Home
ಸುದ್ದಿಜಾಲ

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಬಿಡುಗಡೆ! ಕಡಿಮೆ ಬೆಲೆ, ಆಕರ್ಷಕ ಫೀಚರ್ಸ್‌!

ಸ್ಯಾಮ್‌ಸಂಗ್‌ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ಇದಕ್ಕೆ ತಕ್ಕಂತೆ ಹೈಎಂಡ್‌ ಪ್ರೈಸ್‌ಟ್ಯಾಗ್‌ ಮಾತ್ರವಲ್ಲದೆ ಕೈಗೆಟಕುವ ಬೆಲೆಯಲ್ಲಿಯೂ ಕೂಡ ಸ್ಯಾಮ್‌ಸಂಗ್‌ ಫೋನ್‌ಗಳನ್ನು ಕಾಣಬಹುದಾಗಿದೆ. ಇದೀಗ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಮತ್ತೊಂದು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಅನ್ನು ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಹತ್ತು ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಫೋನ್‌ ಖರೀದಿಸಲು ಬಯಸುವವರಿಗೆ ಸೂಕ್ತವಾಗಿದೆ.

ಭಾರತದಲ್ಲಿ

ಹೌದು, ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಈ ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ ರಚನೆಯ ಅನುಪಾತ 20:9 ಆಗಿದ್ದು, 270 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಇದು ವಾಟರ್‌ ಡ್ರಾಪ್‌ ಶೈಲಿಯ ನಾಚ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಒಂದು UI 4.1 ಸ್ಕಿನ್ ಜೊತೆಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 64GB ಸ್ಟೋರೇಜ್‌ ಹೊಂದಿದೆ. ಸ್ಯಾಮ್‌ಸಂಗ್‌ RAM ಪ್ಲಸ್ ಫೀಚರ್ಸ್‌ ಒಳಗೊಂಡಿದ್ದು, RAM ನ 8GB ವರೆಗೆ ವಿಸ್ತರಿಸಬಹುದು. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಫೋನ್‌ ವೇಗದ ಚಾರ್ಜಿಂಗ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಇದು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಬೆಂಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ಗೆ ಎರಡು ವರ್ಷಗಳವರೆಗೆ OS ನವೀಕರಣಗಳನ್ನು ಒದಗಿಸುವುದಾಗಿ ಸ್ಯಾಮ್‌ಸಂಗ್‌ ಕಂಪೆನಿ ಭರವಸೆ ನೀಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 8,499ರೂ. ಬೆಲೆ ಹೊಂದಿದೆ. ಇದು ಭಾರತದಲ್ಲಿ ಅಮೆಜಾನ್ ಮೂಲಕ ಡಿಸೆಂಬರ್ 16 ರಂದು ಫಸ್ಟ್‌ ಸೇಲ್‌ ನಡೆಸಲಿದೆ. ಈ ಸ್ಮಾರ್ಟ್‌ಫೋನ್ ನೀಲಿ, ಗೋಲ್ಡ್, ಮಿಂಟ್ ಗ್ರೀನ್ ಮತ್ತು ವೈಟ್ ಬಣ್ಣದ ಆಯ್ಕೆಗಳಲ್ಲಿ ಬರಲಿದೆ.

Best Mobiles in India

English summary
Samsung Galaxy M04 With 128GB Storage Launched in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+