ಸ್ಯಾಮ್‌ಸಂಗ್ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್ ಲಾಂಚ್!
ದಕ್ಷಿಣ ಕೊರಿಯಾ ಮೂಲದ ಸ್ಯಾಮ್‌ಸಂಗ್ ಸಂಸ್ಥೆಯು ಈಗಾಗಲೇ ಗ್ಯಾಲಕ್ಸಿ M ಸರಣಿಯಲ್ಲಿ ಹಲವು ಬಜೆಟ್ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಆ ಸಾಲಿಗೆ ಇದೀಗ ಹೊಸದಾಗಿ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್ ಅನ್ನು ಸೇರ್ಪಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಪಡೆದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದಿರುವುದು ಮೇನ್ ಹೈಲೈಟ್ ಆಗಿದೆ.

ಹೌದು, ಸ್ಯಾಮ್‌ಸಂಗ್ ಹೊಸದಾಗಿ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಈ ಫೋನ್ ಸಂಸ್ಥೆಯ UAE ವೆಬ್‌ಸೈಟ್‌ನ ಲಿಸ್ಟ್‌ನಲ್ಲಿ ಕಾಣಿಸಿಕೊಂಡಿದೆ. ಇದು ಬಜೆಟ್ ಫೋನಾಗಿದ್ದರು ಈ ಫೋನ್ ಪಂಚ್ ಹೋಲ್ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ. ಹಾಗೆಯೇ 3GB RAM+32GB ಸ್ಟೋರೇಜ್ ವೇರಿಯಂಟ್ ಆಯ್ಕೆ ಇದ್ದು, ಮೆಟಾಲಿಕ್ ಬ್ಲೂ ಹಾಗೂ ವೈಲೆಟ್ ಬಣ್ಣಗಳ ಆಯ್ಕೆಗಳನ್ನು ಪಡೆದಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.

ಡಿಸ್‌ಪ್ಲೇ ರಚನೆ
ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್ 720 x 1560 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಜೊತೆಗೆ ಪಂಚ್ ಹೋಲ್ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ. ಈ ಫೋನಿನ 161.4x76.3x9.0mm ಸುತ್ತಳತೆಯನ್ನು ಪಡೆದಿದ್ದು, 197ಗ್ರಾಂ ತೂಕವನ್ನು ಹೊಂದಿದೆ. ಸ್ಕ್ರೀನ್ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ ಇರುವ ಬಗ್ಗೆ ಮಾಹಿತಿ ಇಲ್ಲ.

ಪ್ರೊಸೆಸರ್ ಬಲ
ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್ 1.8GHz ವೇಗದ ಸಾಮರ್ಥ್ಯದೊಂದಿಗೆ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಅಂದಹಾಗೆ ಈ ಫೋನಿನಲ್ಲಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಇರುವ ಬಗ್ಗೆ ಮಾಹಿತಿ ಇಲ್ಲ. ಕಾರ್ಯನಿರ್ವಹಿಸಲಿದೆ. 3GB RAM+32GB ಸ್ಟೋರೇಜ್ ಆಯ್ಕೆಯನ್ನು ಪಡೆದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ.

ಕ್ಯಾಮೆರಾ ರಚನೆ
ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 13ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 5ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು 2ಎಂಪಿ ಸೆನ್ಸಾರ್ ಬಲವನ್ನು ಪಡೆದಿದೆ. ಇದರೊಂದಿಗೆ ಸೆಲ್ಫಿಗಾಗಿ 8ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ
ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ 4G VoLTE, ವೈಫೈ, ಬ್ಲೂಟತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್ 3GB RAM+32GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ. ಸಂಸ್ಥೆಯು ಈ ಫೋನಿನ ನಿಖರ ಬೆಲೆ ಬಹಿರಂಗಪಡಿಸಿಲ್ಲ. ಆದರೆ ಈ ಫೋನ್ 10,000ರೂ.ಪ್ರೈಸ್‌ಟ್ಯಾಗ್ ಒಳಗೆ ಇರಲಿದೆ ಎಂದು ಹೇಳಲಾಗಿದೆ. ಹಾಗೂ ಮೆಟಾಲಿಕ್ ಬ್ಲೂ ಹಾಗೂ ವೈಲೆಟ್ ಬಣ್ಣಗಳ ಆಯ್ಕೆಗಳನ್ನು ಹೊಂದಿದೆ.


Click it and Unblock the Notifications








