ಸ್ಯಾಮ್‌ಸಂಗ್‌ನ ಈ ಸ್ಮಾರ್ಟ್‌ಫೋನ್‌ಗೆ ಸಿಗ್ತಾ ಇದೆ ಭರ್ಜರಿ ಡಿಸ್ಕೌಂಟ್ ! ಕೂಡಲೇ ಖರೀದಿಸಿ!
ಅಮೆಜಾನ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಒಂದಿಲ್ಲೊಂದು ರಿಯಾಯಿತಿಯನ್ನು ನೀಡುತ್ತಲೇ ಬಂದಿದೆ. ಆನ್‌ಲೈನ್ ಶಾಪಿಂಗ್ ಮೂಲಕ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಹಲವು ಡಿಸ್ಕೌಂಟ್‌ಗಳನ್ನು ನೀಡುವುದು ಸಾಮಾನ್ಯವಾಗಿದೆ. ಅದರಂತೆ ಇದೀಗ ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ ಮೇಲೆ ಕೂಡ ಬಿಗ್ ಆಫರ್ ನೀಡುತ್ತಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ ಮೇಲೆ ಅಮೆಜಾನ್ ಭಾರಿ ರಿಯಾಯಿತಿಯನ್ನು ಘೋಷಿಸಿದೆ. ಇದರಿಂದ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭಾರಿ ವ್ಯತ್ಯಾಸವಾಗಿದ್ದು, ಕೈಗೆಟಕುವ ದರದಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ P35SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಮೇಲೆ ಲಭ್ಯವಾಗುತ್ತಿರುವ ಡಿಸ್ಕೌಂಟ್ ಎಷ್ಟು? ಇದರಿಂದ ಬೆಲೆಯಲ್ಲಿ ಆಗಿರುವ ಬದಲಾವಣೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಕೌಂಟ್ ನಂತರದ ಬೆಲೆ ಎಷ್ಟು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ ಅಮೆಜಾನ್ ತಾಣದಲ್ಲಿ 11,999ರೂ ಬೆಲೆಗೆ ಪಟ್ಟಿಮಾಡಲಾಗಿದೆ. ಆದರೆ ಅಮೆಜಾನ್ ಈ ಸ್ಮಾರ್ಟ್‌ಫೋನ್ ಮೇಲೆ 29% ಡಿಸ್ಕೌಂಟ್ ನೀಡುತ್ತಿದ್ದು, ಇದನ್ನು ಕೇವಲ 8,499ರೂ ಬೆಲೆಗೆ ಖರೀದಿಸಬಹುದಾಗಿದೆ. ಇದು 4GB RAM ಮತ್ತು 64GB ಇಂಟರ್ ಸ್ಟೋರೇಜ್ ಆಯ್ಕೆಗೆ ಅನ್ವಯವಾಗಲಿದೆ ಅನ್ನೋದು ಗಮನಿಸಬೇಕಾದ ವಿಚಾರವಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಡಿಸ್‌ಪ್ಲೇ ರಚನೆ ಹೇಗಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 270 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಇದು ವಾಟರ್ ಡ್ರಾಪ್ ಶೈಲಿಯ ನಾಚ್ ಅನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ P35 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಸ್ಕಿನ್ ಜೊತೆಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 64GB ಸ್ಟೋರೇಜ್ ಹೊಂದಿದೆ. ಸ್ಯಾಮ್‌ಸಂಗ್ RAM ಪ್ಲಸ್ ಫೀಚರ್ಸ್ ಒಳಗೊಂಡಿದ್ದು, RAM ನ 8GB ವರೆಗೆ ವಿಸ್ತರಿಸಬಹುದು. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಕ್ಯಾಮೆರಾ ಸೆಟ್‌ಅಪ್ ಏನಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಬ್ಯಾಟರಿ ಮತ್ತು ಇತರೆ ಸೌಲಭ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಬೆಂಬಲವನ್ನು ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್ ಅಮೆಜಾನ್ ತಾಣದಲ್ಲಿ 29% ಡಿಸ್ಕೌಂಟ್ ಪಡೆದುಕೊಂಡಿರುವುದರಿಂದ ಇದನ್ನು 8,499ರೂ ಬೆಲೆಗೆ ಖರೀದಿಸಬಹುದಾಗಿದೆ. ಇದು 4GB RAM ಮತ್ತು 64GB ಇಂಟರ್ ಸ್ಟೋರೇಜ್ ಆಯ್ಕೆಗೆ ಅನ್ವಯವಾಗಲಿದೆ ಅನ್ನೋದು ಗಮನಿಸಬೇಕಾದ ವಿಚಾರವಾಗಿದೆ. ಈ ಸ್ಮಾರ್ಟ್‌ಫೋನ್ ನೀಲಿ, ಗೋಲ್ಡ್, ಮಿಂಟ್ ಗ್ರೀನ್ ಮತ್ತು ವೈಟ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








