ಸ್ಯಾಮ್‌ಸಂಗ್‌ ಗ್ಯಾಲಕ್ಸಿ M11 ಮತ್ತು M01 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ!

|

ಸ್ಮಾರ್ಟ್‌ಫೋನ್‌ ದಿಗ್ಗಜ ಎನಿಸಿಕೊಂಡಿರುವ ಸ್ಯಾಮ್‌ಸಂಗ್‌ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಪ್ರಸಿದ್ದಿಯನ್ನ ಪಡೆದುಕೊಂಡಿದೆ. ಈಗಾಗಲೇ ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಎನಿಸಿಕೊಂಡಿದೆ. ಇನ್ನು ತನ್ನ ಸ್ಮಾರ್ಟ್‌ಫೋನ್‌ಗಳಲ್ಲಿ ಹೊಸ ಮಾದರಿಯ ಫೀಚರ್ಸ್‌ ಅನ್ನು ಪರಿಚಯಿಸಿದ್ದು, ಸದ್ಯ ಇದೀಗ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M11 ಮತ್ತು M01 ಅನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ತನ್ನ ಗ್ಯಾಲಕ್ಸಿ M11 ಮತ್ತು M01 ಅನ್ನು ಜೂನ್ 2, 2020 ರಂದು ಬಿಡುಗಡೆ ಮಾಡಲು ಸಜ್ಜಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಆಗಿರಲಿದ್ದು, ಹೊಸ ವಿನ್ಯಾಸದಲ್ಲಿ ಬರಲಿದೆ ಎನ್ನಲಾಗ್ತಿದೆ. ಸದ್ಯ ಲಭ್ಯ ಮಾಹಿತಿಯ ಪ್ರಕಾರ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಹಾಗೂ ವಿನ್ಯಾಸ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್‌ 6.4 ಇಂಚಿನ ಡಿಸ್‌ಪ್ಲೇ ಯನ್ನ ಹೊಂದಿರಲಿದ್ದು, ಇದು HD+ ರೆಸಲ್ಯೂಶನ್ ಹೊಂದಿರುವ ನಿರೀಕ್ಷೆ ಇದೆ. ಇದಲ್ಲದೆ PLS TFT LCD ಪ್ಯಾನಲ್ ಅನ್ನು ಹೊಂದಿರುತ್ತದೆ. ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್‌ 5. 71-ಇಂಚಿನ ಡಿಸ್‌ಪ್ಲೇಯನ್ನ ಹೊಂದಿರುವ ಸಾಧ್ಯತೆ ಇದೆ. ಜೊತೆಗೆ ಈ ಡಿಸ್‌ಪ್ಲೇ HD+ ರೆಸಲ್ಯೂಶನ್‌ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 439 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್‌ 4GB RAM ಮತ್ತು 64GB ಆಂತರಿಕ ಸಂಗ್ರಹಣೆ ಸಾಮರ್ಥ್ಯವನ್ನು ಹೊಂದಿರುತ್ತದೆ. ಇನ್ನು ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್‌ 3GB RAM ಮತ್ತು 32GB ಇಂಟರ್‌ ಸ್ಟೊರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌, ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಗ್ಯಾಲಕ್ಸಿM01 ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಸಹ ಇರಲಿದೆ ಎನ್ನಲಾಗ್ತಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಭಿನ್ನ ಮಾದರಿಯ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿವೆ. ಇದರಲ್ಲಿ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 15 W ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನ ಹೊಂದಿರುವ ಸಾಧ್ಯತೆ ಇದೆ. ಇನ್ನು ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ ಎನ್ನಲಾಗ್ತಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿವೆ ಎಂದು ನಿರೀಕ್ಷಿಸಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಸ್ಯಾಮ್‌ಸಂಗ್ M01 ಸ್ಮಾರ್ಟ್‌ಫೋನ್‌ ಬೆಲೆ 8,999 ರೂ ಆಗಿರಲಿದ್ದು, ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್‌ 12,999. ರೂ ಬೆಲೆಯನ್ನ ಹೊಂದಿರುವ ಸಾಧ್ಯತೆ ಇದೆ. ಸದ್ಯ ಈ ಸ್ಮಾರ್ಟ್‌ಫೋನ್‌ಗಳು ಇದೇ ಜೂನ್‌ 2ರಂದು ಬಿಡುಗಡೆ ಆಗಲಿವೆ ಎಂದು ಹೇಳಲಾಗ್ತಿದೆ.

Best Mobiles in India

English summary
This new information comes right before the launch of unannounced smartphones. Let’s check out the details regarding the Samsung Galaxy M11 and Galaxy M01 here.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X