ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಬಿಡುಗಡೆ!..ವಿಶೇಷತೆ ಏನು?
ಸ್ಮಾರ್ಟ್‌ಫೋನ್ ದೈತ್ಯ ಸ್ಯಾಮ್‌ಸಂಗ್ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ತನ್ನ ಫೋಲ್ಡ್, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಮತ್ತು ಗ್ಯಾಲಕ್ಸಿ ಎಂ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಆದರೆ ಇದೀಗ ಸ್ಯಾಮ್‌ಸಂಗ್ ತನ್ನ ಗ್ಯಾಲಕ್ಸಿ M ಸರಣಿಯಲ್ಲಿ ಹೊಸ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಅನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ತನ್ನ M ಸರಣಿಯಲ್ಲಿ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದೆ. ಇದು ಕಳೆದ ವರ್ಷ ಮಾರ್ಚ್‌ನಲ್ಲಿ ಬಿಡುಗಡೆ ಆಗಿದ್ದ, ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್‌ನ ಉತ್ತಾರಾಧಿಕಾರಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ, ವಾಟರ್ ಡ್ರಾಪ್ ಸ್ಟೈಲ್ ಡಿಸ್‌ಪ್ಲೇ, ದಸೈಡ್ ಮೌಂಟೆಡ್ ಫಿಂಗರ್ ಪ್ರಿಂಟ್ ಸೆನ್ಸಾರ್ ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಪರಿಚಯಿಸಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಇದು TFT ಇನ್ಫಿನಿಟಿ-ವಿ-ಡಿಸ್‌ಪ್ಲೇ ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 3GB RAM+32GB, 4GB RAM+64GB ಮತ್ತು 6GB RAM+128GB ವೇರಿಯೆಂಟ್ ಆಯ್ಕೆಯ ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್, ಅಲ್ಟ್ರಾ-ವೈಡ್-ಆಂಗಲ್ ಎಫ್ / 2.2 ಲೆನ್ಸ್ ಹೊಂದಿದ್ದು 123- ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 4G ನೆಟ್‌ವರ್ಕ್‌ನಲ್ಲಿ 58 ಗಂಟೆಗಳ ಟಾಕ್‌ಟೈಮ್ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ V5.0, ಯುಎಸ್‌ಬಿ ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಬೆಲೆಯನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ, ಆದರೂ ಫೋನ್ ಸ್ಯಾಮ್‌ಸಂಗ್ ವಿಯೆಟ್ನಾಂ ಸೈಟ್‌ನಲ್ಲಿ ಆಕರ್ಷಕ ಕಪ್ಪು, Elegant Blue ಮತ್ತು ಟ್ರೆಂಡಿ ಎಮರಾಲ್ಡ್ ಗ್ರೀನ್ ಬಣ್ಣಗಳಲ್ಲಿ ಪಟ್ಟಿಮಾಡಲ್ಪಟ್ಟಿದೆ.


Click it and Unblock the Notifications








