Home
ಸುದ್ದಿಜಾಲ

ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M11 ಮತ್ತು ಗ್ಯಾಲಕ್ಸಿ M01 ಫೋನ್‌ಗಳು ಲಾಂಚ್!

ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯು ಈಗಾಗಲೆ ಹಲವು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದ್ದು, ಈಗ ಮತ್ತೆ ಎರಡು ಬಜೆಟ್ ಫೋನ್ ಲಾಂಚ್ ಮಾಡಿದೆ. ಸಂಸ್ಥೆಯು ಇಂದು (ಜೂನ್ 2) ದೇಶಿಯ ಮಾರುಕಟ್ಟೆಗೆ ಗ್ಯಾಲಕ್ಸಿ M11 ಹಾಗೂ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್‌ಗಳನ್ನು ಅನ್ನು ಪರಿಚಯಿಸಿದೆ. ಈ ಫೋನ್‌ಗಳು ಇನ್‌ಫಿನಿಟಿ ಮಾದರಿಯ ಡಿಸ್‌ಪ್ಲೇಯನ್ನು ಹೊಂದಿವೆ.

ಸ್ಯಾಮ್‌ಸಂಗ್

ಹೌದು, ಸ್ಯಾಮ್‌ಸಂಗ್ ದೇಶಿಯ ಮಾರುಕಟ್ಟೆಗೆ ಗ್ಯಾಲಕ್ಸಿ M11 ಹಾಗೂ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಿದೆ. ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್ 3GB RAM + 32GB ಮತ್ತು 4GB RAM + 64GB ವೇರಿಯಂಟ್ ಆಯ್ಕೆ ಹೊಂದಿದೆ. ಹಾಗೆಯೇ ಗ್ಯಾಲಕ್ಸಿ M01 3GB RAM + 32GB ಸ್ಟೋರೇಜ್‌ನ ಒಂದೇ ವೇರಿಯಂಟ್ ಆಯ್ಕೆ ಹೊಂದಿದೆ. ಇನ್ನು ಈ ಫೋನ್‌ಗಳು ಬ್ಲ್ಯಾಕ್, ಬ್ಲೂ ಮತ್ತು ರೆಡ್‌ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದ್ದು, ಆನ್‌ಲೈನ್ ತಾಣಗಳು ಹಾಗೂ ಆಫ್‌ಲೈನ್‌ ಸ್ಟೋರ್‌ಗಳಲ್ಲಿ ಮಾರಾಟಕ್ಕೆ ಲಭ್ಯವಾಗಲಿವೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಗ್ಯಾಲಕ್ಸಿ M11 ಡಿಸ್‌ಪ್ಲೇ

ಗ್ಯಾಲಕ್ಸಿ M11 ಡಿಸ್‌ಪ್ಲೇ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್‌ 6.4 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಯನ್ನ ಹೊಂದಿದ್ದು, ಸ್ಕ್ರೀನ್ ಪಿಕ್ಸಲ್ ರೆಸಲ್ಯೂಶನ್ 720x1560 ಸಾಮರ್ಥ್ಯದಲ್ಲಿದೆ. ಡಿಸ್‌ಪ್ಲೇಯು ಇನ್‌ಫಿನಿಟಿ ಮಾದರಿಯಲ್ಲಿದ್ದು, 19.5:9 ಅನುಪಾತವನ್ನು ಪಡೆದಿದೆ.

ಗ್ಯಾಲಕ್ಸಿ M11 ಪ್ರೊಸೆಸರ್‌

ಗ್ಯಾಲಕ್ಸಿ M11 ಪ್ರೊಸೆಸರ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 439 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM + 32GB ಮತ್ತು 4GB RAM ಮತ್ತು 64GB ಆಂತರಿಕ ಸಂಗ್ರಹಣೆ ಸಾಮರ್ಥ್ಯದ ಆಯ್ಕೆಗಳಿವೆ.

ಗ್ಯಾಲಕ್ಸಿ M11 ಕ್ಯಾಮೆರಾ

ಗ್ಯಾಲಕ್ಸಿ M11 ಕ್ಯಾಮೆರಾ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌, ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಜೊತೆಗೆ 8 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಗ್ಯಾಲಕ್ಸಿ M11 ಬ್ಯಾಟರಿ

ಗ್ಯಾಲಕ್ಸಿ M11 ಬ್ಯಾಟರಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ 15 W ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನ ಒಳಗೊಂಡಿದೆ. ಇದರೊಟ್ಟಿಗೆ ಯುಎಸ್‌ಬಿ ಟೈಪ್-ಸಿ ಪೋರ್ಟ್, ವೈಫೈ, ಬ್ಲೂಟೂತ್, ಸೌಲಭ್ಯಗಳು ಸಹ ಇವೆ.

ಗ್ಯಾಲಕ್ಸಿ M01 ಫೀಚರ್ಸ್‌ಗಳು

ಗ್ಯಾಲಕ್ಸಿ M01 ಫೀಚರ್ಸ್‌ಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ M01 720x1560 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 5.71 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಡಿಸ್‌ಪ್ಲೇಯ ಅನುಪಾತವು 19.5:9 ಆಗಿದೆ. ಇನ್ನು ಈ ಫೋನ್ ಸಹ ಸ್ನಾಪ್‌ಡ್ರಾಗನ್‌ 439 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಜೊತೆಗೆ 3GB RAM + 32GB ಸಾಮರ್ಥ್ಯದ ಒಂದೇ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಅವುಗಳು 13ಎಂಪಿ ಮ್ತು 2ಎಂಪಿ ಸೆನ್ಸಾರ್ ಬಲದಲ್ಲಿವೆ. ಇದರೊಂದಿಗೆ ಸೆಲ್ಫಿಗಾಗಿ 5ಎಂಪಿಯ ಕ್ಯಾಮೆರಾವನ್ನು ಒದಗಿಸಲಾಗಿದೆ. ಇನ್ನು ಈ ಫೋನ್ 4,000mAh ಬ್ಯಾಟರಿ ಸಾಮರ್ಥ್ಯ ಪಡೆದಿದ್ದು, ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಪಡೆದಿಲ್ಲ.

Best Mobiles in India

English summary
Samsung Galaxy M11 price in India starts at Rs. 10,999 while the Galaxy M01 comes at Rs. 8,999.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+