ಅಗ್ಗದ ದರದಲ್ಲಿ ಭಾರತಕ್ಕೆ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್!
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಮೊಬೈಲ್ ತಯಾರಿಕಾ ಕಂಪನಿಯ ತನ್ನ ಬಹುನಿರೀಕ್ಷಿತ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಇಂದು (ಮಾರ್ಚ್.11) ಭಾರತದಲ್ಲಿ ಬಿಡುಗಡೆ ಆಗಿದೆ. ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ನಿರೀಕ್ಷೆಯಂತೆ ಬಜೆಟ್ ಪ್ರೈಸ್ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಹಾಗೆಯೇ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ. ಇದರೊಂದಿಗೆ ಕ್ವಾಡ್ ರಿಯರ್ ಕ್ಯಾಮೆರಾ ಸೆನ್ಸಾರ್ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಎರಡು ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿರುವುದು ಪ್ರಮುಖ ಹೈಲೈಟ್ ಆಗಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ತನ್ನ ಜನಪ್ರಿಯ ಗ್ಯಾಲಕ್ಸಿ M ಸರಣಿಯಲ್ಲಿ ಹೊಸದಾಗಿ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಅನ್ನು ಇಂದು ದೇಶಿಯ ಮಾರುಕಟ್ಟೆಗೆ ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಗ್ಯಾಲಕ್ಸಿ M11 ಸ್ಮಾರ್ಟ್‌ಫೋನ್ ಗಿಂತ ಸಾಕಷ್ಟು ಅಪ್‌ಡೇಟ್ ಫೀಚರ್ಸ್‌ಗಳೊಂದಿಗೆ ಕಾಣಿಸಿಕೊಂಡಿದ್ದು, ತನ್ನ ವರ್ಗದಲ್ಲಿಯೇ ಆಕರ್ಷಕ ಫೀಚರ್ಸ್‌ಗಳೊಂದಿಗೆ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಮುಖ್ಯ ರಿಯರ್ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದ್ದು, ಹಾಗೆಯೇ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸಾಮರ್ಥ್ಯದ ಸೆನ್ಸಾರ್‌ನಲ್ಲಿದೆ. ಜೊತೆಗೆ 64GB ಮತ್ತು 128GB ಆಂತರೀಕ ಸ್ಟೋರೇಜ್ ಆಯ್ಕೆಗಳನ್ನು ಈ ಫೋನ್ ಹೊಂದಿದೆ. ಗ್ರಾಹಕ ಸ್ನೇಹಿ ದರದಲ್ಲಿ ಹಲವು ಇತ್ತೀಚಿನ ಟ್ರೆಂಡಿಂಗ್ ಫೀಚರ್ಸ್‌ಗಳನ್ನು ಒಳಗೊಂಡಿರುವುದು ಗ್ರಾಹಕರು ಈ ಫೋನ್‌ನತ್ತ ತಿರುಗಿ ನೋಡುವಂತೆ ಮಾಡಿದೆ.

ಇನ್ನು ಗ್ಯಾಲಕ್ಸಿ M12 ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯವನ್ನು ಪಡೆದಿರುವುದು ಮತ್ತೊಂದು ವಿಶೇಷ ಆಕರ್ಷಣೆ ಅನಿಸಿದೆ. ಹಾಗೆಯೇ ಅಟ್ರ್ಯಾಕ್ಟಿವ್ ಬ್ಲ್ಯಾಕ್, ಎಲಿಗಂಟ್ ಬ್ಲೂ ಮತ್ತು ಟ್ರೆಂಡಿ ಎಮರ್ಡ್ ಗ್ರೀನ್ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ. ಇದರೊಂದಿಗೆ ಈ ಫೋನ್ TFT ಇನ್ಫಿನಿಟಿ V ಡಿಸ್‌ಪ್ಲೇ ಮಾದರಿಯನ್ನು ಪಡೆದಿದ್ದು, ತನ್ನ ವರ್ಗದಲ್ಲಿಯೇ ಉತ್ತಮ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಕಾಣಿಸಿಕೊಂಡಿದೆ. ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆಯನ್ನು ಸಹ ಪಡೆದಿದೆ. ಹಾಗಾದರೇ ಇನ್ನುಳಿದಂತೆ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಫೀಚರ್ಸ್‌ಗಳೆನು?..ಈ ಫೋನಿನ ಬೆಲೆ ಎಷ್ಟು?..ಫಸ್ಟ್ ಸೇಲ್ ಯಾವಾಗ ಎನ್ನುವ ಮಾಹಿತಿಯನ್ನು ಮುಂದೆ ತಿಳಿಯೋಣ ಬನ್ನಿರಿ.

ಆಕರ್ಷಕ ಡಿಸ್‌ಪ್ಲೇ ರಚನೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಇದು TFT ಇನ್ಫಿನಿಟಿ-ವಿ-ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ ರೀಫ್ರೇಶ್ ರೇಟ್ 90Hz ಆಗಿದೆ. ವಿಡಿಯೋ ವೀಕ್ಷಣೆಗೆ ಹಾಗೂ ಗೇಮಿಂಗ್‌ಗೆ ಪೂರಕವಾಗಿದೆ.
ಪ್ರೊಸೆಸರ್ ಸಾಮರ್ಥ್ಯ ಎಷ್ಟು
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM+64GB ಮತ್ತು 6GB RAM+128GB ವೇರಿಯೆಂಟ್ ಆಯ್ಕೆಯ ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ಬಾಹ್ಯ ಮೆಮೊರಿಯನ್ನು ವಿಸ್ತರಿಸುವ ಅವಕಾಶವನ್ನು ಇದು ಒಳಗೊಂಡಿದೆ.
ಕ್ಯಾಮೆರಾ ಸೆನ್ಸಾರ್ ಸ್ಪೆಷಲ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು f/2.0 ಅಪರ್ಚರ್ ನೊಂದಿಗೆ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾವು f/2.2 ಅಪರ್ಚರ್‌ನೊಂದಿಗೆ 5 ಮೆಗಾಪಿಕ್ಸೆಲ್ ಸೆನ್ಸಾರ್, ಅಲ್ಟ್ರಾ-ವೈಡ್-ಆಂಗಲ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರ್ ಇದ್ದು, f/2.2 ಅಪರ್ಚರ್ ಸಾಮರ್ಥ್ಯವನ್ನು ಒಳಗೊಂಡಿದೆ. ವಾಟರ್‌ಡ್ರಾಪ್ ಸ್ಕೈಲ್ ನಾಚ್ ಇದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 4G ನೆಟ್‌ವರ್ಕ್‌ನಲ್ಲಿ 58 ಗಂಟೆಗಳ ಟಾಕ್‌ಟೈಮ್ ಅನ್ನು ನೀಡಲಿದೆ. ಈ ಫೋನ್ 164.0x75.9x9.7mm ಸುತ್ತಳತೆಯನ್ನು ಪಡೆದಿದ್ದು, ಹಾಗೆಯೇ 221 ಗ್ರಾಂ ತೂಕವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಫೈ 802.11 ಬಿ / ಜಿ / ಎನ್, ಬ್ಲೂಟೂತ್ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ.
ಬೆಲೆ ಎಷ್ಟು, ಆಫರ್ ಹಾಗೂ ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಭಾರತದಲ್ಲಿ ಇಂದು ಬಿಡುಗಡೆ ಆಗಿದೆ. ಗ್ಯಾಲಕ್ಸಿ M12 4 ಜಿಬಿ + 64 ಜಿಬಿ ವೇರಿಯಂಟ್ ಸ್ಟೋರೇಜ್‌ನ ಬೆಲೆಯು 10,999ರೂ. ಆಗಿದೆ. ಹಾಗೆಯೇ 6 ಜಿಬಿ + 128 ಜಿಬಿ ಸ್ಟೋರೇಜ್‌ನ ವೇರಿಯಂಟ್ ಬೆಲೆಯು 13,499ರೂ. ಆಗಿದೆ. ಇನ್ನು ಗ್ಯಾಲಕ್ಸಿ M12 ಫೋನ್ ಅಟ್ರ್ಯಾಕ್ಟಿವ್ ಬ್ಲ್ಯಾಕ್, ಎಲಿಗಂಟ್ ಬ್ಲೂ ಮತ್ತು ಟ್ರೆಂಡಿ ಎಮರ್ಡ್ ಗ್ರೀನ್ ಬಣ್ಣಗಳ ಆಯ್ಕೆಗಳಲ್ಲಿ ದೊರೆಯುತ್ತದೆ. ಅಂದಹಾಗೇ ಇದೇ ಮಾರ್ಚ್ 18 ರಂದು ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಪ್ರಮುಖ ಆನ್‌ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್, ಸ್ಯಾಮ್‌ಸಂಗ್.ಕಾಮ್ ಮೂಲಕ ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಖರೀದಿಗೆ ಲಭ್ಯವಾಗಲಿದೆ. ಐಸಿಐಸಿಐ ಬ್ಯಾಂಕ್ ಕಾರ್ಡ್ ಬಳಸಿ ಅಮೆಜಾನ್ ತಾಣದಲ್ಲಿ ಫೋನ್ ಖರೀದಿಸುವ ಗ್ರಾಹಕರಿಗೆ ಲಾಂಚ್ ಆಫರ್ ಆಗಿ 1,000ರೂ.ಗಳ ಕ್ಯಾಶ್‌ಬ್ಯಾಕ್ ಲಭ್ಯವಾಗಲಿದೆ.


Click it and Unblock the Notifications








