ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 5G ಮತ್ತು ಗ್ಯಾಲಕ್ಸಿ M13 ಲಾಂಚ್‌! ಬೆಲೆ ಎಷ್ಟು?

|

ಮೊಬೈಲ್‌ ಮಾರುಕಟ್ಟೆಯ ದಿಗ್ಗಜ ಕಂಪೆನಿಗಳಲ್ಲಿ ಸ್ಯಾಮ್‌ಸಂಗ್‌ ಕೂಡ ಮುಂಚೂಣಿಯಲ್ಲಿದೆ. ಈಗಾಗಲೇ ತನ್ನ ಗ್ಯಾಲಕ್ಸಿ ಎ, ಗ್ಯಾಲಕ್ಸಿ ಎಂ, ಗ್ಯಾಲಕ್ಸಿ ಎಸ್‌ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇನ್ನು ಸ್ಯಾಮ್‌ಸಂಗ್‌ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಬಜೆಟ್‌, ಮಧ್ಯಮ ಶ್ರೇಣಿ, ಪ್ರೀಮಿಯಂ ಸೇರಿದಂತೆ ಹೈ ಎಂಡ್‌ ಬೆಲೆಯಲ್ಲಿಯೂ ಕೂಡ ಲಭ್ಯವಾಗಲಿವೆ. ಸದ್ಯ ಇದೀಗ ಸ್ಯಾಮ್‌ಸಂಗ್‌ ಕಂಪೆನಿ ಭಾರತದ ಮಾರುಕಟ್ಟೆಯಲ್ಲಿ ಹೊಸ ಗ್ಯಾಲಕ್ಸಿ M13 ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ಗಳು ಬಜೆಟ್‌ ಪ್ರೈಸ್‌ ಟ್ಯಾಗ್‌ ಅನ್ನು ಪಡೆದುಕೊಂಡಿವೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಹೊಸ ಗ್ಯಾಲಕ್ಸಿ M13 5G ಮತ್ತು ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಆಟೋ ಡೇಟಾ ಸ್ವಿಚಿಂಗ್ ಟೆಕ್ನಾಲಜಿಯನ್ನು ಹೊಂದಿವೆ. ಇದಲ್ಲದೆ ಸ್ಯಾಮ್‌ಸಂಗ್‌ನ RAM ಪ್ಲಸ್ ಫೀಚರ್ಸ್‌ ಅನ್ನು ಒಳಗೊಂಡಿವೆ. ಇನ್ನು ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಆದರೆ ಗ್ಯಾಲಕ್ಸಿ M13 ಫೋನ್‌ ಎಕ್ಸಿನೋಸ್‌ 850 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌

ಸ್ಯಾಮ್‌ಸಂಗ್‌ ಪರಿಚಯಿಸಿರುವ ಗ್ಯಾಲಕ್ಸಿ M13 5G ಮತ್ತು ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್‌ಗಳು ವಿಭಿನ್ನ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿವೆ. ಅದರಂತೆ ಗ್ಯಾಲಕ್ಸಿ M13 5G ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಆದರೆ ಗ್ಯಾಲಕ್ಸಿ M13 4G ಮಾದರಿಯು 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ನೀಡಲಿದೆ. ಇದಲ್ಲದೆ ಈ ಎರಡು ಸ್ಮಾರ್ಟ್‌ಫೋನ್‌ಗಳು ವಿಭಿನ್ನ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಹಾಗಾದ್ರೆ ಸ್ಯಾಮ್‌ಸಂಗ್‌ ಕಂಪೆನಿಯ ಹೊಸ ಗ್ಯಾಲಕ್ಸಿ M13 5G ಮತ್ತು ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ ಹಾಗೂ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಗ್ಯಾಲಕ್ಸಿ M13 5G ಡಿಸ್‌ಪ್ಲೇ ಮತ್ತು ಪ್ರೊಸೆಸರ್‌ ಹೇಗಿದೆ?

ಗ್ಯಾಲಕ್ಸಿ M13 5G ಡಿಸ್‌ಪ್ಲೇ ಮತ್ತು ಪ್ರೊಸೆಸರ್‌ ಹೇಗಿದೆ?

ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 400 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಪಡೆದುಕೊಂಡಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಅನ್ನು ಹೊಂದಿದ್ದು, ಗೊರಿಲ್ಲಾ ಗ್ಲಾಸ್‌ 3 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12.0-ಆಧಾರಿತ One UI 4 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಸ್ಟೋರೇಜ್‌ ಸಾಮರ್ಥ್ಯ ಏನಿದೆ? ಕ್ಯಾಮೆರಾ ಎಷ್ಟಿದೆ?

ಸ್ಟೋರೇಜ್‌ ಸಾಮರ್ಥ್ಯ ಏನಿದೆ? ಕ್ಯಾಮೆರಾ ಎಷ್ಟಿದೆ?

ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಸ್ಯಾಮ್‌ಸಂಗ್‌ RAM ಪ್ಲಸ್ ಫೀಚರ್ಸ್‌ ಮೂಲಕ RAM ಅನ್ನು 12GB ವರೆಗೆ ವಿಸ್ತರಿಸಬಹುದು. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಸಾಮರ್ಥ್ಯ ಹಾಗೂ ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಸಾಮರ್ಥ್ಯ ಹಾಗೂ ಇತರೆ ಫೀಚರ್ಸ್‌ಗಳೇನು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಈ ಫೋನ್‌ನಲ್ಲಿ AI ಪವರ್ ಮ್ಯಾನೇಜ್‌ಮೆಂಟ್ ಅನ್ನು ಕೂಡ ನೀಡಲಾಗಿದ್ದು, ನೀವು ಮೂರು ದಿನಗಳವರೆಗೆ ಬಳಸದ ಅಪ್ಲಿಕೇಶನ್‌ಗಳನ್ನು ಸ್ಲಿಪ್‌ಮೋಡ್‌ಗೆ ತಳ್ಳುತ್ತದೆ. ಇದರಿಂದ ನಿಮ್ಮ ಬ್ಯಾಟರಿ ಪವರ್‌ ಇನ್ನಷ್ಟು ಸೇವ್‌ ಆಗಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಆಯ್ಕೆಗಳಲ್ಲಿ ವೈ-ಫೈ, 5 ಜಿ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ.

ಗ್ಯಾಲಕ್ಸಿ M13 ಡಿಸ್‌ಪ್ಲೇ ರಚನೆ ಮತ್ತು ಪ್ರೊಸೆಸರ್‌ ಕಾರ್ಯವೈಖರಿ

ಗ್ಯಾಲಕ್ಸಿ M13 ಡಿಸ್‌ಪ್ಲೇ ರಚನೆ ಮತ್ತು ಪ್ರೊಸೆಸರ್‌ ಕಾರ್ಯವೈಖರಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 480 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ನೀಡಲಿದೆ. ಇದು ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಎಕ್ಸಿನೋಸ್‌ 850 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12.0-ಆಧಾರಿತ ಒನ್‌ UI 4 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಸ್ಟೋರೇಜ್‌ ಎಷ್ಟಿದೆ? ಕ್ಯಾಮೆರಾ ವಿಶೇಷತೆ ಏನು?

ಸ್ಟೋರೇಜ್‌ ಎಷ್ಟಿದೆ? ಕ್ಯಾಮೆರಾ ವಿಶೇಷತೆ ಏನು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದರಲ್ಲಿ ಸ್ಯಾಮ್‌ಸಂಗ್‌ RAM ಪ್ಲಸ್ ಫೀಚರ್ಸ್‌ ಮೂಲಕ RAM ಅನ್ನು 12GB ವರೆಗೆ ವಿಸ್ತರಿಸಬಹುದು. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸ್ಟೋರೇಜ್‌ ಅನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ನೀಡಲಾಗಿದೆ.

ಬ್ಯಾಟರಿ ಸಾಮರ್ಥ್ಯ ಏನು? ಇತರೆ ಫೀಚರ್ಸ್‌ ಯಾವುವು?

ಬ್ಯಾಟರಿ ಸಾಮರ್ಥ್ಯ ಏನು? ಇತರೆ ಫೀಚರ್ಸ್‌ ಯಾವುವು?

ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, 4G LTE ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ. ಈ ಫೋನ್‌ ಕೂಡ AI ಪವರ್ ಮ್ಯಾನೇಜ್‌ಮೆಂಟ್ ಅನ್ನು ಕೂಡ ನೀಡಲಾಗಿದ್ದು, ನೀವು ಮೂರು ದಿನಗಳವರೆಗೆ ಬಳಸದ ಅಪ್ಲಿಕೇಶನ್‌ಗಳನ್ನು ಸ್ಲಿಪ್‌ಮೋಡ್‌ಗೆ ತಳ್ಳುತ್ತದೆ. ಇದರಿಂದ ಬ್ಯಾಟರಿ ಸೇವ್‌ ಆಗಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 13,999ರೂ.ಬೆಲೆಯನ್ನು ಹೊಂದಿದೆ. ಹಾಗೆಯೇ 6GB RAM + 128GB ಸ್ಟೋರೇಜ್ ಆವೃತ್ತಿಗೆ 15,999ರೂ. ಬೆಲೆಯನ್ನು ಒಳಗೊಂಡಿದೆ.
ಇನ್ನು ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 11,999ರೂ.ಬೆಲೆಯನ್ನು ಹೊಂದಿದೆ. ಹಾಗೆಯೇ 6GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 13,999ರೂ.ಬೆಲೆಯನ್ನು ಹೊಂದಿದೆ.
ಈ ಎರಡು ಸ್ಮಾರ್ಟ್‌ಫೋನ್‌ಗಳು ಸ್ಯಾಮ್‌ಸಂಗ್‌.ಕಾಮ್‌ ಮತ್ತು ಅಮೆಜಾನ್‌ ಮೂಲಕ ಜುಲೈ 23 ರಿಂದ ಸೇಲ್‌ ಆಗಲಿದೆ. ಈ ಸ್ಮಾರ್ಟ್‌ಫೋನ್‌ಗಳು ಆಕ್ವಾ ಗ್ರೀನ್, ಮಿಡ್‌ನೈಟ್ ಬ್ಲೂ ಮತ್ತು ಸ್ಟಾರ್‌ಡಸ್ಟ್ ಬ್ರೌನ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

Best Mobiles in India

English summary
Samsung Galaxy M13, Galaxy M13 5G With Auto Data Switching Launched in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X