ಕೇವಲ 6,499 ರೂ.! 50MP ಕ್ಯಾಮೆರಾ.. 5000mAh ಬ್ಯಾಟರಿ..ಈ ಸ್ಯಾಮ್‌ಸಂಗ್ ಫೋನಿನ ಬೆಲೆ ಭಾರೀ ಇಳಿಕೆ
ಸ್ಯಾಮ್‌ಸಂಗ್ ಫೋನ್‌ಗಳಿಗೆ ಭಾರತದಲ್ಲಿ ಭಾರೀ ಬೇಡಿಕೆ ಇದೆ. ಮೊಬೈಲ್ ಪ್ರಿಯರ ಅಭಿರುಚಿಗೆ ತಕ್ಕಂತೆ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಾ ಬಂದಿದೆ. ಇದರೊಂದಿಗೆ ಆಗಾಗ್ಗೆ ತನ್ನ ಫೋನ್‌ಗಳ ಬೆಲೆಯನ್ನು ಕಡಿಮೆ ಮಾಡುತ್ತದೆ. ಅದರಂತೆ, ಸ್ಯಾಮ್‌ಸಂಗ್ ಗ್ಯಾಲಕ್ಸಿ M05 (Samsung Galaxy M05) ಫೋನಿನ ಬೆಲೆಯನ್ನು ಇಳಿಕೆ ಮಾಡಿದೆ. ಈ ಮೂಲಕ ತನ್ನ ಅಭಿಮಾನಿಗಳಿಗೆ ಹೊಸ ವರ್ಷದ ಉಡುಗೊರೆ ನೀಡಿದೆ. ನೀವು ಈ ಫೋನ್ ಖರೀದಿಸಿದರೆ, ಶೇ.35 ರಷ್ಟು ರಿಯಾಯಿತಿ ಸಿಗುತ್ತದೆ. ಜೊತೆಗೆ, ಹೆಚ್ಚುವರಿಯಾಗಿ 1,500 ಡಿಸ್ಕೌಂಟ್ ಲಭ್ಯವಿದೆ. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M05 ಮೊಬೈಲ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ 6.7 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಈ ಮೊಬೈಲ್ ಮೀಡಿಯಾಟೆಕ್ ಹೆಲಿಯೊ G85 ಪ್ರೊಸೆಸರ್ ಹೊಂದಿದೆ. ಇದರಲ್ಲಿ 4GB RAM + 64GB ಸ್ಟೋರೇಜ್ ಲಭ್ಯವಿದೆ. ಹಾಗೆಯೇ 5000mAh ಬ್ಯಾಟರಿಯನ್ನು ಹೊಂದಿದೆ. ನೀವು, ಹೊಸ ವರ್ಷಕ್ಕೆ 7,000 ರೂ. ಒಳಗಡೆ ಹೊಸ ಫೋನ್ ಖರೀದಿಸಲು ಬಯಸಿದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M05 ಉತ್ತಮ ಆಯ್ಕೆಯಾಗಿದೆ. ಈ ಫೋನಿನ ಮತ್ತಷ್ಟು ಫೀಚರ್ಸ ತಿಳಿಯಲು ಮುಂದೆ ಓದಿ.

ಡಿಸ್ಪ್ಲೇ ಹೇಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M05 ಮೊಬೈಲ್ 6.7 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಅನ್ನು ಹೊಂದಿದೆ. ಇದು 720 × 1600 ಪಿಕ್ಸೆಲ್ ರೆಸಲ್ಯೂಶನ್ ಮತ್ತು 60Hz ರಿಫ್ರೆಶ್ ದರದ ಸಪೋರ್ಟ್ ಪಡೆದಿದೆ.
ಪ್ರೊಸೆಸರ್ ಯಾವುದು
ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ M05 ಫೋನಿನಲ್ಲಿ ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್ ಅಳವಡಿಸಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ OneUI6 ಆಪರೇಟಿಂಗ್ ಸಿಸ್ಟಮ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಗ್ರಾಫಿಕ್ಸ್ ಕಾರ್ಡ್‌ಗಾಗಿ, ಮಾಲಿ G52 ಜಿಪಿಯು ಲಭ್ಯವಿದೆ.
ಸ್ಟೋರೇಜ್ ಆಯ್ಕೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M05 ಸ್ಮಾರ್ಟ್‌ಫೋನ್ 4GB RAM + 64GB ಇಂಟರ್ನಲ್ ಸ್ಟೋರೇಜ್ ಹೊಂದಿದೆ. ಇದು 4GB ವರ್ಚುವಲ್ RAM ಸಹ ಹೊಂದಿದೆ. ಇದರ ಸಹಾಯದಿಂದ 8GB ವರೆಗಿನ ಶಕ್ತಿಯನ್ನು ಬಳಸಬಹುದು. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1 TB ವರೆಗೆ ಸ್ಟೋರೇಜ್ ಹೆಚ್ಚಿಸಬಹುದು.
ಡ್ಯುಯಲ್ ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M05 ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ ಎಲ್ಇಡಿ ಫ್ಲ್ಯಾಷ್ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬೊಂಬಾಟ್ ಬ್ಯಾಟರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ M05 ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 25W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ M05 ಸ್ಮಾರ್ಟ್‌ಫೋನ್ ಸೈಡ್ ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಫೇಸ್ ಅನ್‌ಲಾಕ್ ವೈಶಿಷ್ಟ್ಯವನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ ಡ್ಯುಯಲ್ ಸಿಮ್ 4G, ವೈ-ಫೈ, ಬ್ಲೂಟೂತ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M05 ಫೋನಿನ ಬೆಲೆ ಮತ್ತು ಆಫರ್‌ಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ M05 ಫೋನನ್ನು 4GB RAM ಮತ್ತು 64GB ಸ್ಟೋರೇಜ್ ವೇರಿಯಂಟ್ ಅನ್ನು ಬಿಡುಗಡೆ ಮಾಡಲಾಗಿದೆ. ಇದರ ಬೆಲೆ 7,999 ರೂ. ಆಗಿದೆ. ಪ್ರಸ್ತುತ, ಇದನ್ನು ಇ-ಕಾಮರ್ಸ್ ಸೈಟ್ ಅಮೆಜಾನ್‌ನಲ್ಲಿ ಕೇವಲ 6,499 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಕಂಪನಿಯು 1,500 ರೂ. ರಿಯಾಯಿತಿ ನೀಡುತ್ತಿದೆ. ಜೊತೆಗೆ, ಎಕ್ಸ್‌ಚೇಂಜ್ ಆಫರ್ ಸಹ ಲಭ್ಯವಿದೆ. ನೀವು, ಈ ಸ್ಮಾರ್ಟ್‌ಫೋನ್ ಅನ್ನು ಪುದೀನ ಹಸಿರು ಬಣ್ಣದಲ್ಲಿ ಖರೀದಿಸಬಹುದು. ಅಮೆಜಾನ್‌ನಲ್ಲಿ ಈ ಎಲ್ಲಾ ಆಫರ್ ಗಳ ಲಾಭ ಪಡೆಯಬಹುದು.


Click it and Unblock the Notifications








