ? ಇದರ ಫೀಚರ್ಸ್ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಒದಿರಿ.

ರಿಯಾಯಿತಿಯ ನಂತರದ ಬೆಲೆ ಎಷ್ಟು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ನ 4GB RAM + 64GB ಸ್ಟೋರೇಜ್ ವೇರಿಯೆಂಟ್ ಆಯ್ಕೆಯು ಅಮೆಜಾನ್‌ನಲ್ಲಿ 46% ಡಿಸ್ಕೌಂಟ್ ಪಡೆದಿದೆ. ಇದರಿಂದ ಅಮೆಜಾನ್ ತಾಣದಲ್ಲಿ 11,999ರೂ ಬೆಲೆಯಲ್ಲಿ ಕಾಣಿಸಿಕೊಂಡಿರುವ ಈ ಫೋನ್ ಇದೀಗ ಕೇವಲ 6,499ರೂ ಬೆಲೆಗೆ ಮಾರಾಟವಾಗುತ್ತಿದೆ. ಇದರೊಂದಿಗೆ ನೋ ಕಾಸ್ಟ್ ಇಎಂಐ ಆಯ್ಕೆಯುನ್ನು ಸಹ ನೀಡಲಾಗ್ತಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ 6.5 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 270 ಪಿಪಿಐ ಪಿಕ್ಸೆಲ್ ಸಾಂದ್ರತೆ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ವಾಟರ್ ಡ್ರಾಪ್ ಶೈಲಿಯ ನಾಚ್ ವಿನ್ಯಾಸವನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ P35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಸ್ಕಿನ್ ಜೊತೆಗೆ ರನ್ ಆಗಲಿದೆ. ಇದು 4GB RAM + 64GB ಸ್ಟೋರೇಜ್ ಹೊಂದಿದ್ದು, 8GB ವರೆಗೆ RAM ವಿಸ್ತರಿಸಬಹುದು. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶ ನೀಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಕ್ಯಾಮೆರಾ ಸೆಟ್‌ಅಪ್ ಏನಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಸಪೋರ್ಟ್ ಕೂಡಾ ಪಡೆದಿದೆ.
ಈ ನಡುವೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ ಕೂಡ ಅಮೆಜಾನ್‌ನಲ್ಲಿ 39% ಡಿಸ್ಕೌಂಟ್ ಪಡೆದುಕೊಂಡಿದೆ. ಇದರಿಂದ ಅಮೆಜಾನ್‌ನಲ್ಲಿ 14,999ರೂ ಬೆಲೆ ಹೊಂದಿರುವ ಈ ಫೋನ್ ಇದೀಗ ಕೇವಲ 9,199ರೂ ಬೆಲೆಯಲ್ಲಿ ಸೇಲ್ ಆಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಎಕ್ಸಿನೋಸ್ 850 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12.0-ಆಧಾರಿತ ಒನ್ UI 4 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.


Click it and Unblock the Notifications








