ಶೀಘ್ರದಲ್ಲೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ ಲಾಂಚ್‌!

|

ದಕ್ಷಿಣ ಕೋರಿಯಾದ ಜನ್ರಪಿಯ ಸ್ಮಾರ್ಟ್‌ಫೋನ್‌ ಕಂಪೆನಿ ಸ್ಯಾಮ್‌ಸಂಗ್ ಈಗಾಗಲೇ ತನ್ನ ಫೋಲ್ಡ್, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಮತ್ತು ಗ್ಯಾಲಕ್ಸಿ ಎಂ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಆದರೆ ಇದೀಗ ಸ್ಯಾಮ್‌ಸಂಗ್‌ ತನ್ನ ಗ್ಯಾಲಕ್ಸಿ M ಸರಣಿಯಲ್ಲಿ ಮತ್ತೊಂದು ಹೊಸ ಬಜೆಟ್‌ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಲು ಸಕಲ ತಯಾರಿ ನಡೆಸಿದೆ.

ಗ್ಯಾಲಕ್ಸಿ

ಹೌದು, ಸ್ಯಾಮ್‌ಸಂಗ್‌ ಸಂಸ್ಥೆ ತನ್ನ ಹೊಸ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ ಅನ್ನು ಮಾರುಕಟ್ಟೆಗೆ ಪರಿಚಯಿಸಲು ಸಿದ್ದತೆ ನಡೆಸಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ ಬಜೆಟ್‌ ದರದ ಪ್ರೈಸ್‌ಟ್ಯಾಗ್‌ ಹೊಂದಿರಲಿದೆ ಎಂದು ಹೇಳಲಾಗ್ತಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ ಇರಲಿದೆ ಎನ್ನುವ ಸಂಗತಿಗಳನ್ನು ಲೀಕ್ ಮಾಹಿತಿಗಳು ಹೊರಹಾಕಿವೆ.

ಸೆಕೆಂಡರಿ

ಇನ್ನು ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಸೆಕೆಂಡರಿ ಕ್ಯಾಮೆರಾವು 13ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿರಲಿದ್ದು, ತೃತೀಯ ಕ್ಯಾಮೆರಾವು 2ಎಂಪಿ ಸೆನ್ಸಾರ್‌ ವನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಸದ್ಯ ಟ್ರೆಂಡಿಂಗ್‌ನಲ್ಲಿರುವ 6,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದುಕೊಂಡಿರಲಿರುವುದು ಬಹುತೇಕ ಖಚಿತ ಎಂದು ಹೇಳಲಾಗ್ತಿದೆ.

ಸ್ಮಾರ್ಟ್‌ಫೋನ್

ಇದರೊಂದಿಗೆ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಅಧಿಕ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಪ್ಯಾನೆಲ್‌ ಒಳಗೊಂಡಿರಲಿದೆ. ಇದರೊಂದಿಗೆ ಈ ಫೋನ್ ಸ್ನ್ಯಾಪ್‌ಡ್ರಾಗನ್ 850 SoC ಪ್ರೊಸೆಸರ್‌ ಇರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 1೦/11 ಓಎಸ್‌ ಕಾರ್ಯನಿರ್ವಹಿಸುವ ಸಾಧ್ಯತೆಗಳಿವೆ. ಇನ್ನು ಈ ಫೋನ್ 6GB RAM ಹಾಗೂ 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಆಯ್ಕೆ ಹೊಂದಿರಲಿದೆ.

ಪರಿಚಯಿಸಿದೆ

ಸ್ಯಾಮ್‌ಸಂಗ್ ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಇತರೆ ಮೊಬೈಲ್‌ ಬ್ರ್ಯಾಂಡ್‌ಗಳ ಅಬ್ಬರಕ್ಕೆ ಕಡಿವಾಣ ಹಾಕಲು ಬಜೆಟ್‌ ದರದಲ್ಲಿ ಹಲವು ನೂತನ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಅದೇ ಸಾಲಿಗೆ ಬರಲಿರುವ ಈ ಹೊಸ ಗ್ಯಾಲಕ್ಸಿ M12 ಸಹ ಸೇರ್ಪಡೆ ಆಗಲಿದೆ ಎನ್ನಲಾಗಿದೆ. ಲೀಕ್ ಮಾಹಿತಿ ಪ್ರಕಾರ ಈ ಫೋನಿನಲ್ಲಿ ಕ್ಯಾಮೆರಾ ಹಾಗೂ ಬ್ಯಾಟರಿ ಫೀಚರ್ಸ್‌ಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದೇನಿಸುತ್ತದೆ. ಮುಖ್ಯ ಕ್ಯಾಮೆರಾವು 48ಎಂಪಿ ಆಗಿರಲಿದ್ದು, ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಇರಲಿದೆ ಎನ್ನಲಾಗಿದೆ.

Best Mobiles in India

English summary
Samsung Galaxy M12 Tipped to Feature Triple Rear Cameras With 48-Megapixel Primary Sensor.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X