Home
ಸುದ್ದಿಜಾಲ

ಬೆಲೆ ಇಳಿಕೆ ಕಂಡ ಸ್ಯಾಮ್‌ಸಂಗ್ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್‌!

ಜನಪ್ರಿಯ ಸ್ಯಾಮ್‌ಸಂಗ್ ಕಂಪನಿಯು ಎಂಟ್ರಿ ಲೆವೆಲ್‌ನಲ್ಲಿ ಬಿಡುಗಡೆ ಮಾಡಿರುವ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್‌ ಈಗಾಗಲೇ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಕಡಿಮೆ ಬೆಲೆಯ ಪ್ರೈಸ್‌ಟ್ಯಾಗ್ ಹೊಂದಿರುವ ಗ್ಯಾಲಕ್ಸಿ M11 ಹಾಗೂ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಈಗ ಇಳಿಕೆ ಕಂಡಿದ್ದು, ಇವುಗಳ ಮತ್ತಷ್ಟು ಅಗ್ಗದಲ್ಲಿ ದೊರೆಯಲಿದೆ. ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್‌ 439 SoC ಪ್ರೊಸೆಸರ್‌ ಅನ್ನು ಹೊಂದಿದೆ.

ಗ್ಯಾಲಕ್ಸಿ

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ M11 ಹಾಗೂ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ 1000ರೂ.ವರೆಗೂ ಕಡಿತ ಆಗಿದೆ. ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್ 3GB + 32GB ಮತ್ತು 4GB + 64GB ಸ್ಟೋರೇಜ್‌ನ ಎರಡು ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಅಮೆಜಾನ್‌ ಹಾಗೂ ಸ್ಯಾಮ್‌ಸಂಗ್‌ ತಾಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಬ್ಲ್ಯಾಕ್‌, ಮೆಟಾಲಿಕ್ ಬ್ಲೂ ಹಾಗೂ ವೈಲೆಂಟ್‌ ಬಣ್ಣಗಳ ಆಯ್ಕೆಗಳನ್ನು ಪಡೆದಿದೆ. ಹಾಗಾದರೇ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಗ್ಯಾಲಕ್ಸಿ M11 ಡಿಸ್‌ಪ್ಲೇ

ಗ್ಯಾಲಕ್ಸಿ M11 ಡಿಸ್‌ಪ್ಲೇ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್‌ 6.4 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಯನ್ನ ಹೊಂದಿದ್ದು, ಸ್ಕ್ರೀನ್ ಪಿಕ್ಸಲ್ ರೆಸಲ್ಯೂಶನ್ 720x1560 ಸಾಮರ್ಥ್ಯದಲ್ಲಿದೆ. ಡಿಸ್‌ಪ್ಲೇಯು ಇನ್‌ಫಿನಿಟಿ ಮಾದರಿಯಲ್ಲಿದ್ದು, 19.5:9 ಅನುಪಾತವನ್ನು ಪಡೆದಿದೆ.

ಗ್ಯಾಲಕ್ಸಿ M11 ಪ್ರೊಸೆಸರ್‌

ಗ್ಯಾಲಕ್ಸಿ M11 ಪ್ರೊಸೆಸರ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 439 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM + 32GB ಮತ್ತು 4GB RAM ಮತ್ತು 64GB ಆಂತರಿಕ ಸಂಗ್ರಹಣೆ ಸಾಮರ್ಥ್ಯದ ಆಯ್ಕೆಗಳಿವೆ.

ಗ್ಯಾಲಕ್ಸಿ M11 ಕ್ಯಾಮೆರಾ

ಗ್ಯಾಲಕ್ಸಿ M11 ಕ್ಯಾಮೆರಾ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌, ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಜೊತೆಗೆ 8 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಗ್ಯಾಲಕ್ಸಿ M11 ಬ್ಯಾಟರಿ

ಗ್ಯಾಲಕ್ಸಿ M11 ಬ್ಯಾಟರಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ 15 W ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನ ಒಳಗೊಂಡಿದೆ. ಇದರೊಟ್ಟಿಗೆ ಯುಎಸ್‌ಬಿ ಟೈಪ್-ಸಿ ಪೋರ್ಟ್, ವೈಫೈ, ಬ್ಲೂಟೂತ್, ಸೌಲಭ್ಯಗಳು ಸಹ ಇವೆ.

Best Mobiles in India

English summary
The Samsung Galaxy M11 price in India has been revised to Rs. 10,499 for the 3GB + 32GB storage option.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+