ಇಂದು ಭಾರತಕ್ಕೆ ಲಗ್ಗೆ ಇಡಲಿದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌!

|

ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಇಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನಿನ ಉತ್ತರಾಧಿಕಾರಿ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಈ ಫೋನ್ ಇದು ಕ್ವಾಡ್ ರಿಯರ್ ಕ್ಯಾಮೆರಾಗಳು ಮತ್ತು ವಾಟರ್‌ಡ್ರಾಪ್ ಶೈಲಿಯ ಡಿಸ್ಪ್ಲೇ ನಾಚ್‌ನೊಂದಿಗೆ ಬರಲಿದ್ದು, ಗ್ಯಾಲಕ್ಸಿ M12 ಸಹ 6,000mAh ಬ್ಯಾಟರಿಯನ್ನು ಹೊಂದಿರಲಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ತನ್ನ M ಸರಣಿಯಲ್ಲಿ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ ಅನ್ನು ಈಗಾಗಲೇ ವಿಯೆಟ್ನಂ ನಲ್ಲಿ ಅನಾವರಣ ಮಾಡಿದೆ. ಈಗ ಭಾರತೀಯ ಮಾರುಕಟ್ಟೆಗೆ ಪರಿಚಯಿಸಲಿದೆ. ಕಳೆದ ವರ್ಷ ಲಾಂಚ್ ಆಗಿದ್ದ, ಗ್ಯಾಲಕ್ಸಿ M11 ಸ್ಮಾರ್ಟ್‌ಫೋನಿಗಿಂತ ಅಪ್‌ಡೇಟ್‌ ಫೀಚರ್ಸ್‌ಗಳಲ್ಲಿ ಈ ಫೋನ್ ಗುರುತಿಸಿಕೊಳ್ಳಲಿದೆ. ಮುಖ್ಯ ರಿಯರ್‌ ಕ್ಯಾಮೆರಾವು 48 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿರಲಿದೆ. ಹಾಗೆಯೇ 128GB ಸ್ಟೋರೇಜ್‌ ಆಯ್ಕೆಯನ್ನು ಹೊಂದಿರಲಿದೆ.

ಸ್ಯಾಮ್‌ಸಂಗ್

ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಫೋನ್‌ ಇಂದು ಮಧ್ಯಾಹ್ನ 12 ಗಂಟೆಗೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಆಗುತ್ತದೆ. ಯುಟ್ಯೂಬ್‌ ತಾಣದ ಮೂಲಕ ಲಾಂಚ್ ಕಾರ್ಯಕ್ರಮದ ಲೈವ್‌ಸ್ಟ್ರೀಮ್ ವೀಕ್ಷಿಸಬಹುದಾಗಿದೆ. ಹಾಗಾದರೇ ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ ಏನಿರಲಿದೆ

ಡಿಸ್‌ಪ್ಲೇ ವಿಶೇಷತೆ ಏನಿರಲಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಇದು TFT ಇನ್ಫಿನಿಟಿ-ವಿ-ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ ರೀಫ್ರೇಶ್‌ ರೇಟ್‌ 90Hz ಆಗಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 3GB RAM+32GB, 4GB RAM+64GB ಮತ್ತು 6GB RAM+128GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ಸೆನ್ಸಾರ್‌ ಸ್ಪೆಷಲ್

ಕ್ಯಾಮೆರಾ ಸೆನ್ಸಾರ್‌ ಸ್ಪೆಷಲ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್, ಅಲ್ಟ್ರಾ-ವೈಡ್-ಆಂಗಲ್ ಎಫ್ / 2.2 ಲೆನ್ಸ್ ಹೊಂದಿದ್ದು 123- ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 4G ನೆಟ್‌ವರ್ಕ್‌ನಲ್ಲಿ 58 ಗಂಟೆಗಳ ಟಾಕ್‌ಟೈಮ್‌ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ V5.0, ಯುಎಸ್‌ಬಿ ಟೈಪ್-ಸಿ, ಮತ್ತು 3.5mm ಹೆಡ್‌ಫೋನ್‌ ಜ್ಯಾಕ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ ಎಷ್ಟಿರಲಿದೆ.?

ಬೆಲೆ ಮತ್ತು ಲಭ್ಯತೆ ಎಷ್ಟಿರಲಿದೆ.?

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಬೆಲೆಯನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ, ಆದರೆ ಗ್ರಾಹಕ ಸ್ನೇಹಿ ದರದಲ್ಲಿ ಲಾಂಚ್ ಆಗಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಫೋನ್ ಕಪ್ಪು, ಎಲಿಗೆಂಟ್ ಬ್ಲೂ ಮತ್ತು ಟ್ರೆಂಡಿ ಎಮರಾಲ್ಡ್ ಗ್ರೀನ್ ಬಣ್ಣಗಳ ಆಯ್ಕೆ ಹೊಂದಿರಲಿದೆ ಎನ್ನಲಾಗಿದೆ.

Best Mobiles in India

English summary
Samsung Galaxy M12 launch in India will be livestreamed at 12pm (noon).

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X