Home
ಸುದ್ದಿಜಾಲ

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಮತ್ತು ಗ್ಯಾಲಕ್ಸಿ F12 ಖರೀದಿಸುವ ಗ್ರಾಹಕರಿಗೆ ಶಾಕ್!

ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯ ಇತ್ತೀಚಿಗೆ ಬಜೆಟ್ ಬೆಲೆಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಗ್ಯಾಲಕ್ಸಿ M ಮತ್ತು ಗ್ಯಾಲಕ್ಸಿ F ಸರಣಿಯ ಸ್ಮಾರ್ಟ್‌ಫೋನ್‌ಗಳು ಬಜೆಟ್‌ ದರದಲ್ಲಿ ಗ್ರಾಹಕರನ್ನು ಹೆಚ್ಚು ಆಕರ್ಷಿಸಿದೆ. ಆದರೆ ಇದೀಗ ಗ್ಯಾಲಕ್ಸಿ ಎಂ ಸರಣಿಯ ಗ್ಯಾಲಕ್ಸಿ M12 ಗ್ಯಾಲಕ್ಸಿ F12 ಈ ಎರಡು ಜನಪ್ರಿಯ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಏರಿಕೆ ಆಗಿದೆ.

ಸ್ಯಾಮ್ಸಂಗ್

ಹೌದು, ಸ್ಯಾಮ್ಸಂಗ್ ಗ್ಯಾಲಕ್ಸಿ M12 ಮತ್ತು ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ 500ರೂ. ಹೆಚ್ಚಳ ಆಗಿದೆ. ಆದರೆ ಕಂಪನಿಯು ದರ ಹೆಚ್ಚಳಕ್ಕೆ ಕಾರಣ ಸ್ಪಷ್ಟಪಡಿಸಿಲ್ಲ. ದರ ಹೆಚ್ಚಳದ ವರದಿಯಂತೆ ಗ್ಯಾಲಕ್ಸಿ M12 ಆರಂಭಿಕ 4GB RAM + 64GB ವೇರಿಯಂಟ್ ಬೆಲೆಯು 11,499ರೂ. ಆಗಿದೆ ಹಾಗೂ ಗ್ಯಾಲಕ್ಸಿ F12 ಆರಂಭಿಕ ವೇರಿಯಂಟ್ ಬೆಲೆಯು 11,499ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ.

ಗ್ಯಾಲಕ್ಸಿ M12  ಡಿಸ್‌ಪ್ಲೇ ರಚನೆ

ಗ್ಯಾಲಕ್ಸಿ M12 ಡಿಸ್‌ಪ್ಲೇ ರಚನೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಇದು TFT ಇನ್ಫಿನಿಟಿ-ವಿ-ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ ರೀಫ್ರೇಶ್‌ ರೇಟ್‌ 90Hz ಆಗಿದೆ. ವಿಡಿಯೋ ವೀಕ್ಷಣೆಗೆ ಹಾಗೂ ಗೇಮಿಂಗ್‌ಗೆ ಪೂರಕವಾಗಿದೆ.

ಪ್ರೊಸೆಸರ್‌ ಸಾಮರ್ಥ್ಯ ಎಷ್ಟು

ಪ್ರೊಸೆಸರ್‌ ಸಾಮರ್ಥ್ಯ ಎಷ್ಟು

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM+64GB ಮತ್ತು 6GB RAM+128GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೂ ಬಾಹ್ಯ ಮೆಮೊರಿಯನ್ನು ವಿಸ್ತರಿಸುವ ಅವಕಾಶವನ್ನು ಇದು ಒಳಗೊಂಡಿದೆ.

ಕ್ಯಾಮೆರಾ ಸೆನ್ಸಾರ್‌ ಸ್ಪೆಷಲ್

ಕ್ಯಾಮೆರಾ ಸೆನ್ಸಾರ್‌ ಸ್ಪೆಷಲ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು f/2.0 ಅಪರ್ಚರ್ ನೊಂದಿಗೆ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾವು f/2.2 ಅಪರ್ಚರ್‌ನೊಂದಿಗೆ 5 ಮೆಗಾಪಿಕ್ಸೆಲ್ ಸೆನ್ಸಾರ್, ಅಲ್ಟ್ರಾ-ವೈಡ್-ಆಂಗಲ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರ್‌ ಇದ್ದು, f/2.2 ಅಪರ್ಚರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ವಾಟರ್‌ಡ್ರಾಪ್ ಸ್ಕೈಲ್‌ ನಾಚ್ ಇದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 4G ನೆಟ್‌ವರ್ಕ್‌ನಲ್ಲಿ 58 ಗಂಟೆಗಳ ಟಾಕ್‌ಟೈಮ್‌ ಅನ್ನು ನೀಡಲಿದೆ. ಈ ಫೋನ್ 164.0x75.9x9.7mm ಸುತ್ತಳತೆಯನ್ನು ಪಡೆದಿದ್ದು, ಹಾಗೆಯೇ 221 ಗ್ರಾಂ ತೂಕವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಫೈ 802.11 ಬಿ / ಜಿ / ಎನ್, ಬ್ಲೂಟೂತ್ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ.

ಗ್ಯಾಲಕ್ಸಿ F12- ಡಿಸ್‌ಪ್ಲೇ ರಚನೆ

ಗ್ಯಾಲಕ್ಸಿ F12- ಡಿಸ್‌ಪ್ಲೇ ರಚನೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಇದು TFT ಇನ್ಫಿನಿಟಿ-ವಿ-ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ ರೀಫ್ರೇಶ್‌ ರೇಟ್‌ 90Hz ಆಗಿದೆ. ವಿಡಿಯೋ ವೀಕ್ಷಣೆಗೆ ಹಾಗೂ ಗೇಮಿಂಗ್‌ಗೆ ಪೂರಕವಾಗಿದೆ.

ಗ್ಯಾಲಕ್ಸಿ F12- ಪ್ರೊಸೆಸರ್‌ ಸಾಮರ್ಥ್ಯ

ಗ್ಯಾಲಕ್ಸಿ F12- ಪ್ರೊಸೆಸರ್‌ ಸಾಮರ್ಥ್ಯ

ಸ್ಯಾಮ್‌ಸಂಗ್ ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM + 64GB ಮತ್ತು 4GB RAM + 128GB ಸ್ಟೋರೇಜ್ ವೇರಿಯೆಂಟ್‌ ಆಯ್ಕೆಗಳನ್ನು ಹೊಂದಿದೆ. ಇನ್ನು ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೂ ಬಾಹ್ಯ ಮೆಮೊರಿಯನ್ನು ವಿಸ್ತರಿಸುವ ಅವಕಾಶವನ್ನು ಇದು ಒಳಗೊಂಡಿದೆ.

ಗ್ಯಾಲಕ್ಸಿ F12- ಕ್ಯಾಮೆರಾ ಸೆನ್ಸಾರ್‌

ಗ್ಯಾಲಕ್ಸಿ F12- ಕ್ಯಾಮೆರಾ ಸೆನ್ಸಾರ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು f/2.0 ಅಪರ್ಚರ್ ನೊಂದಿಗೆ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾವು f/2.2 ಅಪರ್ಚರ್‌ನೊಂದಿಗೆ 5 ಮೆಗಾ ಪಿಕ್ಸೆಲ್ ಸೆನ್ಸಾರ್, ಅಲ್ಟ್ರಾ-ವೈಡ್-ಆಂಗಲ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರ್‌ ಇದ್ದು, f/2.2 ಅಪರ್ಚರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ವಾಟರ್‌ಡ್ರಾಪ್ ಸ್ಕೈಲ್‌ ನಾಚ್ ಇದೆ.

ಗ್ಯಾಲಕ್ಸಿ F12- ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಗ್ಯಾಲಕ್ಸಿ F12- ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. 15W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಈ ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಫೈ, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ. ಬೋರ್ಡ್‌ನಲ್ಲಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಇದೆ.

Best Mobiles in India

English summary
Samsung Galaxy M12 And Galaxy F12 Prices in India Hiked: New Price?
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+