Home
ಸುದ್ದಿಜಾಲ

ಸಧ್ಯದಲ್ಲೇ ಬರಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ !

ದಕ್ಷಿಣ ಕೋರಿಯಾ ಮೂಲದ ಸ್ಮಾರ್ಟ್‌ಫೋನ್‌ ಧೈತ್ಯ ಸ್ಯಾಮ್‌ಸಂಗ್ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ M ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ ಪರಿಚಯಿಸಿರುವ ಸ್ಯಾಮ್‌ಸಂಗ್‌ ಇದೀಗ ಹೊಸ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಇದೇ ಮಾರ್ಚ್‌ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ಹೊಸ ವರದಿಯೊಂದು ತಿಳಿಸಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಸಂಸ್ಥೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ 12 ಅನ್ನು ಲಾಂಚ್‌ ಮಾಡಲು ವೇದಿಕೆ ಸಿದ್ಧಪಡಿಸಿಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ 11 ರ ಉತ್ತರಾಧಿಕಾರಿಯಾಗಿದೆ. ಇದು ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ 12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು ಟಿಎಫ್‌ಟಿ ಇನ್ಫಿನಿಟಿ-ವಿ ಡಿಸ್‌ಪ್ಲೇ ಆಗಿದ್ದು, 20: 9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿರಲಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ SoC ನಿಂದ ನಿಯಂತ್ರಿಸಲ್ಪಡುತ್ತದೆ, ಇದು ಎಕ್ಸಿನೋಸ್ 850 ಪ್ರೊಸೆಸರ್‌ ಹೊಂದಿರಲಿದೆ ಎಂದು ಹೇಳಲಾಗ್ತಿದೆ. ಜೊತೆಗೆ ಆಂಡ್ರಾಯ್ಡ್ ಆಧಾರಿತ ಒನ್ ಯುಐ ಕೋರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 3GB RAM+32GB, 4GB RAM+64GB ಮತ್ತು 6GB RAM+128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳನ್ನು ಒಳಗೊಂಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ಹಾಟ್‌ಸ್ಪಾಟ್‌, ವೈಫೈ, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಜೊತೆಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಬೆಲೆಯನ್ನು ಸುಮಾರು ರೂ. 12,000, ಇರಲಿದೆ ಎಂದು ಅಂದಾಜಿಸಲಾಗಿದೆ. ಇದು ಯಾವಾಗ ಬಿಡುಗಡೆ ಆಗಲಿದೆ ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Samsung Galaxy M12 is set to launch in India as early as March.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+